ಶಿವಮೊಗ್ಗ: ದಕ್ಷ, ಪ್ರಾಮಾಣಿಕ ಹಾಗೂ ಜನರ ಮನೆ ಹಾಗೂ ಮನಗಳಿಗೆ ಹತ್ತಿರವಾಗಿ ಹೆಸರುವಾಸಿಯಾಗಿದ್ದ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಇವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ಕೆ.ಬಿ. ಶಿವಕುಮಾರ್ ಅವರನ್ನು ನಿಯೋಜನೆ ಮಾಡಿದೆ.
ಈ ಕುರಿತಂತೆ ಇಂದು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ಕೆ.ಬಿ. ಶಿವಕುಮಾರ್ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ತತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶಿದೆ.
ಇನ್ನು, ಕೆ.ಎ. ದಯಾನಂದ್ ಅವರನ್ನು ಮುಂದಿನ ಆದೇಶ ಬರುವವರೆಗೂ ಬೆಂಗಳೂರಿನ ಸಕ್ಕರೆ ಅಭಿವೃದ್ದಿ ಮಂಡಳಿಯ ನಿರ್ದೇಶಕರಾಗಿ ಮುಂದುವರೆಯುವಂತೆ ಸೂಚಿಸಲಾಗಿದೆ.
ತಮಿಳುನಾಡು ಮೂಲದ ಶಿವಕುಮಾರ್ ಅವರು 2010ರ ಬ್ಯಾಚ್’ನ ಐಎಎಸ್ ಅಧಿಕಾರಿಯಾಗಿದ್ದು, ಬಿಟೆಕ್ ಹಾಗೂ ಎಂಎ ಪದವೀಧರರಾಗಿದ್ದಾರೆ. ಬಿಜಾಪುರ ಜಿಪಂ ಸಿಇಒ, ಮೈಸೂರು ಜಿಲ್ಲಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿರುವ ಇವರು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.
Discussion about this post