No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Saturday, March 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪತ್ರಿಕೋದ್ಯಮದಲ್ಲಿ ಕ್ಷಿಣಿಸುತ್ತಿರುವ ಕ್ರಿಯಾತ್ಮಕತೆ: ಕೆ.ವಿ. ಪ್ರಭಾಕರ್ ಕಳವಳ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 27, 2024
in ಶಿವಮೊಗ್ಗ
0
ಪತ್ರಿಕೋದ್ಯಮದಲ್ಲಿ ಕ್ಷಿಣಿಸುತ್ತಿರುವ ಕ್ರಿಯಾತ್ಮಕತೆ: ಕೆ.ವಿ. ಪ್ರಭಾಕರ್ ಕಳವಳ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜನರಿಗೆ ಏನು ಬೇಕೋ ಅಂತಹ ಸುದ್ದಿಗಳನ್ನು ನೀಡಬೇಕು. ಜನಪರವಾಗಿ ಹಾಗೂ ಕ್ರಿಯಾತ್ಮಕವಾಗಿ ಪತ್ರಿಕೋದ್ಯಮ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಕೆ.ವಿ.ಪ್ರಭಾಕರ್ ಹೇಳಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆ, ಶಿವಮೊಗ್ಗ ಪ್ರೆಸ್ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ಸರ್ಕಾರಿ ನೌಕರರ ಭವನದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಶಿವಮೊಗ್ಗ ಜಿಲ್ಲೆ ಕಾಗೋಡು, ಗೇಣಿ, ದಲಿತ, ಸ್ವಾತಂತ್ರ್ಯ ಮುಂತಾದ ಹೋರಾಟಗಳ ತವರು. ಜಿಲ್ಲೆಯ ಪತ್ರಕರ್ತರು ರಾಜ್ಯ ಮಟ್ಟದಲ್ಲಿ ಮಿಂಚುತ್ತಿದ್ದಾರೆ. ಇತ್ತೀಚಿನ ದಿನಮಾನದಲ್ಲಿ ಬರವಣಿಗೆ ನಶಿಸುತ್ತಿದೆ. ಕ್ರಿಯಾತ್ಮಕತೆ ದಿನೇ ದಿನೇ ಕ್ಷೀಣಿಸುತ್ತಿದೆ. ಸುದ್ದಿಗಳಲ್ಲಿ ಸಮಾಜ ಪರತೆ ಕಡಿಮೆ ಆಗಿದೆ. ವೈಭವೀಕರಣ ಮತ್ತು ಪೀತ ಪತ್ರಿಕೋದ್ಯಮ ಹೆಚ್ಚುತ್ತಿದೆ. ಈ ಕುರಿತು ಪತ್ರಕರ್ತರು ಹಾಗೂ ವಿದ್ಯಾರ್ಥಿಗಳು ಚಿಂತನೆ ನಡೆಸಬೇಕು. ನಾವು ಯಾವ ರೀತಿಯ ಸುದ್ದಿಗಳನ್ನು ನೀಡಬೇಕೆಂದು ಆಲೋಚಿಸಿ, ಜನ ಮತ್ತು ಸಮಾಜಪರವಾಗಿ ಕೆಲಸ ಮಾಡುವ ತುರ್ತು ಇದೆ ಎಂದರು.

ಗ್ರಾಮೀಣ ಭಾಗದ ಪತ್ರಕರ್ತರ ಬಹುದಿನದ ಬೇಡಿಕೆಯಾಗಿದ್ದ ಉಚಿತ ಬಸ್ ಪಾಸ್ ಯೋಜನೆ ಶೀಘ್ರದಲ್ಲೇ ಜಾರಿಯಾಗಲಿದೆ. ಪತ್ರಕರ್ತರ ವೈದ್ಯಕೀಯ ಸಂಕಷ್ಟ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಶೀಘ್ರದಲ್ಲೇ ಆರೋಗ್ಯ ವಿಮೆ ಜಾರಿಗೆ ತರಲಿದ್ದು ಇದಕ್ಕೆ ಸುಮಾರು ರೂ.10 ಕೋಟಿ ಅವಶ್ಯಕತೆ ಇದೆ. ವಿಮೆ ಕುರಿತಾದ ಮಾರ್ಗಸೂಚಿಗಳನ್ನು ಸಿದ್ದಪಡಸಲಾಗುತ್ತಿದೆ ಎಂದ ಅವರು ಸದಾ ಸಮಾಜದ ಕುರಿತು ಚಿಂತನೆ ಮಾಡುವ ಪತ್ರಕರ್ತರು ತಮ್ಮ ಕುಟುಂಬದ ಬಗ್ಗೆಗೂ ಹೆಚ್ಚಿನ ಕಾಳಜಿ ವಹಿಸಬೇಕೆಂದು ಕಿವಿ ಮಾತು ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಮಾತನಾಡಿ, ಸಂಘ ಪತ್ರಕರ್ತರ ಸ್ನೇಹಿಯಾಗಿ ಕೆಲಸ ಮಾಡುತ್ತಿದೆ. ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ನೆರವು ನೀಡುತ್ತಾ ಬಂದಿದೆ. ಪತ್ರಕರ್ತರ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತಿದೆ. ನಿವೃತ್ತ ಪತ್ರಕರ್ತರಿಗೆ ಮಾಸಾಶನ ನೀಡಲಾಗುತ್ತಿದೆ. ಗ್ರಾಮೀಣ ಬಸ್ ಪಾಸ್ ಯೋಜನೆಗೆ ಅನುಮೋದನೆ ದೊರೆತಿದ್ದು, ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮಾಧ್ಯಮ ಸಲಹೆಗಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಪ್ರಸ್ತುತ ಪತ್ರಿಕೋದ್ಯಮದಲ್ಲಿನ ಜೊಳ್ಳು ತೆಗೆಯುವ ಸಂಕ್ರಮಣದ ಕಾಲಘಟ್ಟದಲ್ಲಿ ನಾವಿದ್ದೇವೆ. ಸಾಮಾಜಿಕ ಮಾಧ್ಯಮಗಳ ಭರಾಟೆ ಹೆಚ್ಚಿದ್ದು, ಶೇ.30 ರಷ್ಟು ಮಾತ್ರ ವಿಶ್ವಾಸಾರ್ಹತೆ ಇದು ಹೊಂದಿದೆ. ವಿದ್ಯುನ್ಮಾನ ಮಾಧ್ಯಮ ಶೇ.50 ಮತ್ತು ಮುದ್ರಣ ಮಾಧ್ಯಮ ಶೇ.63 ವಿಶ್ವಾಸಾರ್ಹತೆ ಹೊಂದಿದ್ದು, ಮುದ್ರಣ ಮಾಧ್ಯಮ ಜನರ ವಿಶ್ವಾಸಕ್ಕೆ ಪಾತ್ರವಾಗಿದ್ದ, ವಿಶ್ವಾಸಾರ್ಹತೆಯನ್ನು ಪತ್ರಕರ್ತರೇ ಉತ್ತಮ ಸುದ್ದಿಗಳನ್ನು ನೀಡುವ ಮೂಲಕ ಸಂಪಾದನೆ ಮಾಡಬೇಕೆಂದರು.

Also read: ಸೈನಿಕರ ಕರ್ತವ್ಯ ನಿಷ್ಠೆಯಿಂದಲೇ ದೇಶದಲ್ಲಿ ಶಾಂತಿ ವಾತಾವರಣ: ಶ್ರೀಕೃಷ್ಣ ಉಪಾಧ್ಯಾಯ

ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷರಾದ ಎನ್ ಮಂಜುನಾಥ್ ಮಾತನಾಡಿ, ಆಂಧ್ರ ಪ್ರದೇಶ ಮಾದರಿಯಲ್ಲಿ ಎಲ್ಲ ಪತ್ರಕರ್ತರಿಗೆ ಆರೋಗ್ಯ ಸವಲತ್ತುಗಳು ದೊರಕುವಂತಾಗಬೇಕು. ಪತ್ರಕರ್ತರ ಕ್ಷೇಮ ನಿಧಿ ಒಂದು ಸಮಿತಿ ರಚನೆಯಾಗಬೇಕು. ನಿವೃತ್ತಿ ನಂತರ ಆರೋಗ್ಯ ವಿಮೆಯಂತಹ ಸೌಲಭ್ಯ ನೀಡಬೇಕು. ಪತ್ರಿಕೋದ್ಯಮ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು ಪತ್ರಕರ್ತರನ್ನು ಪ್ರೋತ್ಸಾಹಿಸುವ ಕೆಲಸ ಆಗಬೇಕು. ಸಣ್ಣ ಮತ್ತು ಮಧ್ಯಮ ಪತ್ರಿಕೆಗಳು ಉಳಿಯಬೇಕು ಎಂದರು.

ಹಿರಿಯ ಪತ್ರಕರ್ತರಾದ ಗೋಪಾಲ್ ಎಸ್ ಯಡಗೆರೆ ಮಾತನಾಡಿ, ಇತ್ತೀಚೆಗೆ ಪತ್ರಿಕೋದ್ಯಮಿಗಳು ಹಣಕಾಸು ನಿರ್ವಹಣೆ ತಿಳಿಯದೆ ಸಂಕಷ್ಟಗಳನ್ನು ಎದುರುಸುತ್ತಿರುವುದನ್ನು ಕಾಣುತ್ತಿದ್ದೇವೆ. ನೈತಿಕ ಮೌಲ್ಯವನ್ನು ಅಳವಡಿಸಿಕೊಳ್ಳಬೇಕು. ಹಣಕಾಸು ನಿರ್ವಹಣೆ ಮತ್ತು ನೈತಿಕ ಮೌಲ್ಯಗಳ ಅಳವಡಿಕೆ ಬಗ್ಗೆ ತರಬೇತಿ ನೀಡುವಂತಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ.ವಿ.ಶಿವಕುಮಾರ್ ಮಾತನಾಡಿ, ಮಾಧ್ಯಮ ಸ್ವಾತಂತ್ರö್ಯ ಪೂರ್ವದಿಂದಲೂ ಕಾಲಕ್ಕೆ ತಕ್ಕಂತೆ ಬೆಳೆಯುತ್ತಾ ಬಂದಿದ್ದು, ಪತ್ರಿಕೋದ್ಯಮ ಅತ್ಯಂತ ಶಕ್ತಿಶಾಲಿ ಮಾಧ್ಯಮವಾಗಿದೆ. ಪ್ರಸ್ತುತ ಜನರ ವಿಶ್ವಾಸ ಕೆಳೆದುಕೊಳ್ಳುವಂತಹ ಕೆಲ ಬೆಳವಣಿಗೆ ಆಗುತ್ತಿದ್ದು, ಇದು ಬದಲಾಗಬೇಕು ಎಂದರು. ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಸೌಲಭ್ಯವನ್ನು ರಾಜ್ಯ ಮಟ್ಟಕ್ಕೆ ವಿಸ್ತರಿಸಬೇಕೆಂದು ಕೋರಿದರು.
ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಸ್‌ಎಲ್ ಮತ್ತು ಪಿಯುಸಿಯಲ್ಲಿ ಶೇ.95ಕ್ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳನ್ನು ಅಭಿನಂದಿಸಲಾಯಿತು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಕ್ಷರಿ, ಏಷ್ಯನ್ ಮೀಡಿಯಾ ಕಲ್ಚರಲ್ ಅಸೋಸಿಯೇಷನ್‌ನ ಭಾರತದ ಸಂಚಾಲಕ ಹೆಚ್.ಬಿ.ಮದನಗೌಡ, ಮುಖ್ಯಮಂತ್ರಿ ಮಾಧ್ಯಮ ಸಂಯೋಜಕ ಗಿರೀಶ್ ಕೋಟೆ ಮಾತನಾಡಿದರು.

ವೇದಿಕೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎನ್.ರವಿಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಮಾರುತಿ ಆರ್, ರಾಷ್ಟಿçÃಯ ಮಂಡಳಿ ಸದಸ್ಯರಾದ ಬಂಡಿಗಡಿ ನಂಜುAಡಪ್ಪ, ಪತ್ರಿಕರ್ತರ ಸಂಘದ ಪದಾಧಿಕಾರಿಗಳು, ಪತ್ರಕರ್ತರು, ವಿದ್ಯಾರ್ಥಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news                                                      

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಸೈನಿಕರ ಕರ್ತವ್ಯ ನಿಷ್ಠೆಯಿಂದಲೇ ದೇಶದಲ್ಲಿ ಶಾಂತಿ ವಾತಾವರಣ: ಶ್ರೀಕೃಷ್ಣ ಉಪಾಧ್ಯಾಯ

Next Post

ಜುಲೈ 31ರಂದು ಹಂಸ ಸಾಂಸ್ಕೃತಿಕ ಸೌರಭ, ಹಂಸ ಸನ್ಮಾನ್ ಪ್ರಶಸ್ತಿ ಪ್ರದಾನ 

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜುಲೈ 31ರಂದು ಹಂಸ ಸಾಂಸ್ಕೃತಿಕ ಸೌರಭ, ಹಂಸ ಸನ್ಮಾನ್ ಪ್ರಶಸ್ತಿ ಪ್ರದಾನ 

ಜುಲೈ 31ರಂದು ಹಂಸ ಸಾಂಸ್ಕೃತಿಕ ಸೌರಭ, ಹಂಸ ಸನ್ಮಾನ್ ಪ್ರಶಸ್ತಿ ಪ್ರದಾನ 

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

March 27, 2026
ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

March 27, 2026
ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

March 27, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 27, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

SSLC ಪರೀಕ್ಷೆ ಅಂತಿಮ ಅಂಕ ಕುರಿತು ಶಿಕ್ಷಣ ಸಚಿವರ ಬಿಗ್ ಸ್ಟೇಟ್ಮೆಂಟ್

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL