ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಸ್ಥಾನಕ್ಕೆ ಚುನಾವಣೆಗೆ ದಿನಾಂಕ ಘೋಷಿಸಲಾಗಿದ್ದು, ಅ.28ರಂದು ಚುನಾವಣೆ ನಿಗದಿಗೊಳಿಸಿ ಪ್ರಾದೇಶಿಕ ಆಯುಕ್ತ ಅಮಾನ್ ಆದಿತ್ಯ ಬಿಸ್ವಾಸ್ ಅವರು ಆದೇಶಿಸಿದ್ದಾರೆ.
ಅ.28ರಂದು ಮಧ್ಯಾಹ್ನ 12 ಗಂಟೆಯಿಂದ 1 ಗಂಟೆವರೆಗೆ ಅಕಾಂಕ್ಷಿಗಳು ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಮಧ್ಯಾಹ್ನ 3 ಗಂಟೆಗೆ ಪಾಲಿಕೆ ಸಭಾಂಗಣದಲ್ಲಿ ಸಭೆ ನಡೆಯಲಿದೆ.
ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿಯ ಅಭ್ಯರ್ಥಿ ಮತ್ತು ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ಎ ವರ್ಗದ ಮಹಿಳಾ ಅಭ್ಯರ್ಥಿ ಸ್ಪರ್ಧಿಸಬಹುದಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post