ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಿ ಟಿ ರವಿ ಅವರ ಬಂಧನ #C T Ravi Arrest ದುರುದ್ದೇಶ ರಾಜಕೀಯ, ಉದ್ದೇಶ ಪೂರ್ವಕವಾಗಿ ಅವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಸಿ.ಟಿ.ರವಿಯವರು ಹಲವು ದಶಕಗಳಿಂದ ರಾಜಕಾರಣ ಮಾಡುತ್ತ ಬಂದಿದ್ದಾರೆ. ಅವರು ಎಂದು ಮಹಿಳೆಯರಿಗೆ ಅಗೌರವ ತೋರಿಲ್ಲ. ತೋರುವುದು ಇಲ್ಲ. ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಸರ್ಕಾರ ಅವರ ಮೇಲೆ ಸುಳ್ಳು ಆರೋಪ ಹೊರಿಸಿದೆ. ತಮ್ಮೆಲ್ಲ ತಪ್ಪುಗಳನ್ನು ಮುಚ್ಚಿ ಹಾಕಲು ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಈ ಷಡ್ಯಂತ್ರವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ ಎಂದರು.
ಸದನದಲ್ಲಿ ನಡೆದ ಘಟನಾವಳಿಗಳನ್ನು ನೋಡಿದರೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ #Minister Lakshmi Hebbalkar ತಮ್ಮನ ಪಿಎ ಹಲ್ಲೆ ಮಾಡಲೆಂದೇ ಬಂದಿದ್ದಾರೆ ಎನ್ನಿಸುತ್ತದೆ. ಎಲ್ಲೋ ಒಂದು ಕಡೆ ಇದನ್ನು ರಾಜಕೀಯಗೊಳಿಸಲು ಹೊರಟಿದ್ದಾರೆ. ಲಕ್ಷಾಂತರ ಜನ ಕಾರ್ಯಕರ್ತೆಯರನ್ನು ಇಟ್ಟುಕೊಟ್ಟಿದಿರುವುದು ಭಾರತೀಯ ಜನತಾ ಪಕ್ಷ. ಸಿ ಟಿ ರವಿ ಅವರು ಅಸಭ್ಯವಾಗಿ ನಡೆದುಕೊಳ್ಳುವ ಮನುಷ್ಯ ಅಲ್ಲ. ಕಾಂಗ್ರೆಸ್ ಹೊಸ ಸಂಪ್ರಾದಾಯವನ್ನು ಬಿತ್ತುವಂತಹ ಕೆಲಸ ಮಾಡುತ್ತಿದೆ.
Also read: ಜನಪ್ರತಿನಿಧಿಗಳ ಮೇಲೆ ಹಲ್ಲೆ | ಕಾಂಗ್ರೆಸ್‌ನ ದುಷ್ಕೃತ್ಯ ಖಂಡನೀಯ: ಟಿ.ಡಿ. ಮೇಘರಾಜ್
ಸದನದ ಒಳಗಡೆ ನಿರ್ಣಯ ಆಗಬೇಕಿರುವ ವಿಷಯವನ್ನು ರಸ್ತೆಗೆ ತಂದಿದ್ದಾರೆ. ಇದು ಸರಿಯಲ್ಲ. ಸಾಮಾನ್ಯ ವ್ಯಕ್ತಿಗೂ ಈ ರೀತಿ ನಡೆಸಿಕೊಳ್ಳುವುದಿಲ್ಲ. ಮೂರು ಮೂರು ಸ್ಟೇಶನ್ ಗೆ ಅವರನ್ನು ಅಲೆದಾಡಿಸಿದ್ದಾರೆ. ಸುವರ್ಣ ಸೌಧದ ಒಳಗಡೆ ಬಂದು ಈ ರೀತಿಯ ಆಟ ಆಡುತ್ತಾರೆ ಎಂದರೆ ಪೊಲೀಸ್‌ನವರು ಏನು ಮಾಡುತ್ತಿದ್ದಾರೆ. ಇದು ಸರ್ಕಾರದ ವಿಫಲತೆ. ಸರ್ಕಾರದ ಕುಮ್ಮಕ್ಕು ಇದಕ್ಕಿದೆ. ರಕ್ಷಣಾ ವ್ಯವಸ್ಥೆ ಕುಸಿದು ಬಿದ್ದಿದೆ. ಈ ಸರ್ಕಾರ ಸತ್ತುಹೋಗಿದೆ ಎಂದು ಕಿಡಿಕಾರಿದರು.
ಚುನಾವಣಾ ಪ್ರತಿನಿಧಿಗಳಿಗೆ ರಕ್ಷಣೆ ಇಲ್ಲವಾಗಿದೆ. ಸಿ.ಟಿ ರವಿ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಸಿ ಟಿ ಅವರ ಮೇಲೆ ಕರ್ನಾಟಕ ಜನತೆಯ ಆಶೀರ್ವಾದ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರ ಮಗ ಯತೀಂದ್ರವರು ಸಿ.ಟಿ.ರವಿ ಮೇಲೆ ಆರೋಪ ಮಾಡಿರುವುದು ಶುದ್ಧ ಸುಳ್ಳು, ಕಾಂಗ್ರೆಸ್ ವ್ಯವಸ್ಥೆಯಲ್ಲಿ ಅಪ್ಪ ಮಕ್ಕಳ ಆಟ ನಡೆಯಲಿ. ಚುನಾಯಿತ ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲದೆ ಗೂಂಡಾಗಳನ್ನು ಒಳಗೆ ಬಿಟ್ಟು ಹತ್ತಿಕ್ಕುವ ಪ್ರಯತ್ನ ನಡೆಸಿದೆ. ಗೂಂಡಾಗಳು ದಾದಾ ಗಿರಿ ಮಾಡುತ್ತಿದ್ದಾರೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post