ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಯಾವುದೇ ಸರ್ಕಾರದಲ್ಲಿ ನಡೆದ ಹಗರಣಗಳನ್ನು ಸಿಬಿಐ ತನಿಖೆಗೆ ಮುಖ್ಯಮಂತ್ರಿಗಳು ಒಪ್ಪಿಸಲಿ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ #DCM K S Eshwarappa ಆಗ್ರಹಿಸಿದರು.
ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳು ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣ #Valmiki #Corporation Scam ಮತ್ತು ಮೂಡ ಹಗರಣಕ್ಕೆ #MUDA Scam ಸಂಬಂಧಿಸಿದಂತೆ ಪರಸ್ಪರ ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಹಗರಣವೇ ನಡೆದಿಲ್ಲ ಎಂಬಂತೆ ವರ್ತಿಸುತ್ತಿದೆ. ಮುಖ್ಯಮಂತ್ರಿಗಳು ಉತ್ತರ ಕೊಡದೆ ಜಾರಿಕೊಳ್ಳುತ್ತಿದ್ದಾರೆ, ಯಾವುದೇ ಸರ್ಕಾರದಲ್ಲಿ ಯಾವುದೇ ಹಗರಣಗಳು ನಡೆದಿರಲಿ ಅದನ್ನು ಸಿ ಬಿ ಐ ತನಿಖೆಗೆ ಅವರು ಒಪ್ಪಿಸಲಿ, ಸತ್ಯಗಳು ತಾನಾಗಿಯೇ ಹೊರಗೆ ಬರುತ್ತವೆ ಎಂದರು.
Also read: ಟೇಕಾಫ್ ವೇಳೆ ವಿಮಾನ ಪತನ: 18 ಜನ ಸಾವು
ಶಿವಮೊಗ್ಗದ ಆಶ್ರಯ ಬಡಾವಣೆಗೆ ಸಂಬಂಧಿಸಿದಂತೆ ಮತ್ತು ಕಟ್ಟಡ ಕಾರ್ಮಿಕರ ಮಕ್ಕಳಿಗೆ ನಿಂತು ಹೋಗಿರುವ ವಿದ್ಯಾರ್ಥಿವೇತನ ಹಾಗೂ ಇತರ ಸೌಲಭ್ಯಗಳಿಗಾಗಿ ಜು. 27ರಂದು ಸಚಿವರಾದ ಜಮೀರ್ ಅಹಮದ್ ಮತ್ತು ಸಂತೋಷ ಲಾಡ್‌ಅವರನ್ನು ಭೇಟಿ ಮಾಡಿ ಚರ್ಚಿಸಿ ನ್ಯಾಯ ಒದಗಿಸಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post