ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರ ಉತ್ತರ ಮತ್ತು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕೊರೋನಾ ಲಾಕ್‌ಡೌನ್ ಕರ್ಫ್ಯೂ ಇರುವುದರಿಂದ ನಗರದಲ್ಲಿ ಎಲ್ಲಾ ಹೋಟೆಲ್‌ಗಳು ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು ಇಂತಹ ಸಂದರ್ಭದಲ್ಲಿ ನಗರದ ಭಾಗಗಳಲ್ಲಿ ಇರುವ ಬಡವರಿಗೆ ಊಟದ ಪ್ಯಾಕೆಟ್ ಹಾಗೂ ನೀರಿನ ಬಾಟಲ್‌ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ. ಪ್ರವೀಣ್ ಕುಮಾರ್, ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕರ್ಯದರ್ಶಿ ಕೆ.ರಂಗನಾಥ್, ಜಿಲ್ಲಾ ಯುವ ಕಾಂಗ್ರೆಸ್‌ನ ಅಧ್ಯಕ್ಷ ಎಚ್.ಪಿ. ಗಿರೀಶ್, ಯುವ ಕಾಂಗ್ರೆಸ್‌ನ ಬ್ಲಾಕ್ ಅಧ್ಯಕ್ಷರುಗಳಾದ ಬಿ. ಲೋಕೇಶ್, ಎಸ್ ಕುಮರೇಶ್, ಯುವ ಕಾಂಗ್ರೆಸ್ ಮುಖಂಡರಾದ ಆರ್. ಕಿರಣ್ ಪದಾಧಿಕಾರಿಗಳಾದ ಗಗನ್ ಪವನ್, ಮಣಿ, ಪೂರ್ವಿಕ್ ಚಂದನ್ ನಿಹಾರ್, ಇತರರು ಇದ್ದರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















