ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಖಾಸಗಿ ಶಿಕ್ಷಣ ಸಂಸ್ಥೆಗಳು ಡೊನೇಷನ್ ನೆಪದಲ್ಲಿ ಹಗಲು ದರೋಡೆ ಮಾಡುವುದನ್ನು ನಿಲ್ಲಿಸಬೇಕು ಎಂದು ಆಮ್ ಆದ್ಮಿ ಪಾರ್ಟಿಯ #AAP ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಜೀರ್ ಅಹಮ್ಮದ್ ಆಗ್ರಹಿಸಿದರು.
ಅವರು ಇಂದು ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜೂನ್ ತಿಂಗಳು ಬಂತು ಎಂದರೆ ಖಾಸಗಿ ಶಿಕ್ಷಣ ಸಂಸ್ಥೆಗಳ ಹಾವಳಿ ಹೆಚ್ಚಾಗುತ್ತಿದೆ. ಎಷ್ಟೋ ಶಾಲಾ ಕಾಲೇಜುಗಳಲ್ಲಿ ಈಗಾಗಲೇ ಪ್ರವೇಶಗಳೇ ಮುಗಿದು ಹೋಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತಿ ವರ್ಷ ಮಿತಿ ಮೀರಿ ಡೊನೇಷನ್ ಪಡೆಯುತ್ತಾರೆ. ಪ್ರತಿ ವರ್ಷ ಶೇ.15ರಷ್ಟು ಶುಲ್ಕವನ್ನು ಹೆಚ್ಚಿಸುತ್ತಾರೆ. ಸರ್ಕಾರಗಳು ಕೂಡ ಇದಕ್ಕೆ ಒಪ್ಪಿ ಬಿಡುತ್ತವೆ ಎಂದರು.
ರಾಜ್ಯದಲ್ಲಿ ಶುಲ್ಕ ನಿಯಂತ್ರಣ ಪ್ರಾಧಿಕಾರ ಇದ್ದರು ಕೂಡ ಅದು ಏನು ಕೆಲಸ ಮಾಡುತ್ತಿಲ್ಲ. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವು ಖಾಸಗಿ ಶಾಲೆಗಳ ಡೊನೇಷನ್ ಹಾವಳಿಯನ್ನು ತಪ್ಪಿಸಿದೆ. ಅದೇ ರೀತಿ ಎಲ್ಲಾ ರಾಜ್ಯಗಳು ಖಾಸಗಿ ಶಾಲೆಗಳ ಶುಲ್ಕ ನಿಗಧಿ ಬಗ್ಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಶುಲ್ಕ ನಿಗಧಿ ಅಧಿಕಾರ ರಾಜ್ಯಸರ್ಕಾರಕ್ಕಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ರಾಜ್ಯ ಸರ್ಕಾರ ಹೈಕೋರ್ಟ್ ಮುಂದೆ ಸಮರ್ಪಕ ವಾದವನ್ನು ಮಂಡಿಸಿಲ್ಲ. ಪೋಷಕರು ಕೂಡ ಖಾಸಗಿ ಶಾಲೆಗಳ ಮೋಹಕ್ಕೆ ಒಳಗಾಗಿ ಡೊನೇಷನ್ ವಿರುದ್ಧ ಮಾತಾಡುವುದಿಲ್ಲ ಎಂದರು.
Also read: ಪದವೀಧರ ಕ್ಷೇತ್ರ ಚುನಾವಣೆ | ಮೇ 16 | ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ನಾಮಪತ್ರ ಸಲ್ಲಿಕೆ
ಹಾಗಾಗಿ ಸರ್ಕಾರವೇ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪಕ್ಷದ ವತಿಯಿಂದ ಹೋರಾಟವನ್ನು ರಾಜ್ಯಾದಾದ್ಯಂತ ಆರಂಭಿಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಹರೀಶ್, ಯೂಸೋಫ್, ಸಾಹೀರ್, ಗೌಸ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

























