ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ವತಿಯಿಂದ ಇಂದು ಜಿಲ್ಲಾ ಸರ್ಕಾರಿ ನೌಕರ ಸಂಘ ಭವನದಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆಯ ಕೊರೋನಾ ವಾರಿಯರ್ಸ್‌ಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಗೀತಾ, ಸುಭಾಷ್, ಈಶ್ವರ ನಾಯಕ್, ಶಂಕರ್, ಮಂಜುನಾಥ್, ಉದಯ ನವಲೆ, ಟೋನಿ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಆಯನೂರು ಮಂಜುನಾಥ್, ವಿಧಾನಪರಿಷತ್ ಸದಸ್ಯ ರುದ್ರೇಗೌಡರು, ಪ್ರಸನ್ನಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ಆರೋಗ್ಯ ಇಲಾಖೆಯ ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಮಸ ನಂಜುಂಡಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ, ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ. ಗುಡದಪ್ಪ ಕಸಬಿ, ಡಾ. ರಘುನಂದನ್, ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಐ.ಪಿ. ಶಾಂತರಾಜ್, ಜಿಲ್ಲಾ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘದ ಅಧ್ಯಕ್ಷ ವಿ. ಪ್ರಭಾಕರ್, ಮೋಹನ್, ಬೋರಯ್ಯ, ಶಿವಕುಮಾರ್, ರಮೇಶ್ ಮತ್ತಿತರರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















