No Result
View All Result
Amazon Expands Health Coverage for 90,000 Delivery Associates across India
English Articles

Amazon Expands Health Coverage for 90,000 Delivery Associates across India

by ಕಲ್ಪ ನ್ಯೂಸ್
May 12, 2026
0

Kalpa Media House  |  Bengaluru  | • Enhances insurance coverage with Mediclaim up to ₹1.5 lakh, OPD benefits up to...

Read moreDetails
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
  • Advertise With Us
  • Grievances
  • About Us
  • Contact Us
Tuesday, May 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ಆರೋಪ | ನಿಷ್ಪಕ್ಷಪಾತ ತನಿಖೆಗೆ ಜೆಡಿಎಸ್ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 11, 2026
in ಶಿವಮೊಗ್ಗ
0
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ಆರೋಪ | ನಿಷ್ಪಕ್ಷಪಾತ ತನಿಖೆಗೆ ಜೆಡಿಎಸ್ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ #Shivamogga-Bhadravati Urban Development Authority ನಡೆದಿರುವ ಭ್ರಷ್ಟಾಚಾರ, ಸ್ವಜನ ಪಕ್ಷಪಾತದಿಂದಾಗಿ ಸಾರ್ವಜನಿಕ ಸಂಪನ್ಮೂಲ ಲೂಟಿಯಾಗಿರುವ ಕುರಿತು ಸೂಕ್ತ ಹಾಗೂ ನಿಸ್ಪಕ್ಷಪಾತ ತನಿಖೆ ನಡೆಸುವಂತೆ ಕೋರಿ ಜಿಲ್ಲಾ ನಗರ ಜನತಾದಳದಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

20-05-2023ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಪ್ರಸ್ತಕ ದಿನಗಳವರೆಗಿನ ಪ್ರಾಧಿಕಾರದ ಕಾಮಗಾರಿಗಳ ಕುರಿತು ಕೂಡಲೇ ತನಿಖೆ ನಡೆಸಬೇಕು. ಶಿವಮೊಗ್ಗ ನಿವೇಶನ ಆಕಾಂಕ್ಷಿಗಳ ನಿವೇಶನ ಪಡೆಯುವ ಕನಸು ನನಸು ಮಾಡಲು ಅವಳಿ ನಗರಗಳ ಅಭಿವೃದ್ದಿಗಾಗಿ ಕೆಲಸ ಮಾಡಬೇಕಾದ ಪ್ರಾಧಿಕಾರವು ಕಳಪೆ ಕಾಮಗಾರಿ, ಸುಳ್ಳು ಬಿಲ್ಲುಗಳು, ಅವೈಜ್ಞಾನಿಕ ಕೆಲಸಗಳ ಮೂಲಕ ಸಾರ್ವಜನಿಕರ ತೆರಿಗೆ ಹಣವನ್ನು ದುರುಪಯೋಗಪಡಿಸಿದೆ. ಈಗಾಗಲೇ ಪ್ರಾಧಿಕಾರದ ಆಯುಕ್ತರಿಗೆ, ಜಿಲ್ಲಾಧಿಕಾರಿಗಳಿಗೆ ಮತ್ತು ಲೋಕಾಯುಕ್ತರಿಗೆ ಈ ಬಗ್ಗೆ ಇಬ್ಬರು ಗುತ್ತಿಗೆದಾರರು ದೂರು ಸಲ್ಲಿಸಿದ್ದರೂ ಯಾವುದೇ ಸೂಕ್ತ ತನಿಖೆ ನಡೆದಿಲ್ಲ. ಹಿಂದೆ ವಾಜಪೇಯಿ ಬಡಾವಣೆಯ ನಿವೇಶನ ಹಂಚಿಕೆ ಸಂದರ್ಭದಲ್ಲಿ ಅಕ್ರಮಗಳು ನಡೆದಿದ್ದು, ನಿವೃತ್ತ ನ್ಯಾಯಮೂರ್ತಿ ರವೀಂದ್ರನಾಥ್‍ರವರು ನಿವೇಶನ ಹಂಚಿಕೆಯಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ವರದಿ ನೀಡಿದ್ದು, ಲೋಕಾಯುಕ್ತದ ತನಿಖೆಯು ನಡೆದಿತ್ತು. ಇದರಿಂದ ಅರ್ಹ ಅರ್ಜಿದಾರರಿಗೆ ನಿವೇಶನ ಪಡೆದುಕೊಳ್ಳಲು ಇದ್ದ ತೊಂದರೆಯೂ ನಿವಾರಣೆಯಾಗಿತ್ತು.
ಊರುಗಡೂರು ಬಡಾವಣೆ ಸೇರಿದಂತೆ ಪ್ರಾಧಿಕಾರ ನಿರ್ಮಿಸುತ್ತಿರುವ ಬಡಾವಣೆಗಳ ಕಾಮಗಾರಿಯಲ್ಲೂ ಅಕ್ರಮ ನಡೆದಿದ್ದು, ನಿವೇಶನ ಆಕಾಂಕ್ಷಿಗಳಿಗೆ ತೀವ್ರ ತೊಂದರೆಯಾಗಿದೆ. ಮತ್ತು ಬಡಾವಣೆಗಳ ರಸ್ತೆ ನಿರ್ಮಾಣಕ್ಕೆ ಗುತ್ತಿಗೆದಾರ ನಿವೇಶನದ ಜಾಗದಿಂದಲೇ ಮಣ್ಣು ತೆಗೆದು ಬಳಸಿ, ಆ ನಿವೇಶನದ ಗುಂಡಿಗಳಿಗೆ ನಗರದ ಕಸ ತುಂಬುವ ಆಘಾತಕಾರಿ ಕೆಲಸವೂ ಕೂಡ ಬೆಳಕಿಗೆ ಬಂದಿದೆ. ಮತ್ತು ನೂತನ ಬಡಾವಣೆಗಳಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ಬಾಕ್ಸ್ ಚರಂಡಿ ಮತ್ತು ಮೋರಿಗಳು, ಪಾರ್ಕ್ ನಿರ್ಮಾಣದ ಟೆಂಡರ್ ಪ್ರಕ್ರಿಯೆಯಲ್ಲೂ ಕೂಡ ಭ್ರಷ್ಟಾಚಾರ ನಡೆದಿದೆ. ಈ ಎಲ್ಲಾ ಅವ್ಯವಹಾರಗಳ ವಿರುದ್ಧ ಗುತ್ತಿಗೆದಾರರಾದ ಗುರುಸಾಯಿ ಹಾಗೂ ಬಸವರಾಜ್‍ರವರು ಈಗಾಗಲೇ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದು, ಜೊತೆಗೆ ಸಾಕ್ಷಾಧಾರಗಳಿಂದ ಆರೋಪ ಮೇಲ್ನೋಟಕ್ಕೆ ಸಾಬೀತಾಗಿದೆ. ಆದ್ದರಿಂದ ಕೂಡಲೇ ಜಿಲ್ಲಾಡಳಿತ ಕಾಂಗ್ರೆಸ್ ಅವಧಿಯಲ್ಲಿ ನಡೆದ 91ಕ್ಕೂ ಹೆಚ್ಚು ಕಾಮಗಾರಿಗಳ ಬಗ್ಗೆ ಕೂಲಂಕುಷ ತನಿಖೆ ನಡೆಸಬೇಕು. ಈಗ ಬೆಳಕಿಗೆ ಬಂದ 13 ಕಾಮಗಾರಿಗಳನ್ನು ಒಳಗೊಂಡಂತೆ ಈವರೆಗೆ ನಡೆಸಿದ ಎಲ್ಲಾ ಕಾಮಗಾರಿಗಳ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆಕೊಡಿಸಿ, ದುರುಪಯೋಗವಾದ ಹಣವನ್ನು ತಪ್ಪಿತಸ್ಥರಿಂದ ಪ್ರಾಧಿಕಾರಕ್ಕೆ ಮರುಪಾವತಿಸುವ ಸಂಬಂಧ ಕ್ರಮ ಕೈಗೊಳ್ಳಬೇಕೆಂದು ಹಾಗೂ ಇದಕ್ಕೆ ಕಾರಣಕರ್ತರಾದ ಅಧ್ಯಕ್ಷರು ಮತ್ತು ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆ ಕ್ರಮಕೈಗೊಳ್ಳಬೇಕೆಂದು ಶಿವಮೊಗ್ಗ ನಗರ ಜೆಡಿಎಸ್ ಆಗ್ರಹಿಸಿದೆ.

ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಮಾತನಾಡಿ, ಈಗಿನ ಅಧ್ಯಕ್ಷರಾದ ಹೆಚ್.ಎಸ್. ಸುಂದರೇಶ್‍ರವರು ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಕಾಮಗಾರಿಗಳು ನನ್ನ ಕಾಲದಲ್ಲಿ ಆಗಿದ್ದಲ್ಲ, ತನಿಖೆ ನಡೆಯುವುದಕ್ಕೆ ನನ್ನ ಅಭ್ಯಂತರವಿಲ್ಲ ಎಲ್ಲಾ ಅಧ್ಯಕ್ಷರ ಕಾಲದ ಕಾಮಗಾರಿಗಳ ತನಿಖೆ ನಡೆಯಲಿ ಎಂದು ಹೇಳಿದ್ದರು. ಈಗ ಬೆಳಕಿಗೆ ಬಂದ 13 ಕಾಮಗಾರಿಯಲ್ಲಿ 12 ಕಾಮಗಾರಿ ಅವರು ಅಧ್ಯಕ್ಷರಾಗಿದ್ದಾಗಲೇ ನಡೆದಿತ್ತು ಎನ್ನುವುದಕ್ಕೆ ದಾಖಲೆ ಇದೆ. ಅಧ್ಯಕ್ಷರೂ ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕೂಡ ಈ ಹಗರಣದಲ್ಲಿ ಪಾಲ್ಗೊಂಡಿದ್ದಾರೆ ಎಂದು ಈಗಾಗಲೇ ಲೋಕಾಯುಕ್ತಕ್ಕೆ ದಾಖಲೆ ಸಮೇತ ದೂರು ನೀಡಲಾಗಿದೆ. ಆದ್ದರಿಂದ ಜಿಲ್ಲಾಧಿಕಾರಿಗಳು ಮತ್ತು ಸರ್ಕಾರ ಕೂಡಲೇ ತನಿಖೆ ನಡೆಸಿ ಸಾರ್ವಜನಿಕರಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಜೆಡಿಎಸ್ ನಗರಾಧ್ಯಕ್ಷ ದೀಪಕ್‍ಸಿಂಗ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್, ಪ್ರಮುಖರಾದ ನರಸಿಂಹ ಗಂಧದಮನೆ, ಭವಾನಿ ನರಸಿಂಹ, ಗೀತಾಸತೀಶ್, ಸಂಜಯ್ ಕಶ್ಯಪ್, ರಘು ಬಾಲರಾಜ್, ಶಾರದಮ್ಮ, ರವಿ ಕೋಳಿಗದ್ದೆ, ಚಂದ್ರಮತಿ ಹೆಗಡೆ, ಗೋವಿಂದ್‍ರಾಜ್, ತ್ಯಾಗ್‍ರಾಜ್, ಲೋಹಿತ್, ಪ್ರಫುಲ್ಲ, ಲೋಕೇಶ್, ಹೆಚ್.ಎನ್. ಮಹೇಶ್, ಅರುಣ್ ಜಿ.ರಾವ್, ಮೋಹನ್ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamogga-Bhadravati Urban Development AuthorityShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರ
Share201Tweet126Send
Previous Post

ಮಕ್ಕಳ ಅನೈತಿಕ ಸಾಗಾಣಿಕೆ ಅತ್ಯಂತ ನೋವಿನ ಸಂಗತಿ: ನ್ಯಾ. ಸಂತೋಷ್

Next Post

ನಮ್ಮೂರ ಬಳಗ ರಾಷ್ಟ್ರಮಟ್ಟದ ಟಗರು ಕಾಳಗ ಅಂಕಣ ಪೂಜೆ | ಪ್ರಚಾರ ವಾಹನಕ್ಕೆ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಮ್ಮೂರ ಬಳಗ ರಾಷ್ಟ್ರಮಟ್ಟದ ಟಗರು ಕಾಳಗ ಅಂಕಣ ಪೂಜೆ | ಪ್ರಚಾರ ವಾಹನಕ್ಕೆ ಚಾಲನೆ

ನಮ್ಮೂರ ಬಳಗ ರಾಷ್ಟ್ರಮಟ್ಟದ ಟಗರು ಕಾಳಗ ಅಂಕಣ ಪೂಜೆ | ಪ್ರಚಾರ ವಾಹನಕ್ಕೆ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಪ್ರ ನೇರ ಸಾಲ ಯೋಜನೆಗೆ 24 ಕೋಟಿ ರೂ. ಬಿಡುಗಡೆ: ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ವಿಪ್ರ ನೇರ ಸಾಲ ಯೋಜನೆಗೆ 24 ಕೋಟಿ ರೂ. ಬಿಡುಗಡೆ: ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

May 12, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

`ಬಿಎಸ್‍ವೈ ಅಭಿಮಾನೋತ್ಸವ’ಕ್ಕೆ ಅಭೂತಪೂರ್ವ ಬೆಂಬಲ: ಸಂಸದ ರಾಘವೇಂದ್ರ ಅಭಿನಂದನೆ

May 12, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಶಿವಮೊಗ್ಗ | ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿ ಯತ್ನ | ಕಳ್ಳರನ್ನು ಹಿಡಿದು ಹೊಡೆದ ಸಾರ್ವಜನಿಕರು

May 12, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು-ಹಜರತ್ ನಿಜಾಮುದ್ದೀನ್ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

May 12, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL