No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Friday, March 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ದೆಹಲಿ ಬಾಂಬ್‍ಬ್ಲಾಸ್ಟ್ | ಕಾಂಗ್ರೆಸ್ ನಾಯಕರ ಹೇಳಿಕೆಗಳು ಅತ್ಯಂತ ದುರಂತ ಸಂಗತಿ | ಬಿ.ವೈ. ವಿಜಯೇಂದ್ರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 13, 2025
in ಶಿವಮೊಗ್ಗ
0
ದೆಹಲಿ ಬಾಂಬ್‍ಬ್ಲಾಸ್ಟ್ | ಕಾಂಗ್ರೆಸ್ ನಾಯಕರ ಹೇಳಿಕೆಗಳು ಅತ್ಯಂತ ದುರಂತ ಸಂಗತಿ | ಬಿ.ವೈ. ವಿಜಯೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ದೆಹಲಿ ಬಾಂಬ್‍ಬ್ಲಾಸ್ಟ್ #Delhi Bomb Blast ಉಗ್ರರ ದಾಳಿಯಾಗಿದ್ದು ಇದನ್ನು ದೇಶದ ಜನ ಬಲವಾಗಿ ಖಂಡಿಸಿದ್ದು, ಈಗಾಗಲೇ ಕೇಂದ್ರ ಸರ್ಕಾರ ಉಗ್ರರ ದಮನಕ್ಕೆ ಅನೇಕ ಕ್ರಮ ಕೈಗೊಂಡಿದೆ. ಆದರೆ ಇಂತಹ ಸಂದಿಗ್ಧ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ಹೇಳಿಕೆಗಳು ಅತ್ಯಂತ ದುರಂತ ಸಂಗತಿಯಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ #B Y Vijayendra ಹೇಳಿದ್ದಾರೆ.

ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಮಾಹಿತಿ ಪ್ರಕಾರ ಸಂಸತ್ ಭವನ, ಬಿಜೆಪಿ ಕೇಂದ್ರ ಕಛೇರಿ, ಸೇನಾ ಭವನ, ವಾಯುಪಡೆ ಕಛೇರಿ ಮುಂತಾದ ಪ್ರಮುಖ ಸ್ಥಳಗಳು ಉಗ್ರರ ಹಿಟ್‍ಲಿಸ್ಟ್‍ನಲ್ಲಿತ್ತು ಎಂಬುದು ವರದಿಯಾಗಿದೆ. ಈ ಸಂದರ್ಭದಲ್ಲಿ ದೇಶದ ಎಲ್ಲಾ ರಾಜಕೀಯ ಪಕ್ಷಗಳು ಒಟ್ಟಾಗಿ ಮಾತನಾಡಬೇಕಾಗುತ್ತದೆ. ನಾವೆಲ್ಲರೂ ಭಾರತೀಯರು ಎಂದು ಒಗ್ಗಟ್ಟು ಪ್ರದರ್ಶನ ಮಾಡಬೇಕಿತ್ತು. ಉಗ್ರರ ಕೃತ್ಯವನ್ನು ಖಂಡಿಸಬೇಕಿತ್ತು. ಆದರೆ ದುರಂತವೆಂದರೆ ವಿಪಕ್ಷ ನಾಯಕ ರಾಹುಲ್‍ಗಾಂಧಿಯವರು ಈ ಘಟನೆ ಬಗ್ಗೆ ಒಂದೇ ಒಂದು ಪ್ರತಿಕ್ರಿಯೆ ನೀಡಿಲ್ಲ. ಬದಲಾಗಿ ಕಾಂಗ್ರೆಸ್ ಪಕ್ಷದ ಕೆಲವು ಹಿರಿಯ ನಾಯಕರು ಮನಬಂದಂತೆ ಮಾತನಾಡುತ್ತಿದ್ದಾರೆ. ಬಿಹಾರ್ ಚುನಾವಣೆಗೂ ಲಿಂಕ್ ಮಾಡುತ್ತಿದ್ದಾರೆ. ಕಾಂಗ್ರೆಸ್ ಮುಖಂಡರ ಈ ಹೇಳಿಕೆಗಳು ಮೂರ್ಖತನದ ಪರಮಾವಧಿಯಾಗಿದ್ದು, ದೇಶದ್ರೋಹದ ಹೇಳಿಕೆಯಾಗಿದೆ ಎಂದರು.
ನಾನು ಕಾಂಗ್ರೆಸ್ ಹಿರಿಯ ನಾಯಕರಲ್ಲಿ ವಿನಂತಿಮಾಡುವುದೇನೆಂದರೆ, ದೇಶದ ಸಂದಿಗ್ಧ ಪರಿಸ್ಥಿತಿಯಲ್ಲಿ ಎಲ್ಲರೂ ಒಟ್ಟಾಗಿ ಕೆಲಸಮಾಡಬೇಕಾಗುತ್ತದೆ. ದೇಶದ ಏಕತೆಯನ್ನು ಒಡೆಯುವ ಹೇಳಿಕೆಗಳು ಅಕ್ಷಮ್ಯ ಅಪರಾಧವಾಗುತ್ತದೆ ಎಂದರು. ನಿನ್ನೆ ಕೆಲವರು ಕೇಂದ್ರ ಗೃಹಸಚಿವ ಅಮಿತ್ ಷಾ ಅವರಿಗೆ ಬಳೆ ಕಳುಹಿಸಿದ್ದಾರೆ. ಆದರೆ ಸ್ವಾತಂತ್ರ್ಯ ಬಂದಾಗಿನಿಂದ ಆದ ಬಯೋತ್ಪಾದಕ ಘಟನೆಗಳ ಅವಲೋಕನ ಮಾಡಿದರೆ ಕಾಂಗ್ರೆಸ್ ನಾಯಕರು ಎಷ್ಟು ಸಲ ಬಳೆ ಹಾಕಬೇಕಿತ್ತು ? ಬಳೆ ಫ್ಯಾಕ್ಟರಿಯನ್ನೇ ಹಾಕಬೇಕಾಗುತ್ತದೆ. ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ ಉಗ್ರರ ದಾಳಿಯಲ್ಲಿ ಅನೇಕ ನಾಗರೀಕರು ಮತ್ತು ಯೋಧರನ್ನು ನಾವು ಕಳೆದುಕೊಂಡಿದ್ದೇವೆ. ದೇಶ ಒಟ್ಟಾಗಿ ಶಕ್ತಿ ತುಂಬುವ ಕೆಲಸ ಮಾಡಬೇಕಾದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ಹೇಳಿಕೆ ದೇಶದ್ರೋಹದ ಕೆಲಸವಾಗಿದೆ. ಈ ಘಟನೆಗಳಲ್ಲಿ ಅನೇಕ ವೈದ್ಯರು ಕೈಜೋಡಿಸಿರುವುದು ಗಂಭೀರ ವಿಚಾರವಾಗಿದೆ ಎಂದರು.

ಸರ್ಕಾರಕ್ಕೆ ರೈತರ ಬಗ್ಗೆ ಕಿಂಚಿತ್ತೂ ಕರುಣೆ ಇಲ್ಲ, ಕಬ್ಬು ಬೆಳೆಗಾರರು ಸಂಕಷ್ಟದಲ್ಲಿದ್ದು ವಾರದಿಂದ ಧರಣಿ ಮಾಡಿದರೂ ಜಿಲ್ಲಾ ಉಸ್ತುವಾರಿ ಸಚಿವರಾಗಲಿ, ಸಕ್ಕರೆ ಸಚಿವರಾಗಲೀ ಸರ್ಕಾರದ ಯಾವೊಬ್ಬ ಸಚಿವರೂ ಸ್ಥಳಕ್ಕೆ ಹೋಗಿರಲಿಲ್ಲ ನಾನು ಒಂದು ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷನಾಗಿ ವಿರೋಧಪಕ್ಷದವನಾಗಿ ರೈತರ ಹಿತಕಾಪಾಡಲು ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಿದ್ದೆ. ಆಗ ಸರ್ಕಾರ ಎಚ್ಚೆತ್ತುಕೊಂಡಿದೆ. ಮುಖ್ಯಮಂತ್ರಿಗಳು ಹುಟ್ಟುಹಬ್ಬ ಆಚರಿಸಲು ವಿಜಯೇಂದ್ರ ಅಲ್ಲಿಗೆ ಹೋಗಬೇಕಿತ್ತಾ ? ಎಂದು ಬಾಲಿಷ ಹೇಳಿಕೆ ನೀಡಿದ್ದಾರೆ. ಸರ್ಕಾರ ರೈತರಪರ ಏನೂ ಮಾಡದೆ ಅವರನ್ನು ಕರೆದು ಚರ್ಚಿಸದೆ ಇದ್ದಾಗ ನಾನು ಹೋದರೆ ಏನು ತಪ್ಪು ? ನಿಮ್ಮ ಒಳಜಗಳ ಬಿಟ್ಟು ರೈತರ ಸಂಕಷ್ಟ ಬಗೆಹರಿಸಿ. ಇನ್ನೂ ರಾಜ್ಯದಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭವಾಗಿಲ್ಲ. ಕಂದಾಯ ಸಚಿವರು ಹೇಳಿಕೆ ನೀಡಿ 35 ದಿನವಾದರೂ ಯಾವುದೇ ರೈತನಿಗೆ ಅತಿವೃಷ್ಟಿ ಪರಿಹಾರ ಸಿಕ್ಕಿಲ್ಲ. ರೈತರ ಬಗ್ಗೆ ನಿರಾಸಕ್ತಿ ಒಳ್ಳೆಯದಲ್ಲ. ರೈತರು ವಿಕೋಪ ನಿಮ್ಮ ಸರ್ಕಾರವನ್ನು ಕೆಡಹುತ್ತದೆ ಎಂದರು.
ಅಸಂಘಟಿತ ಕಾರ್ಮಿಕರ ಕಲ್ಯಾಣದ ಹೆಸರಿನಲ್ಲಿ ರಾಜ್ಯಸರ್ಕಾರ ಹೊಸದಾಗಿ ಪೆಟ್ರೋಲ್ ಮೇಲೆ ಲೀಟರ್‍ಗೆ 1ರೂ. ಸೆಸ್ಸನ್ನು ಸಂಗ್ರಹಿಸಲು ಹೊರಟಿದೆ. ಈಗಾಗಲೇ ಮೂರುಬಾರಿ ಜಾಸ್ತಿ ಮಾಡಿದ್ದಾರೆ. ಕಾರ್ಮಿಕರ ಕಲ್ಯಾಣದ ನೆಪದಲ್ಲಿ ತಮ್ಮ ಕಲ್ಯಾಣ ಮಾಡಿಕೊಳ್ಳುವ ಷಡ್ಯಂತ್ರವಾಗಿದೆ ಎಂದರು.

ಸರ್ಕಾರಕ್ಕೆ ರಸ್ತೆ ಗುಂಡಿ ಮುಚ್ಚುವ ಯೋಗ್ಯತೆ ಇಲ್ಲ. ವಿಪಕ್ಷಗಳ ಹೋರಾಟದ ಫಲವಾಗಿ ಕೇವಲ ಬೆಂಗಳೂರಿಗೆ ಮಾತ್ರ 3000 ಕೋಟಿ ರೂ. ಬಿಡುಗಡೆ ಮಾಡಿದ್ದರೆ. ಬರಬಂದಾಗ, ನೆರೆಬಂದಾಗ, ಕಬ್ಬಿನ ಸಮಸ್ಯೆ ಬಂದಾಗ, ಎಲ್ಲದ್ದಕ್ಕೂ ಕೇಂದ್ರದ ಕಡೆ ಬೆಟ್ಟು ತೋರಿಸುತ್ತಾರೆ. ಹಾಗಾದರೆ ನಿಮ್ಮ ಕರ್ತವ್ಯವೇನು ಎಂದು ಪ್ರಶ್ನಿಸಿದರು.
ಬಿಹಾರ್ ಚುನಾವಣಾ ಫಲಿತಾಂಶದಿಂದ ರಾಜ್ಯ ಸರ್ಕಾರದಲ್ಲಿ ಬದಲಾವಣೆಯಾಗುವುದೇ ಎಂಬ ಪ್ರಶ್ನೆಗೆ ಕಾಂಗ್ರೆಸ್ ನಾಯಕರು ಮತ್ತು ಶಾಸಕರ ಹೇಳಿಕೆಗಳೇ ಅದಕ್ಕೆ ಉತ್ತರವಾಗಿದೆ. ಸಂಪುಟ ಸದಸ್ಯರೇ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಸಿಎಲ್‍ಪಿ ತೀರ್ಮಾನ ಅಂತಿಮ ಎನ್ನುತ್ತಿದ್ದಾರೆ. ರಾಜ್ಯ ಸರ್ಕಾರವೆಂದರೆ ಕೇವಲ ಬೆಂಗಳೂರಿಗೆ ಸೀಮಿತವಾಗಿದೆ. ರೈತರ ಮತ್ತು ಜನರ ಯಾವುದೇ ಸಮಸ್ಯೆಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದರು.

ಸರ್ಕಾರ ಅಭಿವೃದ್ಧಿ ಶೂನ್ಯವಾಗಿದೆ. ಬಿಹಾರ್ ಚುನಾವಣೋತ್ತರ ಸಮೀಕ್ಷೆಯಂತೆ ಎನ್‍ಡಿಎ ಸರ್ಕಾರ ಅಲ್ಲಿ ಅಧಿಕಾರಕ್ಕೆ ಬರಲಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕ ಡಿ.ಎಸ್. ಅರುಣ್, ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ಮಾಜಿ ಅಧ್ಯಕ್ಷ ಟಿ.ಡಿ. ಮೇಘರಾಜ್, ಕೆ.ವಿ. ಅಣ್ಣಪ್ಪ, ರಾಜೇಶ್ ಕಾಮತ್ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

    

Tags: B Y VijayendraDelhi Bomb BlastKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsದೆಹಲಿ ಬಾಂಬ್‍ಬ್ಲಾಸ್ಟ್ಬಿ.ವೈ. ವಿಜಯೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಶಿವಮೊಗ್ಗ ರೌಂಡ್ ಟೇಬಲ್ ವತಿಯಿಂದ ಸರ್ಜಿ ಫೌಂಡೇಶನ್’ಗೆ ಆಂಬ್ಯುಲೆನ್ಸ್ ಕೊಡುಗೆ

Next Post

ವಿದ್ಯಾರ್ಥಿಗಳಿಗೆ ರಫ್ತು ಕ್ಷೇತ್ರದ ಮಾಹಿತಿ ಅತ್ಯವಶ್ಯ: ಜೋಯ್ಸ್ ರಾಮಾಚಾರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿದ್ಯಾರ್ಥಿಗಳಿಗೆ ರಫ್ತು ಕ್ಷೇತ್ರದ ಮಾಹಿತಿ ಅತ್ಯವಶ್ಯ: ಜೋಯ್ಸ್ ರಾಮಾಚಾರಿ

ವಿದ್ಯಾರ್ಥಿಗಳಿಗೆ ರಫ್ತು ಕ್ಷೇತ್ರದ ಮಾಹಿತಿ ಅತ್ಯವಶ್ಯ: ಜೋಯ್ಸ್ ರಾಮಾಚಾರಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
JSW ಇಂಡಿಯನ್ ಓಪನ್‌ನಲ್ಲಿ ಭಾರತಕ್ಕೆ ಶುಭಾರಂಭ!

JSW ಇಂಡಿಯನ್ ಓಪನ್‌ನಲ್ಲಿ ಭಾರತಕ್ಕೆ ಶುಭಾರಂಭ!

March 20, 2026
ಶಿವಮೊಗ್ಗ ಮೃಗಾಲಯದಲ್ಲಿ ನೀರಾನೆ ದಾಳಿ | ವೈದ್ಯೆ ಸಾವು | ಹೇಗಾಯ್ತು ಘಟನೆ?

ಶಿವಮೊಗ್ಗ ಮೃಗಾಲಯದಲ್ಲಿ ನೀರಾನೆ ದಾಳಿ | ವೈದ್ಯೆ ಸಾವು | ಹೇಗಾಯ್ತು ಘಟನೆ?

March 20, 2026
ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

March 19, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL