No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Saturday, March 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮತದಾನಕ್ಕೆ ಕ್ಷಣಗಣನೆ | ಬೂತ್‌ನತ್ತ ಸಾಗಿದ ಚುನಾವಣಾ ಸಿಬ್ಬಂದಿಗಳು

ಚುನಾವಣೆ ಹಿನ್ನೆಲೆ ಇವುಗಳಿಗೆ ನಿರ್ಬಂಧ | ಮತ ಚಲಾಯಿಸಲು ಬೇಕಾದ ಅಗತ್ಯ ದಾಖಲೆಗಳು ಏನು? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 9, 2023
in ಶಿವಮೊಗ್ಗ
0
ಮತದಾನಕ್ಕೆ ಕ್ಷಣಗಣನೆ | ಬೂತ್‌ನತ್ತ ಸಾಗಿದ ಚುನಾವಣಾ ಸಿಬ್ಬಂದಿಗಳು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರಾಜ್ಯ ವಿಧಾನಸಭಾ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತಿ ದೊಡ್ಡ ಹಬ್ಬವಾದ ಮತದಾನ ಪ್ರಕ್ರಿಯೆ ಆರಂಭಕ್ಕೆ ಈಗಾಗಲೇ ಸಕಲ ಸಿದ್ಧತೆ ನಡೆದಿದ್ದು,  ಮತದಾರರನ್ನು ಓಲೈಸಲು ಕೊನೆಯ ಹಂತದ ಕಸರತ್ತು ನಡೆದಿದೆ.

ಮೇ 10ರ ಬೆಳಗ್ಗೆ 7 ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ. ಸುಗಮವಾಗಿ ಮತದಾನ ನಡೆಯಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಂಡಿದೆ.  ನಿಯೋಜನೆಗೊಂಡಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಯೋಜಿತ ಮತಗಟ್ಟೆಗಳಿಗೆ ತೆರಳಿದರು.
ವಿಧಾನಸಭಾ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಶುರುವಾಗಿದ್ದು, ಮತಗಟ್ಟೆಗೆ ಬೂತ್ ಗಳಿಗೆ ತೆರಳಲು ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಸಿದ್ದವಾಗಿದೆ. ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ.

ಮತಗಟ್ಟೆಗೆ ತೆರಳಲು ಚುನಾವಣಾ ಸಿಬ್ಬಂದಿಗಳು ಸಜ್ಜಾಗಿದ್ದಾರೆ. ಮತದಾನ ಮೇ.10ರ ಬುಧವಾರ ನಡೆಯಲಿದ್ದು, ನಿಯೋಜನೆಗೊಂಡ ಸಿಬ್ಬಂದಿ ಮಂಗಳವಾರ ಮಸ್ಟರಿಂಗ್‌ ಕಾರ್ಯ ಪೂರ್ಣ ಗೊಳಿಸಿ ಮತಗಟ್ಟೆಗಳಿಗೆ ತೆರಳಿದರು. ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ ಆವರಣದಲ್ಲಿ ಇಂದು ಮತಗಟ್ಟೆಗಳ ಮಸ್ಟರಿಂಗ್ ಪ್ರಕ್ರಿಯೆ ನಡೆಯಿತು.

ಬೆಳಿಗ್ಗೆಯಿಂದಲೇ ಚುನಾವಣಾ ಸಿಬ್ಬಂದಿಗಳು  ರಾಷ್ಟ್ರೀಯ ಶಿಕ್ಷಣ ಸಮಿತಿ ಆವರಣದಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಯಂತ್ರ, ವಿವಿ ಪ್ಯಾಟ್, ಇವಿಎಂ ಸೀಲ್ ಮಾಡುವ ಟ್ಯಾಗ್, ಕ್ಯಾಂಡಲ್ ಸೇರಿದಂತೆ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸಾಮಗ್ರಿಗಳನ್ನು ಪಡೆದುಕೊಂಡು, ತಾವು ನಿಯೋಜಿತರಾಗಿರುವ ಮತಗಟ್ಟೆ ಕೇಂದ್ರಗಳತ್ತ ಪ್ರಯಾಣ ಬೆಳೆಸಿದರು.
ತಮಗೆ ಯಾವ ಸ್ಥಳದಲ್ಲಿ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಂಡು ನಂತರ ಇವಿಎಂ ಯಂತ್ರ, ವಿವಿ ಪ್ಯಾಟ್‌ಗಳ ತಾಂತ್ರಿಕ ವಿವರಣೆ ಹಾಗೂ ಪರಿಶೀಲನೆ ನಡೆಸಿದರು. ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗಳಿಗೆ ಮಾಹಿತಿ ನೀಡಲು ವಿಶೇಷ ಡೆಸ್ಕ್‌ಗಳನ್ನು ಸ್ಥಾಪಿಸಲಾಗಿತ್ತು. ಅಲ್ಲಿ ನಿಯೋಜನೆಗೊಂಡಿರುವ ಸ್ಥಳ, ಅದೇ ಸ್ಥಳಕ್ಕೆ ನಿಯೋಜಿತಗೊಂಡಿರುವ ಇನ್ನಿತರ ಸಿಬ್ಬಂದಿಗಳ ವಿವರ ನೀಡಲಾಯಿತು.

ಬಸ್‌ ವ್ಯವಸ್ಥೆ : ತಾಲ್ಲೂಕು ಕೇಂದ್ರಗಳಿಗೆ ತೆರಳಲು ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಬಸ್‌ ವ್ಯವಸ್ಥೆ ಮಾಡಲಾಗಿತ್ತು.  ಮಸ್ಟರಿಂಗ್ ಕೇಂದ್ರದಿಂದ ಮತಗಟ್ಟೆಯವರೆಗೂ ಬಸ್ ಸೌಕರ್ಯ ಕಲ್ಪಿಸಲಾಗಿತ್ತು. ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗಳನ್ನು ಕರೆದುಕೊಂಡು ಹೋಗಲು ಕೆಎಸ್‌ಆರ್‌ಟಿಸಿ ಬಸ್‌ಗಳು ಸಾಲು ಸಾಲಾಗಿ ನಿಂತಿದ್ದವು. ಯಾವ ಕ್ಷೇತ್ರಕ್ಕೆ ಯಾವ ಬಸ್ ಹೋಗುತ್ತದೆ ಎಂಬ ಮಾಹಿತಿ ಕಲೆ ಹಾಕಿ, ಸಿಬ್ಬಂದಿ ಬಸ್ ಹತ್ತಿ ಕರ್ತವ್ಯಕ್ಕೆ ತೆರಳುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು.

ಒಟ್ಟು 8156 ಸಿಬ್ಬಂದಿಗಳನ್ನು ಮತಗಟ್ಟೆಗಳಿಗೆ ಕರೆದೊಯ್ಯಲು ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗ ಗ್ರಾಮಾಂತರಕ್ಕೆ 16 ಬಸ್, ಭದ್ರಾವತಿಗೆ 40, ಶಿವಮೊಗ್ಗ ನಗರಕ್ಕೆ 15, ತೀರ್ಥಹಳ್ಳಿಗೆ 45, ಶಿಕಾರಿಪುರಕ್ಕೆ 43, ಸೊರಬಕ್ಕೆ 36, ಸಾಗರಕ್ಕೆ 31 ಮತ್ತು ಹೊಸನಗರಕ್ಕೆ 14 ಸೇರಿದಂತೆ ಒಟ್ಟು 240 ಬಸ್‍ಗಳನ್ನು ನಿಯೋಜಿಸಲಾಗಿದೆ.
14.72 ಲಕ್ಷ ಮತದಾರರು : ಚುನಾವಣೆಯಲ್ಲಿ ಮತ ಚಲಾಯಿಸಲು ಜಿಲ್ಲೆಯಲ್ಲಿ 14.72 ಲಕ್ಷ ಮಂದಿ ಹೆಸರು ನೋಂದಣಿ ಮಾಡಿಕೊಂಡಿದ್ದರೆ, ಕಳೆದ ಚುನಾವಣೆಯಂತೆ ಈ ಬಾರಿಯೂ ಮಹಿಳಾ ಮತದಾರರ ಸಂಖ್ಯೆಯೇ ಹೆಚ್ಚಿದೆ. ಐದು ಕ್ಷೇತ್ರಗಳಲ್ಲಿ ಪುರುಷರಿಗಿಂತಲೂ ಮಹಿಳಾ ಮತದಾರರೇ ಹೆಚ್ಚಿರುವುದು ವಿಶೇಷ.

ಇದೇ ಮೊದಲ ಭಾರಿ  33,055 ಯುವ ಮತದಾರರು ಮತ ಚಲಾಯಿಸಲಿದ್ದಾರೆ. 32 ತೃತೀಯ ಲಿಂಗಿಗಳು, 7,28,886 ಪುರುಷ ಮತದಾರರು, 7,43,713 ಮಹಿಳಾ ಮತದಾರರು ಸೇರಿದಂತೆ ಒಟ್ಟು 14,72,631 ಮಂದಿ ಮತದಾರರು ಪಟ್ಟಿಯಲ್ಲಿದ್ದಾರೆ.

ಮತದಾನದ ದಿನದಂದು ಮತಗಟ್ಟೆಯ 200 ಮೀಟರ್ ವ್ಯಾಪ್ತಿಯಲ್ಲಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಮಾಡುವಂತಿಲ್ಲ. ಗುಂಪು ಸೇರಿದಂತೆ ಆದೇಶ ಹೊರಡಿಸಲಾಗಿದೆ. ಪ್ರತಿ ಮತಗಟ್ಟೆಗೂ ಭದ್ರತಾ ಸಿಬ್ಬಂದಿಯನ್ನು ಯೋಜಿಸಲಾಗಿದೆ.

ಜಿಲ್ಲೆಯಲ್ಲಿ 1,774 ಮತಗಟ್ಟೆಗಳನ್ನು ಹಿಂದಿನ ಚುನಾವಣೆಯಲ್ಲಿ ಗುರುತಿಸಲಾಗಿತ್ತು. 1,400 ಮತದಾರರು ಇರುವ ಕಡೆಗಳಲ್ಲಿ ಹೆಚ್ಚುವರಿಯಾಗಿ ಒಂದು ಮತಗಟ್ಟೆ ತೆರೆಯುವಂತೆ ಚುನಾವಣಾ ಆಯೋಗ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ 8 ಮತಗಟ್ಟೆ ತೆರೆಯಲಾಗಿದೆ. ಇದರೊಂದಿಗೆ ಮತಗಟ್ಟೆ ಸಂಖ್ಯೆ 1,7824 ಏರಿಕೆಯಾಗಿದೆ.

http://kalpa.news/wp-content/uploads/2023/05/Jain-Public-School.mp4

ಮತ ಚಲಾಯಿಸಲು ಬೇಕಾದ ಅಗತ್ಯ ದಾಖಲೆ :
ಮತದಾರರ ಭಾವಚಿತ್ರ ಚೀಟಿ ಮತದಾನ ಮಾಡಲು ಅಗತ್ಯ ದಾಖಲೆಯಾಗಿದೆ. ಇದು ಇಲ್ಲದೆ ಇದ್ದರೆ, ಆಧಾರ್‌ ಕಾರ್ಡ್, ನರೇಗಾ ಉದ್ಯೋಗ ಗುರುತಿನ ಚೀಟಿ, ಅಂಚೆ ಕಚೇರಿ ಮತ್ತು ಬ್ಯಾಂಕ್‌ಗಳಲ್ಲಿ ನೀಡಿರುವ ಭಾವಚಿತ್ರ ಉಳ್ಳ ಪಾಸ್ ಪುಸ್ತಕ, ಕಾರ್ಮಿಕ ಇಲಾಖೆಯಿಂದ ನೀಡಿರುವ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ್, ಆರ್‌ ಜಿ ಐ ಮತ್ತು ಎನ್‌ಪಿಆರ್‌ ಮೂಲ ನೀಡಿರುವ ಸ್ಮಾರ್ಟ್ ಕಾರ್ಡ್, ಭಾರತದ ಪಾಸ್‌ಪೋರ್ಟ್, ಭಾವಚಿತ್ರ ಇರುವ ಪಿಂಚಣಿ ಕಾರ್ಡ್, ವಿಶಿಷ್ಠ ಅಂಗವೈಕಲ್ಯ ಪಾಸ್ ಇದ್ದರೂ ಸಾಕಾಗುತ್ತದೆ.

ಮದ್ಯ ಮಾರಾಟ ನಿಷೇಧ:
ಮೇ 8ರ ಸಂಜೆ 6ರಿಂದ ಮೇ 10 ರ ಮಧ್ಯರಾತ್ರಿ 12 ಗಂಟೆವರೆಗೆ ಎಲ್ಲ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ಮಳಿಗೆಗಳಲ್ಲಿ ಮದ್ಯ ಮಾರಾಟ ಮತ್ತು ಪೂರೈಕೆ ನಿಷೇಧಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು  ಆದೇಶ ಹೊರಡಿಸಿದ್ದಾರೆ.

ಅದೇ ರೀತಿ, ಮತ ಎಣಿಕೆ ದಿನವೂ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಮೇ 13ರಂದು ಬೆಳಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆವರೆಗೆ ಮದ್ಯದಂಗಡಿಗಳು ಬಂದ್‌ ಆಗಲಿವೆ.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

 

 

 

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet123Send
Previous Post

ಬಳ್ಳಾರಿ | ವ್ಯವಸ್ಥಿತ ಮಸ್ಟರಿಂಗ್ ಕಾರ್ಯ: ಮತಗಟ್ಟೆಗಳತ್ತ ಹೆಜ್ಜೆ ಹಾಕಿದ ಸಿಬ್ಬಂದಿ

Next Post

ಬಳ್ಳಾರಿ ನಗರ: ವಯೋವೃದ್ಧರು, ವಿಕಲಚೇತನರಿಗೆ ಮತದಾನ ಮಾಡಲು ವಾಹನ ವ್ಯವಸ್ಥೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚುನಾವಣೆ ಘೋಷಣೆ: ಶಿವಮೊಗ್ಗ ಜಿಲ್ಲೆ ಎಷ್ಟು ಮತದಾರರಿದ್ದಾರೆ? ಎಷ್ಟು ಮತಗಟ್ಟೆಗಳಿವೆ?

ಬಳ್ಳಾರಿ ನಗರ: ವಯೋವೃದ್ಧರು, ವಿಕಲಚೇತನರಿಗೆ ಮತದಾನ ಮಾಡಲು ವಾಹನ ವ್ಯವಸ್ಥೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

March 27, 2026
ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

March 27, 2026
ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

March 27, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 27, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

SSLC ಪರೀಕ್ಷೆ ಅಂತಿಮ ಅಂಕ ಕುರಿತು ಶಿಕ್ಷಣ ಸಚಿವರ ಬಿಗ್ ಸ್ಟೇಟ್ಮೆಂಟ್

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL