ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿರುವ ಜಿಲ್ಲಾ ಗಡಿಯಲ್ಲಿ ಎರಡು ಚೆಕ್ ಪೋಸ್ಟ್ ತೆರೆದು ತಪಾಸಣೆ ನಡೆಸಲಾಗುತ್ತಿದೆ.
ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದೀಚೆಗೆ ಕೊರೋನಾ ಪಾಸಿಟಿವ್ ಪ್ರಕರಣ ಹೆಚ್ಚಾಗುತ್ತಿದ್ದು, ಬೆಂಗಳೂರು ಸೇರಿದಂತೆ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಆಗಮಿಸುತ್ತಿರುವವರಲ್ಲೇ ಹಾಗೂ ಅವರಿಂದಲೇ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ ಎಂಬುದು ಸೋಂಕಿತರ ಟ್ರಾವೆಲ್ ಹಿಸ್ಟರಿಯಿಂದ ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ, ಅಂತಾರಾಜ್ಯ ಹಾಗೂ ಬೆಂಗಳೂರಿನಿಂದ ಆಗಮಿಸುವವರ ತಪಾಸಣೆ ನಡೆಸಿ, ಮಾಹಿತಿ ಪಡೆಯುವ ಸಲುವಾಗಿ ಹಂಚಿನ ಸಿದ್ದಾಪುರ, ಕಾರೇಹಳ್ಳಿ ಬಳಿ ಚೆಕ್ ಪೋಸ್ಟ್ ತೆರೆದು ತಪಾಸಣೆ ನಡೆಸಲಾಗುತ್ತಿದೆ.
ಬೆಂಗಳೂರು ಸೇರಿದಂತೆ ವಿವಿಧ ನಗರಗಳಿಂದ ಬಸ್, ಕಾರು, ಬೈಕ್ ಸೇರಿದಂತೆ ಎಲ್ಲ ರೀತಿಯ ವಾಹನಗಳಲ್ಲಿ ಆಗಮಿಸುವ ಪ್ರತಿಯೊಬ್ಬರನ್ನೂ ತಪಾಸಣೆ ಮಾಡಿ, ಮಾಹಿತಿ ಪಡೆಯಲಾಗುತ್ತಿದೆ.
Get In Touch With Us info@kalpa.news Whatsapp: 9481252093
















