ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ವಾರಾಂತ್ಯದಲ್ಲಿ ಶ್ರೀ ಕ್ಷೇತ್ರ ಸಿಗಂಧೂರು ಚೌಡೇಶ್ವರಿ ದೇಗುಲಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಧರ್ಮದರ್ಶಿ ಡಾ.ಎಸ್.ರಾಮಪ್ಪ ಹೇಳಿದ್ದಾರೆ.
ಕೋವಿಡ್ ನಿಯಂತ್ರಣದ ಉದ್ದೇಶದಿಂದ ಜಿಲ್ಲಾಡಳಿತ, ಪ್ರವಾಸಿ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿರುವ ಕಾರಣ ಶ್ರೀಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಹಾಗೂ ಭಕ್ತರ ಸುರಕ್ಷತೆಯಿಂದ ಈ ನಿರ್ಧಾರ ಕೈಗೊಂಡಿದ್ದು, ಭಕ್ತ ಜನರು ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಅದೇ ರೀತಿ ಆಗಸ್ಟ್ 6 ರಿಂದ 13ರವರೆಗೆ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು ಉಳಿದ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post