ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ವಿಮಾನ ನಿಲ್ದಾಣದಿಂದ Shivamogga Airport ಶೀಘ್ರದಲ್ಲೇ ಶಿವಮೊಗ್ಗ-ಬೆಂಗಳೂರು ವಿಮಾನ ಹಾರಾಟ ಆರಂಭವಾಗಲಿದ್ದು, ಇದಕ್ಕೆ ಬೇಕಾದ ಪ್ರಕ್ರಿಯೆಗಳು ಪೂರ್ಣಗೊಂಡಿವೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿಗೋ Indigo ವಿಮಾನಯಾನ ಸಂಸ್ಥೆಯವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೇಂದ್ರ ವಿಮಾನಯಾನ ಪ್ರಾಧಿಕಾರದ (ಡಿಜಿಸಿಎ) ಜೊತೆಗೆ ಇಂಡಿಗೋ ಒಪ್ಪಂದ ಮಾಡಿಕೊಂಡಿದೆ. ಇಂಡಿಗೋ ಸಂಸ್ಥೆ ತನ್ನ ವೆಬ್‌ಸೈಟಿನಲ್ಲಿ ವಿಮಾನ ಸೇವೆಯ ಟೈಮಿಂಗ್ ಅಪ್‌ಲೋಡ್ ಮಾಡುವುದನ್ನು ಕಾಯುತ್ತಿದ್ದೇವೆ ಎಂದು ತಿಳಿಸಿದರು.
ಇನ್ನೊಂದು ವಾರದಲ್ಲಿ ವಿಮಾನ ಹಾರಾಟ ಆರಂಭವಾಗಲಿದೆ ಎಂದು ಈ ಹಿಂದೆ ತಿಳಿಸಿದ್ದೆ. ಚುನಾವಣೆ ಮೊದಲೆ ವಿಮಾನ ಹಾರಾಟ ಆರಂಭವಾಗುವ ಸಾಧ್ಯತೆಗಳಿದ್ದು, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಅತ್ಯಾಧುನಿಕ ಫೈರ್ ಇಂಜಿನ್ ಅಗತ್ಯವಿತ್ತು. ದುಬೈನಿಂದ ಮೂರು ಫೈರ್ ಇಂಜಿನ್ ತರಿಸಲಾಗಿದೆ. ಇನ್ನೊಂದೆರಡು ದಿನದಲ್ಲಿ ಅವುಗಳು ವಿಮಾನ ನಿಲ್ದಾಣ ತಲುಪಲಿವೆ. ಇಂಡಿಗೋ ಸಂಸ್ಥೆಗೆ 2 ಕೋಟಿ ರೂ. ಸಬ್ಸಿಡಿ ನೀಡಬೇಕಿದೆ. ಅದಕ್ಕೂ ವ್ಯವಸ್ಥೆ ಮಾಡಲಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post