ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದಾದ್ಯಂತ ಕೊರೋನಾ Corona ಉಪತಳಿ ಸೋಂಕು ಏರಿಕೆಯಾಗುತ್ತಿರುವಂತೆಯೇ, ಜಿಲ್ಲೆಯಲ್ಲೂ ಸಹ ಮೂರು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಮಾಹಿತಿಯ ಅನ್ವಯ, ಜಿಲ್ಲೆಯಲ್ಲಿ ಈವರೆಗೂ ಮೂವರಲ್ಲಿ ಪಾಸಿಟಿವ್ ಪತ್ತೆಯಾಗಿದ್ದು, ಒಬ್ಬರು ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರೆ, ಇನ್ನಿಬ್ಬರು ಹೋಂ ಐಸೋಲೇಶನ್ ಆಗಿದ್ದಾರೆ.

Also read: ಗುಡ್ ನ್ಯೂಸ್ | ಕಮರ್ಷಿಯಲ್ ಸಿಲಿಂಡರ್ ದರದಲ್ಲಿ ಇಳಿಕೆ
ಸೋಂಕು ಪತ್ತೆಯಾಗಿರುವ ಮೂವರಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ ಎಂದು ತಿಳಿದುಬಂದಿದೆ.
ರಾಜ್ಯದಾದ್ಯಂತ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. 30 ಆಕ್ಸಿಜನ್ ಬೆಡ್, 12 ಐಸಿಯು ಬೆಡ್’ಗಳನ್ನು ಸಿದ್ದಪಡಿಸಲಾಗಿದೆ.

ಯಾವುದೇ ರೀತಿಯ ಜ್ವರ, ಶೀತ, ಸುಸ್ತು ಸೇರಿದಂತೆ ಆರೋಗ್ಯ ಸಂಬಂಧಿತ ಸಮಸ್ಯೆಗಳು ಕಾಣಿಸಿಕೊಂಡರೆ ತತಕ್ಷಣವೇ ವೈದ್ಯರನ್ನು ಭೇಟಿಯಾಗಿ ಪರೀಕ್ಷಿಸಿಕೊಳ್ಳಿ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post