ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೋವಿಡ್-19 ಮಹಾಮಾರಿಯಿಂದ ತತ್ತರಿಸಿರುವ ರಾಜ್ಯಕ್ಕೆ ನೆರವಾಗಲು ಜಿಲ್ಲೆಯ ನಿಗಮ ಮಂಡಳಿಗಳ ಪ್ರಮುಖರು ಇಂದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದರು.
ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ, ಆರ್ಯ ವೈಶ್ಯ ಸಮಾಜ ಅಭಿವೃದ್ದಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ದಿ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ ಹಾಗೂ ಅರಣ್ಯ ಅಭಿವೃದ್ದಿ ನಿಗಮದ ಉಪಾಧ್ಯಕ್ಷ ರೇವಣಪ್ಪ ಕೊಳಗಿ ಅವರು ಒಟ್ಟಾಗಿ ಸೇರಿ ಇಂದು ಜಿಲ್ಲಾಧಿಕಾರಿ ಶಿವಕುಮಾರ್ ಅವರನ್ನು ಭೇಟಿ ಮಾಡಿ ತಮ್ಮ ಒಂದು ತಿಂಗಳ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ಸಮರ್ಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post