No Result
View All Result
Bharatanatyam Of Sukti Performance Sampattu Grace Rhythm copy
English Articles

Grace and Rhythm Mark Sukthi’s Bharatanatyam Performance at Sampattu

by kalpa News
October 19, 2026
0

Kalpa Media House  |  Special Article By Rasikapriya  | Sukthi T.R., a promising young Bharatanatyam dancer, captivated the audience with...

Read moreDetails
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
  • Advertise With Us
  • Grievances
  • About Us
  • Contact Us
Tuesday, October 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಮಹಾನಗರ ಪಾಲಿಕೆಗೆ ಮುತ್ತಿಗೆ | ಈಶ್ವರಪ್ಪ, ಕಾಂತೇಶ್ ಪೊಲೀಸ್ ವಶಕ್ಕೆ

kalpa News by kalpa News
October 27, 2026
in ಶಿವಮೊಗ್ಗ
0
Shivamogga Corporation Protest Eshwarappa Detained copy
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | 

ಆಶ್ರಯ ಯೋಜನೆಯಡಿ ಬಡವರಿಗೆ ಮನೆಗಳನ್ನು ಸಮರ್ಪಕವಾಗಿ ಹಂಚಿಕೆ ಮಾಡಿಲ್ಲ ಹಾಗೂ ಮನೆಗಳ ವಿತರಣೆಯಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ (K.S. Eshwarappa) ಮತ್ತು ಅವರ ಪುತ್ರ ಕಾಂತೇಶ್ ನೇತೃತ್ವದಲ್ಲಿ ರಾಷ್ಟ್ರಭಕ್ತರ ಬಳಗದ ಕಾರ್ಯಕರ್ತರು ಶಿವಮೊಗ್ಗ (Shivamogga) ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಮಹಾನಗರ ಪಾಲಿಕೆಯವರೆಗೆ ಪಾದಯಾತ್ರೆ ನಡೆಸಿದ ಪ್ರತಿಭಟನಾಕಾರರು, ಆಶ್ರಯ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ಶೀಘ್ರವಾಗಿ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು. ಬಳಿಕ ಪಾಲಿಕೆ ಆಯುಕ್ತ ಮಾಯಣ್ಣಗೌಡ ಅವರನ್ನು ಪ್ರತಿಭಟನಾ ಸ್ಥಳಕ್ಕೆ ಕರೆಸಿ, ಮನೆಗಳ ಹಂಚಿಕೆ ವಿಳಂಬದ ಕುರಿತು ಪ್ರಶ್ನಿಸಿದರು.

Shivamogga : 6 ಸಾವಿರ ಮನೆಗಳಲ್ಲಿ 450 ಮಾತ್ರ ಹಂಚಿಕೆ?

ಆಶ್ರಯ ಯೋಜನೆಯಡಿ ಒಟ್ಟು 6,000 ಮನೆಗಳಿದ್ದು, ಈ ಪೈಕಿ ಕೇವಲ 450 ಮನೆಗಳನ್ನು ಮಾತ್ರ ಹಂಚಿಕೆ ಮಾಡಲಾಗಿದೆ. ಉಳಿದ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲು ವಿಳಂಬವಾಗುತ್ತಿರುವುದಕ್ಕೆ ಕಾರಣವೇನು ಎಂದು ರಾಷ್ಟ್ರಭಕ್ತರ ಬಳಗದ ಸದಸ್ಯರು ಪ್ರಶ್ನಿಸಿದರು.PES Shivamogga

ಬಡವರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ರೂಪಿಸಿರುವ ಯೋಜನೆಯ ಮನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಆದರೆ, ಮನೆಗಳ ಹಂಚಿಕೆ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಹೀಗಾಗಿ ಬಾಕಿ ಉಳಿದಿರುವ ಮನೆಗಳ ಹಂಚಿಕೆಗೆ ಸ್ಪಷ್ಟ ಕಾಲಮಿತಿ ನಿಗದಿಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Also Read>> ಶೃಂಗೇರಿ: ಭೀಕರ ಅಪಘಾತ! ಮದುವೆಯಾಗಿ 5 ದಿನಕ್ಕೆ ನವವಿವಾಹಿತ ದಾರುಣ ಸಾವು

ಇದಕ್ಕೆ ಪ್ರತಿಕ್ರಿಯಿಸಿದ ಪಾಲಿಕೆ ಆಯುಕ್ತ ಮಾಯಣ್ಣಗೌಡ, ಕೆಲವು ಫಲಾನುಭವಿಗಳು ಹಣ ಪಾವತಿಸಿಲ್ಲ. ಅಲ್ಲದೆ, ಗುತ್ತಿಗೆದಾರರಿಗೆ ಪಾವತಿಸಬೇಕಾದ ಹಣವೂ ಬಾಕಿ ಉಳಿದಿದೆ ಎಂದು ತಿಳಿಸಿದರು. ಬಾಕಿ ಹಣ ಪಾವತಿಸಿ ಮನೆಗಳ ನಿರ್ಮಾಣ ಹಾಗೂ ಹಂಚಿಕೆ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದು. ಜನವರಿಯಲ್ಲಿ ಹಾಗೂ ಮುಂದಿನ ಆರು ತಿಂಗಳ ಅವಧಿಯಲ್ಲಿ ಉಳಿದ 1,200 ಮನೆಗಳನ್ನು ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಮನೆಗಳ ನಿರ್ಮಾಣ ಕಾಮಗಾರಿ ಈಗಾಗಲೇ ಆರಂಭವಾಗಿದೆ ಎಂದರು.

ನವೆಂಬರ್ 15ರಂದು ಮತ್ತೆ ಸಭೆ

ಆಯುಕ್ತರ ಉತ್ತರದಿಂದ ಸಮಾಧಾನಗೊಳ್ಳದ ರಾಷ್ಟ್ರಭಕ್ತರ ಬಳಗದ ಸದಸ್ಯರು, ಮನೆಗಳ ಹಂಚಿಕೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಸ್ಪಷ್ಟ ಭರವಸೆ ನೀಡಬೇಕು ಎಂದು ಒತ್ತಾಯಿಸಿದರು.

ಮನೆಗಳ ನಿರ್ಮಾಣ ಕಾಮಗಾರಿ ಆರಂಭವಾಗಿದೆ ಎಂದು ಆಯುಕ್ತರು ಹೇಳುತ್ತಿದ್ದರೆ, ಮತ್ತೊಂದೆಡೆ ಸಚಿವ ಮಧು ಬಂಗಾರಪ್ಪ ಅವರು ಗುತ್ತಿಗೆದಾರರು ಓಡಿಹೋಗಿದ್ದಾರೆ ಎಂದು ಹೇಳಿರುವುದಾಗಿ ಪ್ರತಿಭಟನಾಕಾರರು ಉಲ್ಲೇಖಿಸಿದರು. ಹೀಗಾಗಿ ಗೋವಿಂದಾಪುರ ಮತ್ತು ಗೋಪಿಶೆಟ್ಟಿಕೊಪ್ಪ ಪ್ರದೇಶಗಳಲ್ಲಿ ಮನೆಗಳ ನಿರ್ಮಾಣ ಕಾಮಗಾರಿ ನಿಜವಾಗಿಯೂ ಆರಂಭವಾಗಿದೆಯೇ ಎಂಬುದನ್ನು ಪರಿಶೀಲಿಸುವ ಅಗತ್ಯವಿದೆ ಎಂದು ಹೇಳಿದರು.Christ King

ದೀಪಾವಳಿ ಹಬ್ಬದ ಬಳಿಕ ನವೆಂಬರ್ 15ರಂದು ತಮ್ಮ ಮನೆಯಲ್ಲಿ ಸಭೆ ನಡೆಸಿ, ನಂತರ ಸಂಬಂಧಿಸಿದ ಪ್ರದೇಶಗಳಿಗೆ ತೆರಳಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸುವುದಾಗಿ ತಿಳಿಸಿದರು. ಅಂದು ಪಾಲಿಕೆ ಆಯುಕ್ತರು ಮನೆಗಳ ಹಂಚಿಕೆ ಯಾವಾಗ ಪೂರ್ಣಗೊಳ್ಳಲಿದೆ ಎಂಬುದರ ಕುರಿತು ಲಿಖಿತ ಭರವಸೆ ನೀಡಬೇಕು ಎಂದು ಆಗ್ರಹಿಸಿದರು.

ಇಂದಿನ ಪಾಲಿಕೆ ಮುತ್ತಿಗೆ ಸಾಂಕೇತಿಕವಾಗಿದ್ದು, ಇದು ಮುಂದಿನ ಹೋರಾಟದ ಆರಂಭ ಮಾತ್ರ ಎಂದು ರಾಷ್ಟ್ರಭಕ್ತರ ಬಳಗದ ಸದಸ್ಯರು ಎಚ್ಚರಿಕೆ ನೀಡಿದರು.

ಈಶ್ವರಪ್ಪ, ಕಾಂತೇಶ್ ಪೊಲೀಸ್ ವಶಕ್ಕೆ

ಪ್ರತಿಭಟನೆಯ ಬಳಿಕ ರಾಷ್ಟ್ರಭಕ್ತರ ಬಳಗದ ಕಾರ್ಯಕರ್ತರು ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕಿದರು. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಅವರ ಪುತ್ರ ಕಾಂತೇಶ್, ಇ. ವಿಶ್ವಾಸ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.

ಆಶ್ರಯ ಮನೆಗಳ ಹಂಚಿಕೆಯಲ್ಲಿ ಆಗುತ್ತಿರುವ ವಿಳಂಬವನ್ನು ಖಂಡಿಸಿದ ರಾಷ್ಟ್ರಭಕ್ತರ ಬಳಗ, ಅರ್ಹ ಬಡವರಿಗೆ ಮನೆಗಳನ್ನು ಶೀಘ್ರವಾಗಿ ಹಂಚಿಕೆ ಮಾಡಬೇಕು ಹಾಗೂ ಬಾಕಿ ಉಳಿದಿರುವ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsKalahamsa Infotech private limited

Kalpa News Advertising Disclaimer

Tags: Ashraya HouseK S EshwarappaShimoga NewsShivamoggaಆಶ್ರಯ ಯೋಜನೆಕಾಂತೇಶ್ಕೆ.ಎಸ್. ಈಶ್ವರಪ್ಪಮಹಾನಗರ ಪಾಲಿಕೆಶಿವಮೊಗ್ಗ
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಶೃಂಗೇರಿ: ಭೀಕರ ಅಪಘಾತ! ಮದುವೆಯಾಗಿ 5 ದಿನಕ್ಕೆ ನವವಿವಾಹಿತ ದಾರುಣ ಸಾವು

Next Post

ಶಿವಮೊಗ್ಗ | ಅ.30ರಿಂದ ನ.2ರವರೆಗೆ ಕೃಷಿ ಮತ್ತು ತೋಟಗಾರಿಕೆ ಮೇಳ-2026

kalpa News

kalpa News

Next Post
Shivamogga agriculture horiculture fair Oct-30 to Nov-2

ಶಿವಮೊಗ್ಗ | ಅ.30ರಿಂದ ನ.2ರವರೆಗೆ ಕೃಷಿ ಮತ್ತು ತೋಟಗಾರಿಕೆ ಮೇಳ-2026

No Result
View All Result
Bharatanatyam Of Sukti Performance Sampattu Grace Rhythm copy
English Articles

Grace and Rhythm Mark Sukthi’s Bharatanatyam Performance at Sampattu

by kalpa News
October 19, 2026
0

Kalpa Media House  |  Special Article By Rasikapriya  | Sukthi T.R., a promising young Bharatanatyam dancer, captivated the audience with...

Read moreDetails
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL