ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರೈಲ್ವೆ ನಿಲ್ದಾಣ ಸಮೀಪದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಾಯಣ್ಣನ ಪ್ರತಿಮೆ ಸ್ಥಾಪಿಸಬೇಕೆಂದು ಆಗ್ರಹಿಸಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ Minister Madhu Bangarappa ಅವರಿಗೆ ಮನವಿ ಸಲ್ಲಿಸಲಾಯಿತು.
Also read: ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿ: ಕಮಲ ನಟರಾಜ್ ಕಿವಿಮಾತು
ನಾಡಿನ ಉಳಿವಿಗಾಗಿ ತನ್ನ ಪ್ರಾಣ ತ್ಯಾಗ ಮಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜನ್ಮದಿನವಾದ ಆ.15ರಂದು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಭಾವಚಿತ್ರ ಇಟ್ಟು ಗೌರವ ಸಲ್ಲಿಸಬೇಕು ಎಂದು ಆಗ್ರಹಿಸಿದರು.
ಮನವಿ ಸಲ್ಲಿಕೆ ಸಂದರ್ಭದಲ್ಲಿ ಸಂಘಟನೆ ಪ್ರಮುಖರಾದ ಮಂಜುನಾಥ್, ಸಂತೋಷ್, ಸತೀಶ್, ಲೋಕೇಶ್, ರಾಜಕುಮಾರ, ಮನು, ಗುರುಪ್ರಸಾದ್ ಇನ್ನಿತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post