ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಹಾನಿಗೊಳಗಾದ ಪ್ರದೇಶಗಳಿಗೆ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಳೆಯಿಂದ ನೀರು ನುಗ್ಗಿನ ಮನೆಗಳು ಹಾಗೂ ರಾಜ ಕಾಲುವೆ ಪ್ರದೇಶಕ್ಕೆ ಆಯುಕ್ತರು ಇಂದು ಮುಂಜಾನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ರಾಜ ಕಾಲುವೆ ದುರಸ್ಥಿ ಕೈಗೊಳ್ಳದ ಹಿನ್ನೆಲೆಯಲ್ಲಿ ಸಾರ್ವಜನಿಕರು ತೀವ್ರ ತರಾಟೆಗೆ ತೆಗೆದುಕೊಂಡರು.
ಈ ವೇಳೆ ಮಾತನಾಡಿದ ಆಯುಕ್ತರು, ರಾಜಕಾಲುವೆಯ ಕಾಮಗಾರಿಯನ್ನು ದುರಸ್ತಿ ಕಾರ್ಯವನ್ನು ಶೀಘ್ರದಲ್ಲಿ ಕೈಗೊಳ್ಳುತ್ತೇನೆ. ಮೇ ತಿಂಗಳ ಒಳಗಾಗಿ ಸಂಪೂರ್ಣವಾಗಿ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದರು.

ಆಯುಕ್ತರೊಂದಿಗೆ ಮಾತನಾಡಿದ ಪಾಲಿಕೆ ಸದಸ್ಯೆ ರೇಖಾ ಚಂದ್ರಶೇಖರ್ ಅವರು, ಮಳೆಯಿಂದಾಗಿ ನಷ್ಟಕ್ಕೆ ಒಳಗಾದ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.
ಸಂತ್ರಸ್ತ ಕುಟುಂಬಗಳಿಗೆ ಮಹಾನಗರ ಪಾಲಿಕೆ ವತಿಯಿಂದ ತಿಂಡಿ ವ್ಯವಸ್ಥೆ ಮಾಡಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















