ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 720 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 5 ಮಂದಿ ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 1555 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 1103 ನೆಗೆಟಿವ್ ಹಾಗೂ 720 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.ಇಂದು 577 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟಾರೆಯಾಗಿ ಇಂದು 5 ಮಂದಿ ಸಾವಿಗೀಡಾಗಿದ್ದಾರೆ.
ಇಂದು 600 ಮಂದಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಕೇರ್ ಸೆಂಟರ್’ನಲ್ಲಿ 325 ಮಂದಿ, ಖಾಸಗಿ ಆಸ್ಪತ್ರೆಯಲ್ಲಿ ಇಂದು 508 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಇಂದು 4835 ಮಂದಿ ಹೋಮ್ ಐಸೋಲೇಶನ್’ನಲ್ಲಿ ಆಗಿದ್ದಾರೆ.ತಾಲೂಕುವಾರು ವಿವರ:
ಶಿವಮೊಗ್ಗ: 209
ಭದ್ರಾವತಿ: 103
ಶಿಕಾರಿಪುರ: 41
ತೀರ್ಥಹಳ್ಳಿ: 61
ಸೊರಬ: 78
ಸಾಗರ: 171
ಹೊಸನಗರ: 31
ಇತರೆ ಜಿಲ್ಲೆ: 26
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post