ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಉಕ್ಕಿನ ನಗರಿ ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆಯನ್ನು ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಘೋಷಣೆ ಮಾಡಿದ್ದಾರೆ.
ತಮ್ಮ ಬಜೆಟ್ ಭಾಷಣದಲ್ಲಿ ಈ ಘೋಷಣೆ ಮಾಡಿರುವ ಅವರು, ಶೀಘ್ರ ನಗರದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಮೀನು ಮಾರುಕಟ್ಟೆಯನ್ನು Fish Market ನಿರ್ಮಾಣ ಮಾಡಲಾಗುತ್ತದೆ ಎಂದಿದ್ದಾರೆ.
Also read: ರಾಜ್ಯ ಬಜೆಟ್ ಮಂಡನೆ | ಬಂಗಾರದ ಮನುಷ್ಯ ಚಿತ್ರದ ಗೀತೆ ಉಲ್ಲೇಖಿಸಿದ ಸಿಎಂ
ಪ್ರಸ್ತುತ ಬಿಎಚ್ ರಸ್ತೆಯ ಹುತ್ತಾ ಕಾಲೋನಿ ಬಳಿಯಲ್ಲಿ ಮೀನು ಮಾರುಕಟ್ಟೆಯಿದ್ದು, ಯಾವುದೇ ರೀತಿಯ ಮೂಲಭೂತ ಸೌಲಭ್ಯಗಳಿಲ್ಲದೇ ನಾರುತ್ತಿದೆ. ಹೀಗಾಗಿ, ನಗರದಲ್ಲಿ ಸುಸಜ್ಜಿತ ಮೀನು ಮಾರುಕಟ್ಟೆ ನಿರ್ಮಾಣ ಮಾಡಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದಲೂ ಇತ್ತು. ಈ ಹಿನ್ನೆಲೆಯಲ್ಲಿ ನಗರದಲ್ಲಿ ಅತ್ಯಾಧುನಿಕ ತಂತ್ರಜ್ಞಾನದಲ್ಲಿ ಮೀನು ಮಾರುಕಟ್ಟೆ ಸ್ಥಾಪನೆ ಮಾಡಲು ಸರ್ಕಾರ ಮುಂದಾಗಿದ್ದು, ಇದಕ್ಕಾಗಿ ಅನುದಾನ ಮೀಸಲು ಇಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post