ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 100ರೂ. ದಾಟಿರುವುದನ್ನು ಖಂಡಿಸಿ ನಗರದಲ್ಲಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಇಂದು ಮುಂಜಾನೆಯೇ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅವರ ನೇತೃತ್ವದಲ್ಲಿ ಬಿ.ಹೆಚ್. ರಸ್ತೆಯಲ್ಲಿರುವ ದೀಪಕ್ ಪೆಟ್ರೋಲ್ ಬಂಕ್ ಎದುರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಪ್ರಸನ್ನಕುಮಾರ್, ಜನರಿಗೆ ಅನುಕೂಲಕರ ಹಾಗೂ ನೆಮ್ಮದಿಯ ಜೀವನ ನೀಡುತ್ತೇವೆ. ತೈಲ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ನಿಯಂತ್ರಿಸುತ್ತೇವೆ ಎಂದು ಆಶ್ವಾಸನೆ ನೀಡಿ, ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬೆಲೆ ಏರಿಕೆಯನ್ನು ತಡೆಯುವಲ್ಲಿ ವಿಫಲವಾಗಿದೆ. ತೈಲ ಬೆಲೆ ಏರಿಕೆಯಿಂದ ಬಡ ಹಾಗೂ ಮಧ್ಯಮ ವರ್ಗದವರು ತತ್ತರಿಸಿಹೋಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕರದ ಆಡಳಿತ ಜನವಿರೋಧಿಯಾಗಿದೆ ಎಂದು ಕಿಡಿಕಾರಿದರು.
ಇನ್ನು ವಿನೋಬನಗರದ ಶ್ರೀರಾಜ್ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ವಿದಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ಹೊಳೆ ಬಸ್ ಸ್ಟಾಪ್ ಪೆಟ್ರೋಲ್ ಬಂಕ್ ಬಳಿ ಪ್ರತಿಭಟನೆ:
ಯುಪಿಎ ಸರ್ಕಾರ ಇದ್ದಾಗ ಪ್ರತಿ ಲೀಟರ್ ಪೆಟ್ರೋಲ್ ಗೆ 75 ಹಾಗೂ ಡೀಸೆಲ್ ಬೆಲೆ 64 ರ ಆಸುಪಾಸಿನಲ್ಲಿತ್ತು .ಆದರೆ ಎನ್ ಡಿಎ ಸರ್ಕಾರ ಬಂದ ನಂತರ ಪೆಟ್ರೋಲ್ ಬೆಲೆ ನೂರರ ಗಡಿ ದಾಟಿದೆ .ಡೀಸೆಲ್ ಬೆಲೆ ಶತಕದ ಅಂಚಿನಲ್ಲಿದ್ದ .ಮೊದಲೇ ಕೋವಿಡ್ ಲಾಕ್ ಡೌನ್ ಸುಳಿಗೆ ಸಿಲುಕಿ ದೈನಂದಿನ ಜೀವನ ನಡೆಸುವುದೇ ಕಷ್ಟಕರವಾಗಿರುವಾಗ ತೈಲ ಬೆಲೆ ಏರಿಕೆಯಿಂದ ಜನರು ದಿಕ್ಕು ತೋಚದಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ತೈಲ ಬೆಲೆ ಏರಿಕೆಯಿಂದಾಗಿ ಹೂಡಿದ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರಿದೆ. ಸರ್ಕಾರ ಸುಳ್ಳು ಆಶ್ವಾಸನೆಗಳನ್ನು ನೀಡಿ ಬಡವರು ಮಧ್ಯಮ ವರ್ಗದವರು ಜೀವಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣ ಮಾಡಿರುವುದು ಖಂಡನೀಯವಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು
ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಚೇತನ್, ಮಾಜಿ ಮಹಾನಗರ ಪಾಲಿಕೆ ಸದಸ್ಯ ಕಾಶಿ ವಿಶ್ವನಾಥ್ , ಯುವ ಮುಖಂಡ ಮಧುಸೂದನ್, ದಕ್ಷಿಣ ಬ್ಲಾಕ್ ಅಧ್ಯಕ್ಷ ವಿನಯ್, ಉತ್ತರ ಬ್ಲಾಕ್ ಉಪಾಧ್ಯಕ್ಷ ಗಿರೀಶ್, ಅಬ್ದುಲ, ಪ್ರಮೋದ್, ಜಫ್ರುಲ್ಲಾ , ಸಂದೇಶ , ಅರ್ಜುನ್ ಉಪಸ್ಥಿತರಿದ್ದರು.
ತಮಟೆ ಚಳುವಳಿ:
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪೆಟ್ರೋಲ್ ದರ 100 ರೂಪಾಯಿ ಏರಿಕೆಯಾಗಿರುವುದು ಖಂಡಿಸಿ- ಇಂದು ನಗರದಲ್ಲಿ ಪೆಟ್ರೋಲ್ ಬಂಕ್ ಮುಂಭಾಗ ಅಚ್ಛೇ ದಿನ್ ಆಯೇಗಾ ಶತಕ ಬಾರಿಸಿದ ನರೇಂದ್ರ ಮೋದಿ ನಾಟೌಟ್ ಆಗದ ನರೇಂದ್ರ ಮೋದಿ ಎಂದು ಕೇಂದ್ರ ಸರಕಾರವನ್ನು ಅಣಕಿಸುವ ಘೋಷಣೆಗಳನ್ನು ಕೂಗಿ ತಮಟೆ ಚಳುವಳಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್ ಪಿ ಗಿರೀಶ್ , ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್ , ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್, ಗ್ರಾಮಂತರ ಅಧ್ಯಕ್ಷ ಈಟಿ ನಿತಿನ್ , ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ . ಎಸ್ ಕುಮಾರೇಶ್, ಸೈಯದ್ ಜಮೀಲ್, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಗಳಾದ ಆರ್ ಕಿರಣ್ , ಟಿವಿ ರಂಜಿತ್, ಪದಾಧಿಕಾರಿಗಳಾದ ಎಂ ರಾಹುಲ್ , ವೆಂಕಟೇಶ್ ಕಲ್ಲೂರು, ಪುಷ್ಪಕ್ ಕುಮಾರ್ ಪವನ್, ರಾಕೇಶ್, ವಿ ಶರತ್, ರಾಹುಲ್ ಎಸ್ ವಿ ಟಿ , ಗೋವಿಂದ ವರ್ಮ, ಪ್ರಜ್ವಲ್, ಇರ್ಫಾನ್, ಶ್ರೀನಿವಾಸ್, ಗೋಪಿ,ರಾಘವೇಂದ್ರ, ಮಂಜುನಾಥ್, ವಿಜಯ್ ಇತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post