ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರದಲ್ಲಿ ಕರ್ಪ್ಯೂ #Shivamogga Curfew ಅವಧಿಯಲ್ಲಿ ಸಡಿಲಿಕೆ ಮಾಡಲಾಗಿದ್ದು, ಫೆ.26 ಶನಿವಾರ ಬೆಳಿಗ್ಗೆ 6ರಿಂದ ಸಂಜೆ 4ಗಂಟೆವರೆಗೆ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ #DC Selvamani ಅವರು ತಿಳಿಸಿದ್ದಾರೆ.
ಶಾಲಾ ಕಾಲೇಜು ರಜೆ ವಿಸ್ತರಣೆ:
ಶಿವಮೊಗ್ಗ ನಗರದಲ್ಲಿ ಶನಿವಾರ ಸಹ ಶಾಲಾ ಕಾಲೇಜುಗಳಿಗೆ ರಜೆ #Holiday for School, college ಘೋಷಿಸಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಸೋಮವಾರದಿಂದ ಶಾಲಾ ಕಾಲೇಜು ಮನರಾರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅವರು ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post