ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹೊಸನಗರ ತಾಲೂಕಿನ ಅಮೃತ ಗ್ರಾಮದ ಸರ್ಕಾರಿ ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿನಿಯೊಬ್ಬಳಿಗೆ ಶಿಕ್ಷಕರೊಬ್ಬರು ಬಲವಂತವಾಗಿ ಮೊಟ್ಟೆ ತಿನ್ನಿಸಿದ ಆರೋಪ ಮಾಡಲಾಗಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಅಮೃತ ಶಾಲೆಯಲ್ಲಿ 2ನೆಯ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಶಿಕ್ಷಕರೊಬ್ಬರು ಬಲವಂತವಾಗಿ ಮೊಟ್ಟೆ ತಿನ್ನಿಸಿದ ಆರೋಪ ಕೇಳಬಂದಿದ್ದು, ಆಕೆಯ ಆರೋಗ್ಯದಲ್ಲಿ ಏರುಪೇರು ಕಂಡುಬAದಿದೆ ಎಂದು ವರದಿಯಾಗಿದೆ.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ ಮಾಡಲಾಗುತ್ತದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣನ್ನು ಕೊಡಲಾಗುತ್ತದೆ. ಯಾವ ಮಕ್ಕಳಿಗೆ ಯಾವುದನ್ನು ವಿತರಿಸಬೇಕು ಎಂಬುದನ್ನು ವಿದ್ಯಾರ್ಥಿ ಹಾಗೂ ಪೋಷಕರಿಂದ ಶಿಕ್ಷಕರು ಮಾಹಿತಿ ಪಡೆದಿರುತ್ತಾರೆ.
Also read: ಹಲವು ವಿಶೇಷ ರೈಲುಗಳ ರದ್ದತಿ ಸುದ್ದಿ: ನೈಋತ್ಯ ರೈಲ್ವೆ ಮಹತ್ವದ ಸ್ಪಷ್ಟೀಕರಣ
ಈ ಶಾಲೆಯ 2ನೆಯ ತರಗತಿಯಲ್ಲಿ ಬ್ರಾಹ್ಮಣ ವಿದ್ಯಾರ್ಥಿನಿಯೊಬ್ಬಳು ಮೊಟ್ಟೆ ತಿನ್ನುವುದಿಲ್ಲ ಎಂದರೂ ಸಹ ಶಿಕ್ಷಕರೊಬ್ಬರು ಬಲವಂತವಾಗಿ ಆಕೆಗೆ ಮೊಟ್ಟೆ ತಿನ್ನಿಸಿದ್ದಾರೆ. ಆ ಬಳಿಕ ಬಾಲಕಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post