ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಂದು ನೆಹರು ಯುವ ಕೇಂದ್ರ ಹಾಗೂ ರಾಜ್ಯ ನಾಗರಿಕ ರಕ್ಷಣಾ ಸಮಿತಿ ಹಾಗೂ ಸಾಂಸ್ಕೃತಿಕ ಕಲಾ ತಂಡದ ವತಿಯಿಂದ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಜನಪದ ಗೀತೆ, ಬೀದಿ ನಾಟಕದ ಮುಖಾಂತರ ಕೊರೋನಾ ಜಾಗೃತಿ ಮೂಡಿಸಿ, ಮಾಸ್ಕ್ ವಿತರಣೆ ಮಾಡಲಾಯಿತು. ಮಹಾನಗರ ಪಾಲಿಕೆಯ ಮಹಾಪೌರರಾದ ಸುನಿತಾ ಅಣ್ಣಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು


ಈ ಸಂದರ್ಭದಲ್ಲಿ ನೆಹರು ಯುವ ಕೇಂದ್ರದ ಉಲ್ಲಾಸ್, ರಾಜ್ಯ ನಾಗರಿಕ ರಕ್ಷಣಾ ಸಮಿತಿಯ ಅಧ್ಯಕ್ಷೆ ಉಷಾ ಉತ್ತಪ್ಪ, ಪ್ರಧಾನ ಕಾರ್ಯದರ್ಶಿ ಆರ್. ರಾಘವೇಂದ್ರ, ಖಜಾಂಚಿ ಶಿವಮೊಗ್ಗ ವಿನೋದ್, ಅಣ್ಣಪ್ಪ, ಚಂದನ್, ಜ್ಯೋತಿ, ಶ್ರೇಯಸ್, ಸಾಗರ್ ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















