ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರದ ಗಾಡಿಕೊಪ್ಪದಲ್ಲಿರುವ ಆದಿತ್ಯ ಕನ್ಸ್ಟ್ರಕ್ಷನ್ ಕಂಪೆನಿಯ ಆವರಣದಲ್ಲಿ ಶುಕ್ರವಾರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ವತಿಯಿಂದ ಕೋವಿಡ್ ಲಸಿಕೆ ನೀಡಲಾಯಿತು,
ಕರ್ನಾಟಕ ನೀರಾವರಿ ನಿಗಮ ನಿಯಮಿತದ ವತಿಯಿಂದ ಕೈಗೊಳ್ಳಲಾಗಿರುವ ಕೆರೆ ತುಂಬಿಸುವ ಯೋಜನೆಯಡಿ ಆದಿತ್ಯ ಕನ್ಸ್ಟ್ರಕ್ಷನ್ ಕಂಪೆನಿ ಗುತ್ತಿಗೆದಾರರ ಬಳಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 80 ಜನ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ತುಂಗಾನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಭೀಮಪ್ಪ ಮತ್ತು ಸಿಬ್ಬಂದಿಗಳು ಕೋವಿಡ್ ಲಸಿಕೆ ನೀಡಿದರು.
ಈ ವೇಳೆ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಎ.ಅಕ್ತರ್ ಮಾತನಾಡಿ, ಕಾರ್ಮಿಕರು ಇನ್ನು 84 ದಿನಗಳ ನಂತರ ಎರಡನೇ ಡೋಸ್ ಪಡೆಯಬೇಕು. ಲಸಿಕೆ ಪಡೆದರೂ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಆಗಾಗ ಕೈ ಸ್ವಚ್ಚಗೊಳಿಸಿಕೊಂಡು ಕೆಲಸ ಮಾಡಬೇಕೆಂದು ತಿಳಿಸಿದರು.
ಈ ವೇಳೆ ಕಾರ್ಮಿಕ ಅಧಿಕಾರಿ ಎಂ.ಪಿ.ವಿಶ್ವನಾಥ್, ಕೆಎನ್‍ಎನ್‍ಎಲ್ ಸಹಾಯಕ ಕಾರ್ಯಪಾಲಕ ಅಭಿಯಂತರ ಎನ್.ವಿ.ಭಟ್, ಪ್ರಾಜೆಕ್ಟ್ ಮ್ಯಾನೇಜರ್ ಅಮರೇಶ್, ಕಾರ್ಮಿಕ ನಿರೀಕ್ಷಕಿ ಸುಖಿತ, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post