ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೋವಿಡ್-19 ರೂಪಾಂತರಿ ವೈರಸ್ ಒಮಿಕ್ರಾನ್ 3ನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದನ್ನು ನಿಯಂತ್ರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಕಡೆ ಸೋಂಕು ಹರಡದಂತೆ ಕ್ರಮವಹಿಸಲು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ನಡೆಯುವ ಎಲ್ಲಾ ಜಾತ್ರೆ ಹಾಗೂ ಸಂತೆಯನ್ನು ಮುಂದಿನ ಆದೇಶದವರೆಗೆ ನಿಷೇಧಿಸಲಾಗಿದೆ. ಹಾಗೂ ಈ ಸಂಬಂಧ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಗ್ರಂಥಾಲಯ ಸೇವೆ ಸ್ಥಗಿತ:
ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್-19 ರೂಪಾಂತರಿ ವೈರಸ್ ಒಮಿಕ್ರಾನ್ ವೈರಾಣು ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರದ ಆದೇಶದನ್ವಯ ಜ.5 ರಿಂದ 19 ರವರೆಗೆ ವಾರಾಂತ್ಯ ಕಫ್ರ್ಯೂ ವಿಧಿಸಿರುವ ಹಿನ್ನೆಲೆಯಲ್ಲಿ ಶನಿವಾರ ಹಾಗೂ ಭಾನುವಾರ ಗ್ರಂಥಾಲಯಗಳ ಸೇವೆಯನ್ನು ಸ್ಥಗಿತಗೊಳಿಸಿ, ಮುಂದಿನ ಆದೇಶದವರೆಗೆ ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಸಾರ್ವಜನಿಕರಿಗೆ ಗ್ರಂಥಾಲಯ ಸೇವೆಯನ್ನು ಒದಗಿಸಲಾಗುವುದು ಎಂದು ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ತಿಳಿಸಿದ್ದಾರೆ.
ಹುಲಿ-ಸಿಂಹಧಾಮ ವೀಕ್ಷಣೆಗೆ ಅವಕಾಶವಿಲ್ಲ:
ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ವಾರಾಂತ್ಯದಲ್ಲಿ ಕಫ್ರ್ಯೂ ಜಾರಿಯಾಗಿರುತ್ತದೆ. ಆದ್ದರಿಂದ ಜ.08, 09 15 ಮತ್ತು 16 ರಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮ ಪ್ರವಾಸಿಗರ ವೀಕ್ಷಣೆಗೆ ಲಭ್ಯವಿರುವುದಿಲ್ಲ.
ಪ್ರತಿಯಾಗಿ ಜ.11 ಮತ್ತು 18 ರ ಮಂಗಳವಾರಗಳಂದು ಪ್ರವಾಸಿಗರ ವೀಕ್ಷಣೆಗೆ ಲಭ್ಯವಿರುತ್ತದೆ. ಪ್ರವಾಸಿಗರು ಕೋವಿಡ್ ನಿಯಮಾವಳಿಗಳನ್ನು ಅನುಸರಿಸಿ ಸಹಕರಿಸಬೇಕೆಂದು ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post