ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ DCSelvamani ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.
ನೂತನ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ರಾಜ್ಯದ ಎಲ್ಲ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರು, ಸದಸ್ಯರು ಹಾಗೂ ನಿರ್ದೇಶಕರುಗಳನ್ನು ವಜಾ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಇದರ ಬೆನ್ನಲ್ಲೇ ಸರ್ಕಾರ ಸುತ್ತೋಲೆ ಹೊರಡಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಹಿತಿ ಪ್ರಕಟಿಸಿರುವ ಜಿಲ್ಲಾಧಿಕಾರಿಗಳು, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಕೆಲಸ ಕಾರ್ಯಗಳಿಗೆ ಸಂಬಂಧಿಸಿದಂತೆ ಹಾಗೂ ವೈಯಕ್ತಿಕವಾಗಿ ಗಮನಕ್ಕೆ ತರಬೇಕಾದಂತಹ ಅರೆ ಸರ್ಕಾರಿ ಪತ್ರಗಳು, ಗೌಪ್ಯ ಪತ್ರಗಳನ್ನು ಡಾ.ಸೆಲ್ವಮಣಿ ಆರ್, ಭಾಆಸೇ, ಜಿಲ್ಲಾಧಿಕಾರಿಗಳು, ಶಿವಮೊಗ್ಗ ಹಾಗೂ ಅಧ್ಯಕ್ಷರು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರ, 100 ಅಡಿ ರಸ್ತೆ, ವಿನೋಬನಗರ, ಶಿವಮೊಗ್ಗ 577204 ದೂ.ಸಂ: 08182-249576 ವಿಳಾಸಕ್ಕೆ ಕಳುಹಿಸಿಕೊಡಬಹುದು ಎಂದು ತಿಳಿಸಿದ್ದಾರೆ.
Discussion about this post