No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Saturday, May 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡಿಸಿಸಿ ಬ್ಯಾಂಕ್‍ನ ಹುದ್ದೆ ನೇಮಕಾತಿಯಲ್ಲಿ ಭ್ರಷ್ಟಾಚಾರ | ತನಿಖೆ ನಡೆಸಿ | ಆಯನೂರು ಮಂಜುನಾಥ್ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 27, 2024
in ಶಿವಮೊಗ್ಗ
0
ಡಿಸಿಸಿ ಬ್ಯಾಂಕ್‍ನ ಹುದ್ದೆ ನೇಮಕಾತಿಯಲ್ಲಿ ಭ್ರಷ್ಟಾಚಾರ | ತನಿಖೆ ನಡೆಸಿ | ಆಯನೂರು ಮಂಜುನಾಥ್ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಿಜೆಪಿ ಆಡಳಿತಾವಧಿಯಲ್ಲಿ ಡಿಸಿಸಿ ಬ್ಯಾಂಕ್‍ನ ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದ್ದು, ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕು ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ #Ayanuru Manjunath ಆಗ್ರಹಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ನೇತೃತ್ವದಲ್ಲಿ ಡಿಸಿಸಿ ಬ್ಯಾಂಕ್ ನಲ್ಲಿ #DCC Bank ಸುಮಾರು 98 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಈ ನೇಮಕಾತಿಯಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ ನಡೆದಿದೆ. ಒಂದೊಂದು ಹುದ್ದೆಗೂ 45-50 ಲಕ್ಷ ರೂ. ಪಡೆಯಲಾಗಿದೆ. ನಿಯಮಗಳನ್ನು ಉಲ್ಲಂಘಿಸಿ ನೇಮಕ ಮಾಡಿಕೊಳ್ಳಲಾಗಿದೆ. ಅರ್ಹತೆ ಇಲ್ಲದವರಿಗೂ ಕೂಡ ಹುದ್ದೆ ನೀಡಲಾಗಿದೆ. ಕೆಲವು ನಿರ್ದೇಶಕರನ್ನು ಹೊರತುಪಡಿಸಿದರೆ ಆಡಳಿತ ಮಂಡಳಿ ಈ ಭ್ರಷ್ಟಾಚಾರದಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿದರು.
ಪರೀಕ್ಷಾ ಪದ್ಧತಿಯೇ ಸರಿ ಇರಲಿಲ್ಲ. ಲಿಖಿತ ಪರೀಕ್ಷೆಯನ್ನು ಆಡಳಿತ ಮಂಡಳಿಯಲ್ಲಿ ಚರ್ಚಿಸಿ ಯಾವುದಾದರೂ ಶಿಕ್ಷಣ ಸಂಸ್ಥೆಗೆ ನೀಡಬೇಕಿತ್ತು. ಯಾರ ಒಪ್ಪಿಗೆಯೂ ಇಲ್ಲದೇ ಅಧ್ಯಕ್ಷರು ಅಧಿಕಾರಿಗಳೊಂದಿಗೆ ಸೇರಿಕೊಂಡು ಅಕ್ಕಮಹಾದೇವಿ ವಿವಿಗೆ ನೀಡಲಾಗಿತ್ತು. ಅವರು ಒಪ್ಪಿಗೆ ಕೊಡುವ ಮುನ್ನವೇ ಆ ವಿವಿಗೆ 40 ಲಕ್ಷ ರೂ. ಪಾವತಿಸಲಾಗಿದೆ ಎಂದು ದೂರಿದರು.

ಇಡೀ ನೇಮಕ ಪ್ರಕ್ರಿಯೆಯನ್ನೇ ಉಲ್ಲಂಘಿಸಲಾಗಿದೆ. ಲಿಖಿತ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳ ಪ್ರಶ್ನೆ ಪತ್ರಿಕೆಗಳನ್ನು ಕೂಡ ವಾಪಸ್ ಪಡೆಯಲಾಗಿದೆ. ಪರೀಕ್ಷೆಯಲ್ಲಿ ಪಡೆದಿರುವ ಮೆರಿಟ್ ಅಂಕಗಳನ್ನು ಆಡಳಿತ ಮಂಡಳಿಗೆ ಮಂಡಿಸಿರುವುದಿಲ್ಲ. ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮೌಖಿಕ ಸಂದರ್ಶನಕ್ಕೆ ಮಾಹಿತಿಯನ್ನೂ ನೀಡಿಲ್ಲ. ಸಂದರ್ಶನದ ಕರೆ ಪತ್ರ ನೀಡದೇ ದೂರವಾಣಿ ಮೂಲಕ ಕರೆಸಿಕೊಂಡು ಸಂದರ್ಶನ ಮಾಡಲಾಗಿದೆ. ಆದೇಶವನ್ನೂ ಕೂಡ ಅಂಚೆ ಮೂಲಕ ಮಾಡದೇ ಖುದ್ದಾಗಿ ಕರೆಸಿಕೊಂಡು ಮಾಡಲಾಗಿದೆ. ಇವೆಲ್ಲವೂ ನಿಯಮಕ್ಕೆ ವಿರುದ್ಧವಾಗಿವೆ ಎಂದರು.

ನೇಮಕಗೊಂಡ 98 ಉದ್ಯೋಗಿಗಳಿಗೆ ಇನ್ನೂ ಪ್ರೊಬೇಷನರಿ ಇರುವಾಗಲೇ ಅವರಿಗೆ ತಮ್ಮದೇ ಬ್ಯಾಂಕ್‍ನಿಂದ ಸಾಲ ಮಂಜೂರು ಮಾಡಲಾಗಿದೆ. ವಿಚಿತ್ರ ಎಂದರೆ ಈ ಸಾಲ ಏಕ ಕಾಲದಲ್ಲಿ ಬಿಡುಗಡೆಯಾಗಿ ಏಕ ಕಾಲದಲ್ಲೇ ಡ್ರಾ ಕೂಡ ಆಗಿದೆ. ಈ ಹಣ ಪೂರ್ವ ನಿಗದಿಯಂತೆ ಲಂಚ ಕೊಡಲು ಸಾಲ ನೀಡಲಾಗಿದೆ. ಬ್ಯಾಂಕಿನ ಇತಿಹಾಸದಲ್ಲಿ ಲಂಚಕ್ಕಾಗಿ ಸಾಲ ಮಂಜೂರು ಮಾಡಿದ್ದು ಇದೇ ಮೊದಲು. ತನಿಖೆ ಮಾಡಿದರೆ ಇದೆಲ್ಲ ಗೊತ್ತಾಗುತ್ತದೆ. ಕೆಲವರನ್ನು ಹೊರತುಪಡಿಸಿ ಅಧ್ಯಕ್ಷರಿಂದ ಹಿಡಿದು ನಿರ್ದೇಶಕರವರೆಗೂ ಈ ಲಂಚದ ಹಣ ತಲುಪಿರಬಹುದು ಎಂದು ಆರೋಪಿಸಿದರು.
ಇಷ್ಟಕ್ಕೆ ನಿಲ್ಲದ ಈ ಆಡಳಿತ ಮಂಡಳಿ ಆರನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಪರಿಷ್ಕರಿಸಿ ತನ್ನ ನೌಕರರಿಗೆ ನೀಡಿದೆ. ಬಾಕಿ ಹಣವೇ 7.14 ಕೋಟಿ ರೂ. ಆಗುತ್ತದೆ. ಆದರೆ ಈ ಎಲ್ಲಾ ಮೊತ್ತವನ್ನು ನೌಕರರಿಗೆ ನೀಡದೇ ಉಳಿತಾಯ ಖಾತೆಗೆ ವರ್ಗಾಯಿಸಿ ಆ ಉಳಿತಾಯ ಖಾತೆಯಿಂದ ಹಣ ವಾಪಸ್ ಪಡೆದು ಬ್ಯಾಂಕಿನ ಒಕ್ಕೂಟದ ಪದಾಧಿಕಾರಿಗಳ ಮೂಲಕ ಅಂದಿನ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಕೆಲ ನಿರ್ದೇಶಕರಿಗೆ ಹಂಚಲಾಗಿದೆ. ಇದು ನೌಕರರಿಗೆ ಬಗೆದ ದ್ರೋಹವಾಗಿದೆ ಎಂದರು.

ಇದರ ಜೊತೆಗೆ ಜುಲೈ 1, 2021 ರಿಂದ ಮಾರ್ಚ್ 30, 2022ರವರೆಗಿನ ತುಟ್ಟಿಭತ್ಯೆ ಬಾಕಿ ಮೊತ್ತ ಸುಮಾರು 1.06 ಕೋಟಿ ರೂ.ಗಳನ್ನು ಕೂಡ ಮೊದಲು ನೌಕರರ ಉಳಿತಾಯ ಖಾತೆಗೆ ಜಮಾ ಮಾಡಿ ಅದೇ ದಿನ ಉಳಿತಾಯ ಖಾತೆಯಿಂದ ಹಣ ವಾಪಸ್ ಪಡೆದು ಆಡಳಿತ ಮಂಡಳಿಯ ಕೆಲ ನಿರ್ದೇಶಕರಿಗೆ ಮತ್ತು ಅಧ್ಯಕ್ಷರಿಗೆ ಹಂಚಲಾಗಿದೆ. ಹಣದ ವಿಲೇವಾರಿ ಕೂಡ ಒಂದೇ ದಿನ ನಡೆದಿರುವುದು ಅನುಮಾನಕ್ಕೆ ಆಸ್ಪದವಾಗಿದೆ ಎಂದರು.

Also read: Chief Minister Siddaramaiah Visit to Delhi | CM to Meet PM Modi on June 29th

ನೇಮಕಾತಿಗೆ ಸಂಬಂಧಿಸಿದಂತೆ ಆಗಿರುವ ಲೋಪಗಳ ಬಗ್ಗೆ ಸರ್ಕಾರದಿಂದ ಸಹಕಾರ ಉಪನಿಬಂಧಕರಿಗೆ ವಿಚಾರಣಾಧಿಕಾರಿಯನ್ನಾಗಿ ನೇಮಿಸಲಾಗಿತ್ತು. ಈಗ ವಿಚಾರಣಾಧಿಕಾರಿ ವರದಿ ನೀಡಿದ್ದರೂ ಕೂಡ ಯಾವುದೇ ಕ್ರಮ ಕೈಗೊಂಡಿಲ್ಲ. ಮತ್ತು ನ್ಯಾಯಾಲಯದಲ್ಲಿ ಹುದ್ದೆ ವಂಚಿತರು ಕೇಸನ್ನೂ ಕೂಡ ದಾಖಲು ಮಾಡಿದ್ದಾರೆ. ಒಂದು ವೇಳೆ ಹುದ್ದೆ ವಂಚಿತರ ಪರವಾಗಿ ತೀರ್ಪು ಬಂದರೆ ನೇಮಕಾತಿಗಾಗಿ ಲಕ್ಷಾಂತರ ರೂ. ಲಂಚ ನೀಡಿ ಕೆಲಸ ಗಿಟ್ಟಿಸಿಕೊಂಡವರ ಗತಿ ಏನು? ಅವರ ಹಣ ವಾಪಸ್ ಬರುವುದೇ ಎಂದು ಪ್ರಶ್ನೆ ಮಾಡಿದರು.

ನಾಳೆ ಡಿಸಿಸಿ ಬ್ಯಾಂಕ್‍ನ ಆಡಳಿತ ಮಂಡಳಿಯ ಚುನಾವಣೆ ನಡೆಯಲಿದೆ. ಇದಕ್ಕಾಗಿ ಭಾರಿ ಪೈಪೋಟಿ ಕೂಡ ಇದೆ. ಇಲ್ಲಿ ನಡೆದ ಅವ್ಯವಹಾರವನ್ನು ಮುಚ್ಚಿ ಹಾಕಲು ಸಂಸದರು ಮತ್ತು ಕೆಲ ಬಿಜೆಪಿ ಶಾಸಕರು ಪ್ರಯತ್ನಿಸುತ್ತಿದ್ದಾರೆ. ಹಣದ ಹೊಳೆಯನ್ನೇ ಹರಿಸಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನೇ ಗೆಲ್ಲಿಸುವಂತೆ ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ತಾವು ಈ ಕೇಸ್‍ನಲ್ಲಿ ಸಿಕ್ಕಿ ಹಾಕಿಕೊಳ್ಳಬಹುದು ಎಂಬ ಭಯ ಕೂಡ ಅವರಿಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಆರ್. ಪ್ರಸನ್ನಕುಮಾರ್, ಕಲಗೋಡು ರತ್ನಾಕರ್, ಎಸ್.ಟಿ. ಹಾಲಪ್ಪ, ಸಿ.ಎಸ್. ಚಂದ್ರಭೂಪಾಲ್, ಯು. ಶಿವಾನಂದ್, ಶಿ.ಜು. ಪಾಶಾ, ಜಿ.ಡಿ. ಮಂಜುನಾಥ್, ಉದ್ಯೋಗ ವಂಚಿತ ಮಂಜುನಾಥ್ ಡಿ. ಅರಗವಳ್ಳಿ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DCC BankKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಡಿಸಿಸಿ ಬ್ಯಾಂಕ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

Chief Minister Siddaramaiah Visit to Delhi | CM to Meet PM Modi on June 29th

Next Post

ಪದೇ ಪದೇ ಪುಸ್ತಕ ಎತ್ತಿ ತೋರಿಸುವ ಮೂಲಕ ರಾಹುಲ್’ರಿಂದ ಸಂವಿಧಾನಕ್ಕೆ ಅಪಮಾನ: ದತ್ತಾತ್ರಿ ಕಿಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪದೇ ಪದೇ ಪುಸ್ತಕ ಎತ್ತಿ ತೋರಿಸುವ ಮೂಲಕ ರಾಹುಲ್’ರಿಂದ ಸಂವಿಧಾನಕ್ಕೆ ಅಪಮಾನ: ದತ್ತಾತ್ರಿ ಕಿಡಿ

ಪದೇ ಪದೇ ಪುಸ್ತಕ ಎತ್ತಿ ತೋರಿಸುವ ಮೂಲಕ ರಾಹುಲ್'ರಿಂದ ಸಂವಿಧಾನಕ್ಕೆ ಅಪಮಾನ: ದತ್ತಾತ್ರಿ ಕಿಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

May 8, 2026
ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

May 8, 2026
ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

May 8, 2026
SIR & ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಸತ್ಯ | ನಿಜಕ್ಕೂ ಐತಿಹಾಸಿಕ ತೀರ್ಪುಗೆ ಇವೇ ಕಾರಣ

SIR & ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಸತ್ಯ | ನಿಜಕ್ಕೂ ಐತಿಹಾಸಿಕ ತೀರ್ಪುಗೆ ಇವೇ ಕಾರಣ

May 8, 2026
ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

May 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL