ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟಕ ಉಚ್ಚ ನ್ಯಾಯಾಲಯದ ಸಂಚಾರಿ ಪೀಠವನ್ನು ಶಿವಮೊಗ್ಗದಲ್ಲಿ ಸ್ಥಾಪಿಸುವ ಮೂಲಕ ನ್ಯಾಯಾಲಯದ ಸೌಲಭ್ಯವನ್ನು ಶೀಘ್ರವಾಗಿ ಮತ್ತು ಕೈಗೆಟುಕುವ ವೆಚ್ಚದಲ್ಲಿ ದೊರೆಯುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಡಿ. ಮಂಜುನಾಥ ಒತ್ತಾಯಿಸಿದ್ದಾರೆ
ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಡಿ.ಮಂಜುನಾಥ, ಶಿವಮೊಗ್ಗ ಜಿಲ್ಲೆಯನ್ನು ಕೇಂದ್ರವಾಗಿಟ್ಟುಕೊಂಡು ದಾವಣಗೆರೆ, ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಜನರಿಗೆ ನ್ಯಾಯಸೇವೆಯನ್ನು ಸುಲಭವಾಗಿ ಒದಗಿಸಲು ಶಿವಮೊಗ್ಗದಲ್ಲಿ ಖಾಯಂ ಪೀಠ ಸ್ಥಾಪನೆ ಅಗತ್ಯವಿದೆ ಎಂದು ಉಲ್ಲೇಖಿಸಿದ್ದಾರೆ. ಬೆಂಗಳೂರಿಗೆ ತೆರಳಿ ಹೈಕೋರ್ಟ್ ಸೌಲಭ್ಯ ಪಡೆಯುವಲ್ಲಿ ಜನರು ಎದುರಿಸುತ್ತಿರುವ ಸಂಕಷ್ಟಗಳನ್ನು ಮನಗಂಡು ಈ ಭಾಗದಲ್ಲೇ ನ್ಯಾಯಾಂಗ ವ್ಯವಸ್ಥೆ ಬಲಪಡಿಸುವ ಅವಶ್ಯಕತೆಯಿದೆ.
Also read: ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ
ಮಂಗಳೂರಿನಲ್ಲಿ ಸಂಚಾರಿ ಪೀಠ ಸ್ಥಾಪನೆ ಮಾಡುವ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯನ್ನೂ ಅದರ ವ್ಯಾಪ್ತಿಗೆ ಸೇರಿಸುವ ಪ್ರಸ್ತಾಪ ಜನರಲ್ಲಿ ಆತಂಕ ಮೂಡಿಸಿದೆ. ಶಿವಮೊಗ್ಗ-ಮಂಗಳೂರು ಸಂಪರ್ಕ ವ್ಯವಸ್ಥೆಯ ದುರ್ಬಲತೆ ಹಾಗೂ ಪ್ರಯಾಣದ ತೊಂದರೆಗಳನ್ನು ಉಲ್ಲೇಖಿಸಿ, ಜಿಲ್ಲೆಯ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದು ಎಂದು ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















