ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋನ್ ಕೊಡಿಸುವುದಾಗಿ ನಂಬಿಸಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಬ್ಯಾಂಕ್ ಖಾತೆಯನ್ನು ದುರುಪಯೋಗಪಡಿಸಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ನಡೆಸಿದ ಪ್ರಕರಣ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ.
ಈ ಸಂಬಂಧ ಬೆಂಗಳೂರು #Bengaluru ಮೂಲದ ಅಂಕಿತ್ (34) ಎಂಬಾತನನ್ನು ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
Also Read>> ಕ್ರಿಕೆಟ್ ಆಡುವಾಗಲೇ ಹೃದಯಾಘಾತದಿಂದ ಕೋಚ್ ಅಕ್ಷಯ್ ನಿಧನ | ಡಿ.ಎಸ್. ಅರುಣ್ ಸಂತಾಪ
ಪೊಲೀಸರ ಮಾಹಿತಿ ಪ್ರಕಾರ, ಶಿವಮೊಗ್ಗದ ಶಾಹಿ ಗಾರ್ಮೆಂಟ್ಸ್‌ನಲ್ಲಿ #ShahiGarments ಕೆಲಸ ಮಾಡುತ್ತಿದ್ದ ಮಹಿಳೆಗೆ ಸಹೋದ್ಯೋಗಿನಿಯ ಮೂಲಕ ಪರಿಚಯವಾದ ಆರೋಪಿಗಳು, ಮಹಿಳಾ ಸಂಘಕ್ಕೆ ಲೋನ್ ಕೊಡಿಸುವುದಾಗಿ ನಂಬಿಸಿದ್ದಾರೆ. ಈ ನೆಪದಲ್ಲಿ 2025ರ ಜುಲೈ 25ರಂದು ಬಿಎಚ್ ರಸ್ತೆದಲ್ಲಿರುವ ಸಿಟಿ ಯೂನಿಯನ್ ಬ್ಯಾಂಕ್‌ನಲ್ಲಿ ಮಹಿಳೆಯ ಹೆಸರಿನಲ್ಲಿ ಉಳಿತಾಯ ಖಾತೆ ತೆರೆಯಲಾಗಿದೆ.
ಖಾತೆ ತೆರೆಯಿಸಿದ ಬಳಿಕ, ಲೋನ್ ಪ್ರಕ್ರಿಯೆಗೆ ಅಗತ್ಯವಿದೆ ಎಂದು ಹೇಳಿ ಪಾಸ್‌ಬುಕ್, ಎಟಿಎಂ ಕಾರ್ಡ್, ಚೆಕ್‌ಬುಕ್ ಹಾಗೂ ಸಿಮ್ ಕಾರ್ಡ್ಗಳನ್ನು ಪಡೆದುಕೊಂಡಿದ್ದಾರೆ. ನಂತರ ಯಾವುದೇ ಲೋನ್ ನೀಡದೆ, ಮಹಿಳೆಯ ಖಾತೆಯನ್ನು ಮ್ಯೂಲ್ ಖಾತೆಯಾಗಿ ಬಳಸಿಕೊಂಡು ಸೈಬರ್ ವಂಚನೆಯ ಹಣವನ್ನು ವರ್ಗಾಯಿಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.
ಪೊಲೀಸರ ತನಿಖೆಯಲ್ಲಿ ಒಟ್ಟು 4 ಮ್ಯೂಲ್ ಖಾತೆಗಳ ಮೂಲಕ ₹32.43 ಲಕ್ಷಕ್ಕೂ ಹೆಚ್ಚು ಹಣ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ.
ದೂರು ಆಧಾರವಾಗಿ ಪ್ರಕರಣ ದಾಖಲಿಸಿಕೊಂಡ ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮಂಜುನಾಥ್ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬೆಂಗಳೂರಿನಲ್ಲಿ ಆರೋಪಿ ಅಂಕಿತ್‌ನ್ನು ಬಂಧಿಸಿದೆ.
Also Read>> ಉತ್ತರ ಕನ್ನಡ | ಕಡಲತೀರದಲ್ಲಿ ಭೀಕರ ದುರಂತ | ಮೃತರ ಸಂಖ್ಯೆ 11ಕ್ಕೆ ಏರಿಕೆ | ಹೇಗಾಯ್ತು ಘಟನೆ?
ಬಂಧಿತನಿಂದ 3 ಮೊಬೈಲ್ ಫೋನ್‌ಗಳು, 4 ಎಟಿಎಂ ಕಾರ್ಡ್‌ಗಳು ಹಾಗೂ 4 ಮ್ಯೂಲ್ ಬ್ಯಾಂಕ್ ಖಾತೆಗಳು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಬ್ಬ ಮಹಿಳಾ ಆರೋಪಿಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















