ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲಿ ಕರ್ನಾಟಕ ರಾಜ್ಯ ಪ್ರತಿನಿಧಿಸಿರುವ ಆರು ಜನಪ್ರತಿನಿಧಿಗಳಿಗೆ ಸಚಿವ ಸ್ಥಾನ ಕಲ್ಪಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರಕ್ಕೆ ರಾಜ್ಯದ ಜನರ ಪರವಾಗಿ ಅಭಿನಂದನೆಗಳು ಎಂದು ರಾಜ್ಯ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್ ತಿಳಿಸಿದ್ದಾರೆ.
60 ಮತ್ತು 70ರ ದಶಕದಲ್ಲಿ ಭಾರತೀಯ ಕ್ರಿಕೆಟ್ ತಂಡದಲ್ಲಿ ಕರ್ನಾಟಕ ರಾಜ್ಯದ ಆರು ಆಟಗಾರರು ದೇಶವನ್ನು ಪ್ರತಿನಿಧಿಸಿದರು. 60-70ರ ದಶಕದಲ್ಲಿ ಚಂದ್ರಶೇಖರ್, ಪ್ರಸನ್ನ, ವಿಶ್ವನಾಥ್, ಬ್ರಿಜೇಶ್ ಪಟೇಲ್, ರೋಜರ್ ಬಿನ್ನಿ ಮತ್ತು ಸೈಯದ್ ಕಿರ್ಮಾನಿ ಅವರಂತಹ ಕ್ರಿಕೆಟ್ ದಿಗ್ಗಜರು ದೇಶಕ್ಕಾಗಿ ಆಡುತ್ತಿದ್ದರು.
90ರ ದಶಕದಲ್ಲಿಯೂ ಇದೇರೀತಿ ಮತ್ತೆ ಕರ್ನಾಟಕದ ಆಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿದರು. ಭಾರತದಲ್ಲಿ ತಂಡದಲ್ಲಿ ರಾಜ್ಯದ ಆರು ಜನರಿಗೆ ಅವಕಾಶ ಸಿಕ್ಕಿತು. ರಾಹುಲ್, ದ್ರಾವಿಡ್, ಅನಿಲ್ ಕುಂಬ್ಳೆ, ಸುನಿಲ್ ಜೋಶಿ, ವೆಂಕಟೇಶ್ ಪ್ರಸಾದ್, ಜಾವಗಲ್ ಶ್ರೀನಾಥ್ ಮತ್ತು ದೊಡ್ಡ ಗಣೇಶ್ ಭಾರತವನ್ನು ಪ್ರತಿನಿಧಿಸಿದರು.
ಇದೀಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲೂ ಕರ್ನಾಟಕ ಪ್ರಮುಖ ಪಾತ್ರ ವಹಿಸುತ್ತಿದೆ. ಕರ್ನಾಟಕ ರಾಜ್ಯ ಪ್ರತಿನಿಧಿಸಿರುವ ಆರು ಜನರಿಗೆ ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ. ನಿರ್ಮಲಾ ಸೀತಾರಾಮನ್, ಪ್ರಲ್ಹಾದ್ ಜೋಶಿ, ಎ. ನಾರಾಯಣಸ್ವಾಮಿ, ಭಗವಂತ್ ಖುಬಾ, ಶೋಭಾ ಕರಂದ್ಲಾಜೆ ಹಾಗೂ ರಾಜೀವ್ ಚಂದ್ರಶೇಖರ್ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ಲಭಿಸಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ.
ಭಾರತ ವಿಶ್ವಗುರುವಾಗುವ ದಿಸೆಯಲ್ಲಿ ಕರ್ನಾಟಕ ಪ್ರತಿನಿಧಿಸಿ ಕೇಂದ್ರದಲ್ಲಿ ಸಚಿವಾಗಿರುವ ಎಲ್ಲರೂ ಅತ್ಯುತ್ತಮ ಸಾಧನೆಗಳನ್ನು ಮಾಡುವಂತಾಗಲಿ ಎಂದು ಶುಭಹಾರೈಸುವುದಾಗಿ ರಾಜ್ಯ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post