ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಧಾನಸಭಾ ಚುನಾವಣೆ #AssemblyElection ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಚುನಾವಣಾ ಚೆಕ್ ಪೋಸ್ಟ್’ಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ನಿನ್ನೆ ರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಜಾರಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಹೀಗಾಗಿ, ಜಿಲ್ಲೆಯ ಆಯಕಟ್ಟಿನ ಸ್ಥಳಗಳಲ್ಲಿ ಚೆಕ್ ಪೋಸ್ಟ್ ತೆರೆದು ತಪಾಸಣೆ ನಡೆಸಲಾಗುತ್ತಿದೆ.
ನಿನ್ನೆ ರಾತ್ರಿ 8.30ರ ವೇಳೆಗೆ ಆರಂಭವಾದ ಜಿಲ್ಲಾಧಿಕಾರಿಗಳ ತಪಾಸಣಾ ಕಾರ್ಯಾಚರಣೆ ಸುಮಾರು 12 ಗಂಟೆವರೆಗೂ ನಡೆದಿತ್ತು. ಪ್ರಮುಖವಾಗಿ, ಅತ್ತಿಬೈಲು, ಮಡಿಕೆ ಚೀಲೂರು, ಹೊಳಲೂರು, ಸುತ್ತುಕೋಟೆ ಸೇರಿದಂತೆ ತಾಲೂಕಿನ ವಿವಿಧ ಕಡೆಗಳಲ್ಲಿ ಪರಿಶೀಲನೆ ನಡೆಸಿದರು.
ಚೆಕ್ ಪೋಸ್ಟ್’ನಲ್ಲಿ ನಿಯೋಜನೆಗೊಂಡಿರುವ ಸಿಬ್ಬಂದಿಗಳಿಂದ ಜಿಲ್ಲಾಧಿಕಾರಿಗಳು ಮಾಹಿತಿ ಪಡೆದರು.
ಜಿಪಂ ನೂತನ ಸಿಇಒ ಸ್ನೇಹಲ್ ಲೋಖಂಡೆ ಸೇರಿದಂತೆ ಪೊಲೀಸ್ ಅಧಿಕಾರಿಗಳು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post