ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆಯ ಫಲಿತಾಂಶ #Lok Sabha Election Result ಹೊರಬಿದ್ದಿದ್ದು, ಶಿವಮೊಗ್ಗದಿಂದ ಸ್ಪರ್ಧಿಸಿದ್ದ ಕಾಂಗ್ರೆಸ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #Geetha Shivarajkumar ಸೋತಿದ್ದು, ಕೈ ಪಕ್ಷಕ್ಕೆ ಕಹಿಯಾಗಿ ಪರಿಣಮಿಸಿದೆ.
ತಮ್ಮ ಅಚಲವಾದ ಬೆಂಬಲದೊಂದಿಗೆ ಪ್ರೋತ್ಸಾಹಿಸಿದ ಪ್ರತಿಯೊಬ್ಬ @INCKarnataka ಕಾರ್ಯಕರ್ತರು ಹಾಗು ವಿಶ್ವಾಸವನ್ನಿಟ್ಟು ಮತ ಹಾಕಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಧನ್ಯವಾದಗಳು. pic.twitter.com/abKP4PWpuY
— DrShivaRajkumar (@NimmaShivanna) June 4, 2024
ಗೀತಾ ಪತಿ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅವರು ಕ್ಷೇತ್ರದಾದ್ಯಂತ ತಿಂಗಳಿಗೂ ಅಧಿಕ ಕಾಲ ನಿರಂತರವಾಗಿ ಪ್ರಚಾರ ನಡೆಸಿದ್ದರು. ಆದರೆ, ಇದು ಯಾವುದೂ ಸಹ ಚುನಾವಣೆಯಲ್ಲಿ ಫಲ ನೀಡಿಲ್ಲ.

Also read: ಚುನಾವಣೆಯಲ್ಲಿ ಸೋಲು | ಶಿವಮೊಗ್ಗದ ಜನತೆಗೆ ಗೀತಕ್ಕ ಹೇಳಿದ್ದೇನು?
ಮತದಾರನ ನಿರ್ಣಯಕ್ಕೆ ತಲೆ ಬಾಗುತ್ತಾ, ನಾವು ಭವಿಷ್ಯದ ಬದಲಾವಣೆಗಾಗಿ ಪ್ರಯತ್ನಿಸುವುದನ್ನು ಎಂದಿನAತೆಯೇ ಮುಂದುವರಿಸುತ್ತೇವೆ. ತಮ್ಮ ಅಚಲವಾದ ಬೆಂಬಲದೊಂದಿಗೆ ಪ್ರೋತ್ಸಾಹಿಸಿದ ಪ್ರತಿಯೊಬ್ಬ ಕಾರ್ಯಕರ್ತರು ಹಾಗೂ ವಿಶ್ವಾಸವನ್ನಿಟ್ಟು ಮತ ಹಾಕಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಧನ್ಯವಾದಗಳು ಎಂದು ಪೋಸ್ಟ್ ಮಾಡಿದ್ದಾರೆ.

ಈ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ಬಿಜೆಪಿಯ ಬಿ.ವೈ. ರಾಘವೇಂದ್ರ ಅವರಿಗೆ ನೇರ ಪೈಪೋಟಿಯಾಗಿದ್ದ ಗೀತಾ ಶಿವರಾಜಕುಮಾರ್ ಅವರು 5,35,006 ಪಡೆದಿದ್ದಾರೆ. ರಾಘವೇಂದ್ರ ಅವರು 7,78,721 ಮತಗಳನ್ನು ಪಡೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post