ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬದುಕಿನಲ್ಲಿ ಎದುರಾಗುವ ಎಲ್ಲಾ ಸನ್ನಿವೇಶಗಳನ್ನು ಸಂಭ್ರಮಿಸುವ ಗುಣ ಯುವ ಸಮೂಹ ಬೆಳೆಸಿಕೊಳ್ಳಬೇಕಿದೆ ಎಂದು ಖ್ಯಾತ ಹಾಸ್ಯ ಭಾಷಣಕಾರರಾದ ರಾಘವೇಂದ್ರ ಆಚಾರ್ಯ ಹೇಳಿದರು.
ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಂಸಿಎ ವಿಭಾಗದ ವತಿಯಿಂದ ಬುಧವಾರ ಪದವಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ‘ಟೆಕ್ ಕ್ರಂಚ್’ ಯುಜಿ ಫೆಸ್ಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Also read: ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಎಚ್ಚರಿಕೆ: ಈ ಎಲ್ಲ ವಿಚಾರಗಳ ಉಲ್ಲೇಖ
ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಮಾತನಾಡಿ, ಮನುಷ್ಯ ಸದಾ ಚಟುವಟಿಕೆಗಳಿಂದ ಕೂಡಿರಬೇಕು. ಬದುಕು ಹೇಗೊ ಆಯಿತು ಎಂಬ ತಾತ್ಸಾರಕ್ಕಿಂತ, ಹೀಗೆ ಆಗಬೇಕು ಎಂಬ ಸ್ಪಷ್ಟನೆ ಇರಲಿ. ಮನುಷ್ಯನ ಜೀವನದಲ್ಲಿ ಎಲ್ಲಾ ಪ್ರಾಕಾರಗಳು ಇರಬೇಕು. ಸಂತೋಷವೆಂಬ ಪ್ರಕಾರ ಮೇಲುಗೈ ಸಾಧಿಸಬೇಕು.

ಹಾಸ್ಯ ಭಾಷಣಕಾರ ಉಮೇಶ್ ಗೌಡ ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಶೈಕ್ಷಣಿಕ ಆಡಳಿತಾಧಿಕಾರಿ ಎಂ.ಎನ್.ರಾಮಚಂದ್ರ, ಜೆ.ಎನ್.ಎನ್.ಸಿ.ಇ ಪ್ರಾಂಶುಪಾಲರಾದ ಡಾ.ಪಿ.ಮಂಜುನಾಥ, ಎಂಸಿಎ ವಿಭಾಗದ ನಿರ್ದೇಶಕರಾದ ಡಾ.ಪ್ರಭುದೇವ, ಎಂಬಿಎ ವಿಭಾಗದ ನಿರ್ದೇಶಕರಾದ ಡಾ.ಶ್ರೀಕಾಂತ್, ಕಾರ್ಯಕ್ರಮ ಸಂಯೋಜಕರಾದ ಕೆ.ಎಲ್.ಅರುಣ್ ಕುಮಾರ್, ಹೆಚ್.ಟಿ. ಮಂಜುನಾಥ, ವಿದ್ಯಾರ್ಥಿ ಸಂಯೋಜಕರಾದ ಅಮಿತ್, ಕವನ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು
ಪದವಿ ಕಾಲೇಜುಗಳ ಸುಮಾರು ಮೂವತ್ತಕ್ಕು ಹೆಚ್ಚು ತಂಡಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post