ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ (Shivamogga) ಜಿಲ್ಲಾಡಳಿತದಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆಯಾಗಿದ್ದು, ಹಾಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ಪ್ರಕಾಶ್ ಜಿ.ಟಿ. ನಿಟಳಿ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ (New DC) ನೇಮಕ ಮಾಡಲಾಗಿದೆ.
ರಾಜ್ಯ ಸರ್ಕಾರದ ಆಡಳಿತಾತ್ಮಕ ವರ್ಗಾವಣೆ ಆದೇಶದ ಪ್ರಕಾರ, ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ. 2026ರ ಜನವರಿಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಅವರು, ಇದೀಗ ಸುಮಾರು ಹತ್ತು ತಿಂಗಳ ಅವಧಿಯ ಬಳಿಕ ಹೊಸ ಜವಾಬ್ದಾರಿಗೆ ತೆರಳಲಿದ್ದಾರೆ.
Also Read>> ಶಿವಮೊಗ್ಗದ ಜನರಿಗೆ ಗುಡ್ನ್ಯೂಸ್ | ತುಂಗಾ ನದಿಗೆ ಹೊಸ ಸೇತುವೆ ನಿರ್ಮಾಣಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್
Shivamogga: ಪ್ರಕಾಶ್ ಜಿ.ಟಿ. ನಿಟಳಿ ನೂತನ ಜಿಲ್ಲಾಧಿಕಾರಿ
ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಐಎಎಸ್ ಅಧಿಕಾರಿ ಪ್ರಕಾಶ್ ಜಿ.ಟಿ. ನಿಟಳಿ ಅವರು ಈ ಹಿಂದೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ರಾಜ್ಯ ಸರ್ಕಾರ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿ ಆದೇಶಿಸಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಆಡಳಿತಾತ್ಮಕವಾಗಿ ಹಲವು ಮಹತ್ವದ ಜವಾಬ್ದಾರಿಗಳಿದ್ದು, ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದನೆ, ಸರ್ಕಾರಿ ಯೋಜನೆಗಳ ಪರಿಣಾಮಕಾರಿ ಜಾರಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಜಿಲ್ಲಾಧಿಕಾರಿಗಳ ಪಾತ್ರ ಪ್ರಮುಖವಾಗಿದೆ.
ನೂತನ ಜಿಲ್ಲಾಧಿಕಾರಿ ಪ್ರಕಾಶ್ ಜಿ.ಟಿ. ನಿಟಳಿ ಅವರು ಅಧಿಕಾರ ವಹಿಸಿಕೊಂಡ ಬಳಿಕ ಜಿಲ್ಲೆಯ ಆಡಳಿತ ವ್ಯವಸ್ಥೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಯಾವ ರೀತಿಯ ಆದ್ಯತೆ ನೀಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











