No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಾಲಕಾರ್ಮಿಕರ ಪತ್ತೆಗೆ ನಿರಂತರ ತಪಾಸಣೆ ಅಗತ್ಯ : ಡಿಸಿ ಡಾ. ಸೆಲ್ವಮಣಿ

kalpa News by kalpa News
April 14, 2022
in ಶಿವಮೊಗ್ಗ
0
ಬಾಲಕಾರ್ಮಿಕರ ಪತ್ತೆಗೆ ನಿರಂತರ ತಪಾಸಣೆ ಅಗತ್ಯ : ಡಿಸಿ ಡಾ. ಸೆಲ್ವಮಣಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಗರ ಪ್ರದೇಶಗಳಲ್ಲಿ ಮಾತ್ರವಲ್ಲದೆ, ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿರುವ ಬಾಲಕಾರ್ಮಿಕರನ್ನು ಪತ್ತೆ ಹಚ್ಚಲು ನಿರಂತರ ತಪಾಸಣಾ ಕಾರ್ಯವನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ DC Selvamani ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಜಾರಿ ಸಮಿತಿ ಸಭೆಯಲ್ಲಿ ಮಾತನಾಡಿ, ನಗರ ಪ್ರದೇಶಗಳಿಗಿಂತ ಗ್ರಾಮೀಣ ಪ್ರದೇಶಗಳಲ್ಲಿ ಬಾಲಕಾರ್ಮಿರನ್ನು ಕೆಲಸದಲ್ಲಿ ತೊಡಗಿಸಿಕೊಂಡಿರುವ ಸಾಧ್ಯತೆಗಳು ಹೆಚ್ಚಿವೆ. ಅಡಿಕೆ ತೋಟಗಳು, ಇಟ್ಟಿಗೆ ಭಟ್ಟಿಗಳು, ಪೌಲ್ಟ್ರಿ ಫಾರ್ಮ್‍ಗಳು, ಮಂಡಕ್ಕಿ ಭಟ್ಟಿಗಳು ಸೇರಿದಂತೆ ಎಲ್ಲಾ ಕಡೆಗಳಲ್ಲಿ ಸಂಪೂರ್ಣ ಪರಿಶೀಲನೆ ನಡೆಸಿ ವರದಿಯನ್ನು ಸಲ್ಲಿಸಬೇಕು ಎಂದರು.

ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಾಲಕಾರ್ಮಿಕರು ಇಲ್ಲದಿರುವುದರ ಬಗ್ಗೆ ಪಿಡಿಒಗಳು ಮತ್ತು ಸ್ಥಳೀಯ ಸಂಸ್ಥೆ ಅಧಿಕಾರಿಗಳು ಮುಚ್ಚಳಿಕೆ ಪತ್ರವನ್ನು ಸಲ್ಲಿಸಬೇಕು. ತಾಲೂಕು ಮಟ್ಟದಲ್ಲಿ ತಹಶೀಲ್ದಾರ್‌ಗಳು ಸಹ ತಪಾಸಣಾ ಕಾರ್ಯ ನಡೆಸಿ ಬಾಲಕಾರ್ಮಿಕರು ಕಂಡು ಬಂದಲ್ಲಿ ಮಾಲೀಕರ ವಿರುದ್ಧ ಕಠಿಣ ಕ್ರಮಗಳನ್ನು ಜರುಗಿಸಬೇಕು ಎಂದು ಅವರು ಹೇಳಿದರು.

Also read: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ದಾಳವಾಗಿ ಬಳಕೆ, ಕಾಂಗ್ರೆಸ್‍ನವರ ಟೊಳ್ಳು ಬೆದರಿಕೆಗೆ ಅಂಜುವುದಿಲ್ಲ

ಕಳೆದ ವರ್ಷ ಜಿಲ್ಲೆಯಲ್ಲಿ ಬಾಲಕಾರ್ಮಿಕರನ್ನು ಪತ್ತೆ ಹಚ್ಚಲು 638 ದಿಢೀರ್ ತಪಾಸಣೆ ಕೈಗೊಳ್ಳಲಾಗಿದ್ದು, 7ಪ್ರಕರಣಗಳಲ್ಲಿ ಬಾಲಕಾರ್ಮಿಕರನ್ನು ಪತ್ತೆ ಹಚ್ಚಿ ಎಫ್‍ಐಆರ್ ದಾಖಲಿಸಲಾಗಿದೆ. ಕಳೆದ ಸಾಲಿನಲ್ಲಿ ಜಿಲ್ಲೆಯಲ್ಲಿ ಬಾಲಕಾರ್ಮಿಕರ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯಲ್ಲಿ 58 ಅಪಾಯಕಾರಿ ಉದ್ದಿಮೆಗಳು ಹಾಗೂ 11262 ಅಪಾಯಕಾರಿಯಲ್ಲದ ಉದ್ದಿಮೆಗಳನ್ನು ಗುರುತಿಸಲಾಗಿದೆ. ಈ ಎಲ್ಲಾ ಕಡೆ ಬಾಲಕಾರ್ಮಿಕರನ್ನು ತೊಡಗಿಸಲಾಗಿದೆಯೇ ಎಂದು ತಪಾಸಣೆ ಮಾಡಲಾಗಿದೆ ಎಂದು ಬಾಲಕಾರ್ಮಿಕ ಯೋಜನಾಧಿಕಾರಿ ರಘನಾಥ್ ಅವರು ಮಾಹಿತಿ ನೀಡಿದರು.

ದೂರು ನೀಡಿ:
ಜಿಲ್ಲೆಯಲ್ಲಿ ಎಲ್ಲಿಯಾದರೂ ಬಾಲಕಾರ್ಮಿಕರು ಕಂಡು ಬಂದಲ್ಲಿ ಸಾರ್ವಜನಿಕರು 1098 ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಬಹುದಾಗಿದೆ. ಬಾಲಕಾರ್ಮಿಕ ಪದ್ಧತಿಯಿಂದಾಗಿ ಅಂತಹ ಮಕ್ಕಳ ಶೋಷಣೆ, ಲೈಂಗಿಕ ಕಿರುಕುಳ, ಕ್ರಿಮಿನಲ್ ಕೃತ್ಯಗಳಿಗೆ ದಾರಿಯಾಗುತ್ತದೆ. ಬಾಲಕಾರ್ಮಿಕರನ್ನು ಆರಂಭದಲ್ಲಿಯೇ ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಲು ಎಲ್ಲರ ಸಹಕಾರ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಬಾಲಕಾರ್ಮಿಕ ಜಾಗೃತಿ ಭಿತ್ತಿಪತ್ರಿಕೆಯನ್ನು ಜಿಲ್ಲಾಧಿಕಾರಿ ಅವರು ಈ ಸಂದರ್ಭದಲ್ಲಿ ಬಿಡುಗಡೆ ಮಾಡಿದರು. ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಹೊನ್ನಳ್ಳಿ, ಜಿಲ್ಲಾ ಕಾರ್ಮಿಕ ಕಲ್ಯಾಣಾಧಿಕಾರಿ ಸೀಬಿ ರಂಗಯ್ಯ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಲ್ಲಿಕಾರ್ಜುನ್, ತಹಶೀಲ್ದಾರ್‌ಗಳು ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

 

Tags: DC SelvamaniKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಜಿಲ್ಲಾಧಿಕಾರಿ ಡಾ. ಸೆಲ್ವಮಣಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ದಾಳವಾಗಿ ಬಳಕೆ, ಕಾಂಗ್ರೆಸ್‍ನವರ ಟೊಳ್ಳು ಬೆದರಿಕೆಗೆ ಅಂಜುವುದಿಲ್ಲ

Next Post

ಕಳ್ಳನ ಬಂಧನ: 1.77ಲಕ್ಷ ರೂ. ಮೌಲ್ಯದ ಐದು ದ್ವಿಚಕ್ರ ವಾಹನ ವಶ

kalpa News

kalpa News

Next Post
ಕಳ್ಳನ ಬಂಧನ: 1.77ಲಕ್ಷ ರೂ. ಮೌಲ್ಯದ ಐದು ದ್ವಿಚಕ್ರ ವಾಹನ ವಶ

ಕಳ್ಳನ ಬಂಧನ: 1.77ಲಕ್ಷ ರೂ. ಮೌಲ್ಯದ ಐದು ದ್ವಿಚಕ್ರ ವಾಹನ ವಶ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL