ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರದ ಜೆಎನ್‌ಎನ್‌ಸಿಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಘಟಕದ ಸಂಯುಕ್ತಾಶ್ರಯದಲ್ಲಿ ಕೋವಿಡ್ ಲಸಿಕೆ ಅಭಿಯಾನ ಏರ್ಪಡಿಸಲಾಗಿತ್ತು.
ಕಾಲೇಜಿನ ಸಿಬ್ಬಂದಿಗಳು ಸೇರಿದಂತೆ 45 ವರ್ಷ ಮೇಲ್ಪಟ್ಟ ಸುಮಾರು 100ಕ್ಕೂ ಹೆಚ್ಚು ಜನರು ಲಸಿಕೆ ಪಡೆದರು. ಕೋವಿಡ್-19 ಪಿಡುಗಿನ ಎರಡನೇ ಅಲೆ ತಡೆಗಟ್ಟಲು ಹಾಗೂ ಜ್ಯೋತಿಭಾ ಪೂಲೆ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಕರ್ನಾಟಕ ಸರ್ಕಾರ ಮತ್ತು ಭಾರತ ಆಶಯದಂತೆ ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ನಿರ್ದೇಶನದಂತೆ ಈ ಅಭಿಯಾನ ಏರ್ಪಡಿಸಲಾಗಿತ್ತು.
ಜೆಎನ್‌ಎನ್‌ಸಿಇ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಪಿ. ಮಂಜುನಾಥ, ಎಂ.ಬಿ.ಎ ವಿಭಾಗದ ಮುಖ್ಯಸ್ಥರಾದ ಡಾ.ಶ್ರೀಕಾಂತ್, ಇನ್ಫಾರ್ಮೇಶನ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ಸಂಜೀವ್ ಕುಂಟೆ, ಎಂ.ಸಿ.ಎ ವಿಭಾಗದ ಸಹ ಪ್ರಾದ್ಯಾಪಕರಾದ ಎಸ್.ಜಿ ಸಂತೋಷ್, ಕಾಲೇಜಿನ ಎನ್‌ಎಸ್‌ಎಸ್ ಘಟಕದ ಸ್ವಯಂ ಸೇವಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post