ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಸರ್ಕಾರಿ ಪ್ರಥಮದರ್ಜೆ ಕಾಲೇಜು, ಸ್ನಾತಕೋತ್ತರ ಅಧ್ಯಯನ ಕೇಂದ್ರ, ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜು ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಪದವಿ ಸ್ನಾತಕೋತ್ತರ ವಿಧ್ಯಾರ್ಥಿಗಳು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಕೋವಿಡ್19 ಲಸಿಕಾ ಅಭಿಯಾನಕ್ಕೆ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಡಿ.ಎಸ್.ಅರುಣ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಉಪ ಮೇಯರ್ ಸುರೇಖಾ ಮುರುಳಿದರ್, ಕಾಲೇಜಿನ ಪ್ರಾಂಶುಪಾಲರು, ಸಿಬ್ಬಂದಿ ವರ್ಗದವರು, ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















