ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಒಡ್ಡಿನ ಕೊಪ್ಪ ಸಮೀಪ ಅಪಾಯಕಾರಿಯಾಗಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಯುವಕನೊಬ್ಬನನ್ನು ಪತ್ತೆ ಮಾಡಿರುವ ಪೊಲೀಸರು ಆತನನ್ನು ಕರೆತಂದು ದಂಡ ವಿಧಿಸಿ, ಎಚ್ಚರಿಕೆ ನೀಡಿದ್ದಾರೆ.
ಯುವಕನೊಬ್ಬ ಬೈಕ್ ವ್ಹೀಲಿಂಗ್ ಮಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲಿ ವೈರಲ್ ಆಗಿತ್ತು. ಇದನ್ನು ಗಮನಿಸಿ, ಗಂಭೀರವಾಗಿ ಪರಿಗಣಿಸಿದ ಸಂಚಾರಿ ಠಾಣೆ ಪೊಲೀಸರು ಆತನನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಯುವಕನನ್ನು ಒಡ್ಡಿನಕೊಪ್ಪದ ಸಮೀಪದ ನಿವಾಸಿ ಎಂದು ತಿಳಿದುಬಂದಿದ್ದು, ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ.
ಹೆಲ್ಮೆಟ್ ಧರಿಸದೇ ಅಪಾಯಕಾರಿಯಾಗಿ ವ್ಹೀಲಿಂಗ್ ಮಾಡಿದ ಹಿನ್ನೆಲೆಯಲ್ಲಿ ಈತನಿಗೆ ದಂಡ ವಿಧಿಸಿ, ಮತ್ತೊಮ್ಮೆ ಹೀಗೆ ಮಾಡದಂತೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















