ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ವರ್ಗಾವಣೆ ಸುದ್ದಿ ಹೊರಬಿದ್ದ ಬೆನ್ನಲ್ಲೇ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರನ್ನು ಸಹ ವರ್ಗಾವಣೆ ಮಾಡಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಗುರುದತ್ತ ಹೆಗಡೆ ಅವರನ್ನು ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಬೆಂಗಳೂರು ಮುನ್ಸಿಪಲ್ ಅಡ್ಮಿನಿಸ್ಟ್ರೇಷನ್ ನಿರ್ದೇಶಕರಾಗಿದ್ದ ಪ್ರಭು ಕವಲಕಟ್ಟಿ ಅವರನ್ನು ನಿಯೋಜಿಸಲಾಗಿದೆ.
ಶಿವಮೊಗ್ಗದಿಂದ ಗುರುದತ್ತ ಹೆಗಡೆ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.
ದಕ್ಷತೆಗೆ ಹೆಸರಾದ ಗುರುದತ್ತ ಹೆಗಡೆ ಅವರು ಜಿಲ್ಲಾಧಿಕಾರಿಯಾಗಿ ಉತ್ತಮ ಆಡಳಿತ ನೀಡಿದವರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















