ಶಿವಮೊಗ್ಗ: ಪರಿಸರ ಪ್ರೇಮಿ, ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಪತ್ರಿಕಾ ಛಾಯಾಗ್ರಾಹಕ ಹಾಗೂ ಶಿವಮೊಗ್ಗ ಪಾಲಿಕೆ 11ನೆಯ ವಾರ್ಡ್ ಪಕ್ಷೇತರ ಅಭ್ಯರ್ಥಿ ಶಿವಮೊಗ್ಗ ನಂದನ್ ಮೇಲೆ ನಿನ್ನೆ ರಾತ್ರಿ ಮಾರಣಾಂತಿ ಹಲ್ಲೆ ನಡೆದಿದೆ.
ನಿನ್ನೆ ರಾತ್ರಿ ನಗರದ ಹೊರವಲಯದ ಹರಿಗೆ ಬಳಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಬೈಕ್‌ನಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು ನಂದನ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಪರಾರಿಯಾಗಿದ್ದಾರೆ.
ಇದರಿಂದ ತೀವ್ರ ಗಾಯಗೊಂಡ ನಂದನ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸೊಂಟ ಹಾಗೂ ಕಾಲಿಗೆ ತೀವ್ರ ಪೆಟ್ಟಾಗಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪರಿಸರಾಸಕ್ತ ಸಂಘಟನೆಗಳು, ಇದೊಂದು ಉದ್ದೇಶಪೂರ್ವಕ ವ್ಯವಸ್ಥಿತ ಸಂಚು ಎನ್ನುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಪ್ರಕರಣ ಕುರಿತಂತೆ ಪೊಲೀಸರು ತನಿಖೆ ನಡೆಸಿ, ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಆಗ್ರಹಿಸಿವೆ.
Discussion about this post