ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೊರೋನಾ ಪಾಸಿಟಿವ್ ಬಂದಿದೆ ಎಂದು ಹೆದರಿದ ವ್ಯಕ್ತಿಯೋರ್ವ ಭತ್ತದ ಗದ್ದೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಘಟನೆ ಇಂದು ನಗರದಲ್ಲಿ ನಡೆದಿದೆ.

ಗಾಂಧಿ ಬಜಾರ್ ನಿವಾಸಿಯೋರ್ವ ಆರೋಗ್ಯ ತಪಾಸಣೆಗಾಗಿ ಎನ್‌ಹೆಚ್ ಆಸ್ಪತ್ರೆಗೆ ಬಂದಿದ್ದ ವೇಳೆ ಆತನಿಗೆ ಕೊರೋನಾ ಪರೀಕ್ಷೆ ಮಾಡಿದಾಗ ಪಾಸಿಟಿವ್ ವರದಿ ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದಕ್ಕೆ ಹೆದರಿದ ಆತ ಸಿಬ್ಬಂದಿಗಳಿಂದ ತಪ್ಪಿಸಿಕೊಂಡು ಹೋಗಿ ಆಸ್ಪತ್ರೆಯ ಮುಂಭಾಗದಲ್ಲಿದ್ದ ಭತ್ತದ ಗದ್ದೆಯಲ್ಲಿ ಅವಿತು ಕುಳಿತಿದ್ದ ಎನ್ನಲಾಗಿದೆ.

ನಂತರ ಈತನನ್ನು ಪತ್ತೆಹಚ್ಚಿ ಅಂಬ್ಯುಲೆನ್ಸ್ ಮೂಲಕ ಮೆಗ್ಗಾನ್ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















