ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ- ಕಂದಾಯ ಇಲಾಖೆ ಎಂಬ ಹೊಸ ಪರಿಕಲ್ಪನೆಯಡಿ ಪ್ರತಿ ತಿಂಗಳ 3ನೇ ಶನಿವಾರದಂದು ಜಿಲ್ಲಾಧಿಕಾರಿಗಳು ಗ್ರಾಮ ಭೇಟಿ ನೀಡಿ ವಾಸ್ತವ್ಯ ಮಾಡಲಿದ್ದಾರೆ.
ಈ ಪರಿಕಲ್ಪನೆಯ ಅಂಗವಾಗಿ ಅ.16ರ ಶನಿವಾರ ಬೆಳಗ್ಗೆ ೧೧ಕ್ಕೆ ಶಿವಮೊಗ್ಗ ತಾಲೂಕು ನಿಧಿಗೆ-2ನೇ ಹೋಬಳಿ, ಗಾಜನೂರು ಗ್ರಾಮದ ಶ್ರೀ ತುಂಗಾ ಸಮುದಾಯ ಭವನದಲ್ಲಿ ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಸಾರ್ವಜನಿಕರನ್ನು ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು, ಹಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಆದ್ದರಿಂದ ಗಾಜನೂರು ಗ್ರಾಮಸ್ಥರು ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿ, ಅ.16ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post