ಮುಂಬರುವ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಜಿ.ಕೆ. ಮಿಥುನ್ ಕುಮಾರ್ SP Mithun Kumar ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಶಾಂತಿಯುತವಾಗಿ ಹಬ್ಬ ನಡೆಯಲು ಸಾರ್ವಜನಿಕರು ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು ಎಂದರು.

ಶಾಂತಿಯುತವಾಗಿ ಹಬ್ಬವನ್ನು ಆಚರಿಸುವಲ್ಲಿ ನಿಮ್ಮೆಲ್ಲರ ಸಹಕಾರ ಪ್ರಮುಖವಾಗಿರುತ್ತದೆ. ಇದರಲ್ಲಿ ಮುಖಂಡರುಗಳ ಪಾತ್ರವು ಸಹಾ ಪ್ರಮುಖವಾಗಿದ್ದು, ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸಬೇಕೆಂದು ತಿಳಿಸಿದರು.

Also read: Two-day Re Commerce Expo commence at Bengaluru Palace Grounds
ಸಾರ್ವಜನಿಕವಾಗಿ ಉಪದ್ರವ ನೀಡುವ ಕಿಡಿಗೇಡಿಗಳ ವಿರುದ್ಧ ಪೊಲೀಸ್ ಇಲಾಖೆಯಿಂದ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಶಾಂತಿಗೆ ಧಕ್ಕೆ ಉಂಟು ಮಾಡುವ ಕೆಲಸಕ್ಕೆ ಯಾರು ಮುಂದಾಗಬಾರದು ಎಂದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















