No Result
View All Result
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?
English Articles

ILCAD 2026 Observed in Mysuru Division; SWR Promotes Level Crossing Safety

by ಕಲ್ಪ ನ್ಯೂಸ್
June 9, 2026
0

Kalpa Media House  |  Mysuru (Karnataka) | The Mysuru Division of South Western Railway observed International Level Crossing Awareness Day...

Read moreDetails
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
  • Advertise With Us
  • Grievances
  • About Us
  • Contact Us
Tuesday, June 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೋವಿಡ್ ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ : ತಜ್ಞ ವೈದ್ಯರ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 20, 2022
in ಶಿವಮೊಗ್ಗ
0
ಕೋವಿಡ್ ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ : ತಜ್ಞ ವೈದ್ಯರ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕೋವಿಡ್ ಮೂರನೇ ಅಲೆಯಲ್ಲಿ ಹಲವೆಡೆ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದರೂ, ಆತಂಕಪಡದೇ ಶಾಲಾ ಕಾಲೇಜುಗಳನ್ನು ಎಂದಿನಂತೆ ಮುಂದುವರೆಸುವುದು ಉತ್ತಮ ಎಂದು ಗುರುವಾರ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕೋವಿಡ್ ತಜ್ಞರ ಸಭೆಯಲ್ಲಿ ತಜ್ಞ ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.

ಮಕ್ಕಳಿಗೆ ಕೋವಿಡ್ ಪಾಸಿಟಿವ್ ಬಂದರೆ ಗಾಬರಿಗೊಳ್ಳುವ ಅಗತ್ಯವಿಲ್ಲ. ಮೂರನೇ ಅಲೆಯಲ್ಲಿ ಕೋವಿಡ್ ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ. ಕೋವಿಡ್ ಪಾಸಿಟಿವ್ ಮಕ್ಕಳನ್ನು ಮನೆಯಲ್ಲಿಯೇ ಐಸೋಲೇಷನ್ ಮಾಡಿಸಿ ಶಾಲಾ ಕಾಲೇಜುಗಳನ್ನು ನಡೆಸುವುದು ಉತ್ತಮ. ಪ್ರತಿ ಶಾಲಾ ಕಾಲೇಜುಗಳಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು. ರೋಗ ಲಕ್ಷಣವಿರುವ ಮಕ್ಕಳನ್ನು ಮನೆಗೆ ಕಳುಹಿಸಿ ಅವರ ಆರೋಗ್ಯದ ಮೇಲೆ ನಿಗಾ ಇರಿಸಬೇಕು ಎಂದು ತಜ್ಞ ವೈದ್ಯರು ಸಲಹೆ ನೀಡಿದರು.

ಅಂಕಿಅಂಶಗಳನ್ನು ಗಮನಿಸಿದರೆ ಕೋವಿಡ್ ಮೂರನೇ ಅಲೆಯಲ್ಲಿ ಪಾಸಿಟಿವ್ ಆಗಿ ಆಸ್ಪತ್ರೆಗೆ ದಾಖಲಾಗಿರುವವರ ಪ್ರಮಾಣ ಅತಿ ಕಡಿಮೆ ಇದೆ. ಪ್ರಸ್ತುತ ಜಿಲ್ಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ 63 ಜನರ ಪೈಕಿ ಇಬ್ಬರಿಗೆ ಮಾತ್ರ ಆಕ್ಸಿಜನ್ ಒದಗಿಸುವ ಅಗತ್ಯ ಬಿದ್ದಿದೆ. ಈಗಾಗಲೇ ಬೇರೆ ರೋಗಗಳನ್ನು ಹೊಂದಿರುವ ಕೋವಿಡ್ ಪಾಸಿಟಿವ್ ವ್ಯಕ್ತಿಗಳನ್ನು ಆಸ್ಪತ್ರೆಗೆ ದಾಖಲಿಸುವ ಅಗತ್ಯ ಬಿದ್ದಿದೆ. ಜಿಲ್ಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಿದರೆ ಬಹುತೇಕ ಮಂದಿಯನ್ನು ಆಸ್ಪತ್ರೆಯ ಬದಲಿಗೆ ಅಲ್ಲಿಗೆ ಸೇರಿಸಬಹುದಾಗಿದೆ ಎಂದು ತಜ್ಞರು ಸಲಹೆ ನೀಡಿದರು.

ಲಸಿಕೆ ಪ್ರತಿಯೊಬ್ಬರೂ ಹಾಕಬೇಕು:
ಮೂರನೇ ಅಲೆಯಲ್ಲಿ ಕೋವಿಡ್ ಪಾಸಿಟಿವ್ ವ್ಯಕ್ತಿಗಳ ಅಂಕಿಅಂಶಗಳನ್ನು ಗಮನಿಸಿದಾಗ, ಎರಡು ಲಸಿಕೆ ಹಾಕಿಸಿದವರ ಮೇಲೆ ಕೋವಿಡ್ ಸಾಮಾನ್ಯ ಪ್ರಭಾವ ಬೀರಿದ್ದು ಬಹುತೇಕ ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ. ಎರಡು ಲಸಿಕೆ ಹಾಕದ 17ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಲ್ಲಿ ಕೋವಿಡ್ ರೋಗ ಲಕ್ಷಣಗಳು ಹೆಚ್ಚಾಗಿವೆ. ಈಗಾಗಲೇ ಜಿಲ್ಲೆಯಲ್ಲಿ ಶೇ.99 ಮಂದಿ ಪ್ರಥಮ ಡೋಸ್ ಹಾಗೂ ಶೇ.84ರಷ್ಟು ಮಂದಿ ಎರಡು ಡೋಸ್ ಲಸಿಕೆ ಪಡೆದಿದ್ದಾರೆ. ಪ್ರತಿಯೊಬ್ಬರೂ ಲಸಿಕೆಯನ್ನು ಪಡೆಯುವ ಮೂಲಕ ಕೋವಿಡ್ ಪರಿಣಾಮಕಾರಿಯಾಗಿ ಎದುರಿಸಲು ಸಾಧ್ಯವಿದೆ ಎಂಬುವುದು ಇದರಿಂದ ಸ್ಪಷ್ಟ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಹೇಳಿದರು.

ಒಂದೆರಡು ದಿನಗಳಲ್ಲಿ ಅಗತ್ಯವಿರುವ ಕೋವಿಡ್ ಕೇರ್ ಸೆಂಟರ್‌ಗಳನ್ನು ಪ್ರಾರಂಭಿಸಲಾಗುವುದು. ಕೋವಿಡ್ ಪಾಸಿಟಿವ್ ವ್ಯಕ್ತಿಗಳಿಗೆ ಟೆಲಿಫೋನ್ ಮೂಲಕ ಟ್ರಯಾಜ್ ಮಾಡಲು ವ್ಯವಸ್ಥೆ ಮಾಡಲಾಗುವುದು. ಕೋವಿಡ್ ಪಾಸಿಟಿವ್ ವ್ಯಕ್ತಿಗಳಿಗೆ ಅಗತ್ಯ ಔಷಧಿಗಳನ್ನು ಒಳಗೊಂಡ ಕಿಟ್ ನೀಡಲಾಗುತ್ತಿದೆ. ಶಾಲಾ ಕಾಲೇಜುಗಳಲ್ಲಿ ಸಹ ಕೋವಿಡ್ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗುವುದು. ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಸಭೆಯಲ್ಲಿ ಮಕ್ಕಳ ತಜ್ಞರಾದ ಡಾ.ಧನಂಜಯ ಸರ್ಜಿ, ಡಾ. ಶ್ರೀಕಾಂತ್ ಹೆಗ್ಡೆ, ಡಾ. ಮಲ್ಲಿಕಾರ್ಜುನ ಕೊಪ್ಪದ್, ಡಾ. ಪಾಟೀಲ್, ಡಾ. ಸತೀಶ್ಚಂದ್ರ, ಡಾ. ನಾಗರಾಜ ನಾಯಕ್, ಡಾ. ಮಲ್ಲಪ್ಪ, ಸಿಮ್ಸ್ ನಿರ್ದೇಶಕ ಡಾ. ಸಿದ್ದಪ್ಪ, ಡಾ.ಕಿರಣ್ ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CovidKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಕೋವಿಡ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share207Tweet123Send
Previous Post

Central cabinet approves infusion of Rs.1,500 crore in IREDA

Next Post

ಹೊಳೆಹೊನ್ನೂರು ಪೊಲೀಸರ ಕಾರ್ಯಾಚರಣೆ: ಮಾಲು ಸಹಿತ ನಾಲ್ವರು ಮನೆಗಳ್ಳರ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೊಳೆಹೊನ್ನೂರು ಪೊಲೀಸರ ಕಾರ್ಯಾಚರಣೆ: ಮಾಲು ಸಹಿತ ನಾಲ್ವರು ಮನೆಗಳ್ಳರ ಬಂಧನ

ಹೊಳೆಹೊನ್ನೂರು ಪೊಲೀಸರ ಕಾರ್ಯಾಚರಣೆ: ಮಾಲು ಸಹಿತ ನಾಲ್ವರು ಮನೆಗಳ್ಳರ ಬಂಧನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ನಮ್ಮ ವಿರುದ್ಧ ಸುಳ್ಳು ಆರೋಪ | ಪಾಕ್ ವಿರುದ್ಧ ಭಾರತ ಚಾಟಿ

ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ನಮ್ಮ ವಿರುದ್ಧ ಸುಳ್ಳು ಆರೋಪ | ಪಾಕ್ ವಿರುದ್ಧ ಭಾರತ ಚಾಟಿ

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

ಬಾಗಲಕೋಟೆ : ನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಮಗು ಸಾವು, ಉಪ್ಪಿನಲ್ಲಿಟ್ಟು ಬದುಕಿಸಲು ಪೋಷಕರ ಯತ್ನ

June 9, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಯಶವಂತಪುರ–ವಿಜಯಪುರ ವಿಶೇಷ ರೈಲು ವಾರದಲ್ಲಿ ಎರಡು ಬಾರಿ ಸಂಚಾರ; ಗದಗ ಬೈಪಾಸ್ ನಿಲುಗಡೆ ರದ್ದು

June 9, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ರದ್ದು ಮಾಡಿದ್ದ ರೈಲು ಸೇವೆಗಳು ಪುನರಾರಂಭ – ಪ್ರಯಾಣಿಕರಿಗೆ ಮಹತ್ವದ ಮಾಹಿತಿ

June 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL