ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದೇಶದಲ್ಲಿ ಆಗುತ್ತಿರುವ ಅತ್ಯಾಚಾರಗಳನ್ನು ಖಂಡಿಸಿ ಹಾಗೂ ಅತ್ಯಾಚಾರಿಗಳಿಗೆ ಕಠಿಣ ಕಾನೂನು ರೂಪಿಸಲು ಆಗ್ರಹಿಸಿ 3500 ಕಿ.ಮೀ ಸೈಕಲ್ ಮುಖಾಂತರ ಸಂಚರಿಸಿ ರಾಜ್ಯದ ಎಲ್ಲಾ 30 ಜಿಲ್ಲೆಯ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡುತ್ತಿರುವ ಬೆಂಗಳೂರಿನ ಕಿರಣ್ ಎಂಬ ಯುವಕ ಇಂದು ನಗರಕ್ಕೆ ಆಗಮಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈಗಾಗಲೇ 19 ಜಿಲ್ಲೆಗಳಿಗೆ ಸರಿ ಸುಮಾರು 2500 ಕಿಮೀ ಏಕಾಂಗಿಯಾಗಿ ಸೈಕಲ್ ಮೂಲಕ ಹೋಗಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ಹೋರಾಟದ 20ನೇ ಜಿಲ್ಲೆ ಶಿವಮೊಗ್ಗ ನಗರಕ್ಕೆ ಆಗಮಿಸಿದ್ದು, ಯುವಕನನ್ನು ಜಿಲ್ಲಾ ಯುವ ಕಾಂಗ್ರೆಸ್‌ನ ಎಲ್ಲಾ ಪದಾಧಿಕಾರಿಗಳು ಬರಮಾಡಿಕೊಂಡು ಹೋರಾಟಕ್ಕೆ ಯುವ ಕಾಂಗ್ರೆಸ್‌ನಿಂದ ಸಂಪೂರ್ಣವಾಗಿ ಬೆಂಬಲಿಸಿ ಮಹಾವೀರ ವೃತ್ತದಲ್ಲಿ ಪ್ರತಿಭಟಿಸಿ, ನಂತರ ಸಾಂಕೇತಿಕವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿಭಟನಾ ನಡಿಗೆ ಹೊರಟು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ. ಲೋಕೇಶ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಎಸ್. ಕುಮರೇಶ್, ಜಿಲ್ಲಾ ಕಾಂಗ್ರೆಸ್‌ನ ಪದಾಧಿಕಾರಿಗಳಾದ ಪುಷ್ಪಕ್ ಕುಮಾರ್, ಐಎನ್‌ಟಿಸಿಯು ಜಿಲ್ಲಾಧ್ಯಕ್ಷ ಬಿ. ಅರ್ಜುನ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ನಿಹಾಲ್ ಸಿಂಗ್, ಯುವ ಕಾಂಗ್ರೆಸ್‌ನ ಅರುಣ್ ನವುಲೆ, ವೆಂಕಟೇಶ್ ಕಲ್ಲೂರು, ಪವನ್, ರಾಹುಲ್ ಸೀಗೆಹಟ್ಟಿ, ಮಧು, ದರ್ಶನ್ ರಾಹುಲ್ ಮಹಿಳಾ ಕಾಂಗ್ರೆಸ್‌ನ ಗೀತಾ ಹಾಗೂ ವಿದ್ಯಾರ್ಥಿ ಮಿತ್ರರು ಯುವ ಕಾಂಗ್ರೆಸ್‌ನ ಕಾರ್ಯಕರ್ತರು ಇನ್ನಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post