No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Thursday, October 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರಿಗೆ ಬೇಡಿಕೆ: ನಾಲ್ಕು ವಿಭಿನ್ನ ಡಿಮ್ಯಾಂಡ್ ಸುದ್ದಿ ಒಟ್ಟಿಗೆ ಓದಿ

kalpa News by kalpa News
February 16, 2023
in ಶಿವಮೊಗ್ಗ
0
ಕಮಲದಾಕೃತಿಯ ವಿಮಾನ ನಿಲ್ದಾಣದಲ್ಲಿ, ವಿಮಲಾಕೃತಿಯ ಹಾರಾಟ ಶೀಘ್ರದಲ್ಲೇ ಶಿವಮೊಗ್ಗದಲ್ಲಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಶಿವಮೊಗ್ಗದ ಸೋಗಾನೆ ಬಳಿ ನಿರ್ಮಾಣಗೊಂಡು ಉದ್ಘಾಟನೆಗೆ ಸಿದ್ಧಗೊಂಡಿರುವ ವಿಮಾನ ನಿಲ್ದಾಣಕ್ಕೆ 12ನೇ ಶತಮಾನದ ಮಹಾನ್ ಸಂತ ಶ್ರೇಷ್ಟ ತತ್ವಜ್ಞಾನಿ ಹಾಗೂ ಜಗತ್ತಿನ ಮೊಟ್ಟ ಮೊದಲ ಸಂಸತ್ತಿನ ಅಧ್ಯಕ್ಷರಾದ ಅಲ್ಲಮ ಪ್ರಭು ದೇವರ ಹೆಸರನ್ನು ಇಡಲು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ರಾಷ್ಟ್ರೀಯ ಬಸವದಳ ಟ್ರಸ್ಟ್ ಶಿವಮೊಗ್ಗ ವತಿಯಿಂದ ಮನವಿ ಸಲ್ಲಿಸಲಾಯಿತು.

ಪ್ರಜಾಪ್ರಭುತ್ವದ ತತ್ವ ಸಿದ್ಧಾಂತಗಳಿಗೆ ಪ್ರಪ್ರಥಮವಾಗಿ ಮುನ್ನುಡಿ ಬರೆದ ಹೆಗ್ಗಳಿಕೆ ನಮ್ಮ ದೇಶದ್ದಾಗಿದೆ. 12ನೆ ಶತಮಾನದಲ್ಲಿ ಗುರುಬಸವಣ್ಣನವರು ಸಂಸ್ಥಾಪಿಸಿದ ಅನುಭವ ಮಂಟಪವು ಜಗತ್ತಿನ ಮೊಟ್ಟಮೊದಲ ಸಂಸತ್ ಎಂದೆನಿಸಿಕೊಂಡಿದೆ. ಅನುಭವ ಮಂಟಪದ ಮೊದಲ ಅಧ್ಯಕ್ಷರಾಗಿ ಪ್ರಜಾಪ್ರಭುತ್ವದ ಮೌಲ್ಯಗಳ ಸಿದ್ಧಾಂತವನ್ನು ಜಗತ್ತಿಗೆ ಪಸರಿಸಿದ ಹಿರಿಮೆ ಮಹಾನ್ ಅನುಭಾವಿ ಅಲ್ಲಮಪ್ರಭು ದೇವರದ್ದು, ಅವರು ನಮ್ಮ ದೇಶದ ಅಸ್ಮಿತೆ ಎನ್ನಬಹುದು. ಅವರ ಹೆಸರಿನಲ್ಲಿ ರಾಜ್ಯ ಹಾಗೂ ದೇಶದ ಯಾವುದೇ ಸ್ಥಳಗಳಿಗೆ ಹೆಸರು ಇಟ್ಟಿರುವ ಉದಾಹರಣೆಗಳಿಲ್ಲ. ಇದು ವಿಷಾದದ ಸಂಗತಿಯಾಗಿದೆ.
ಪ್ರಧಾನಿ ಮೋದಿಯವರು ಕೂಡ ಪ್ರಜಾಪ್ರಭುತ್ವ ಸಿದ್ಧಾಂತಗಳ ತಾಯಿಬೇರು. ಕರ್ನಾಟಕ ರಾಜ್ಯದಲ್ಲಿ ಉದಯವಾದ ಪ್ರಮುಖ ಸಂಗತಿಗಳನ್ನು ಸಂಸತ್‌ನಲ್ಲಿ ಸದಾ ಸ್ಮರಿಸುತ್ತಿರುವುದನ್ನು ನಾವೆಲ್ಲರೂ ಕಂಡಿದ್ದೇವೆ. ಹಾಗೆಯೆ ಅಲ್ಲಮಪ್ರಭು ದೇವರ ಜನ್ಮಸ್ಥಳ ಶಿವಮೊಗ್ಗ ಜಿಲ್ಲೆಯಾಗಿದೆ. ಆದ್ದರಿಂದ ವಿಮಾನ ನಿಲ್ದಾಣಕ್ಕೆ ಅಲ್ಲಮಪ್ರಭು ದೇವರ ಹೆಸರಿಡುವುದು ಸರ್ವರೀತಿಯಿಂದಲೂ ಸರ್ವೋತ್ತಮ ಆಯ್ಕೆ ಎನಿಸಿದೆ. ಆದ್ದರಿಂದ ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡುವುದರ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ ಜೀವ ತುಂಬುವ ಕಾರ್ಯ ಮಾಡಿದಂತೆ ಆಗಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ರಾಷ್ಟ್ರೀಯ ಬಸವದಳದ ಸದಸ್ಯರು ಪಾಲ್ಗೊಂಡಿದ್ದರು.

ಕೆಳದಿ ಚನ್ನಮ್ಮ ಹೆಸರಿಡುವಂತೆ ಎಎಪಿ ಆಗ್ರಹ
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ Shivamogga Airport ಮಾಜಿ ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪನವರ ಹೆಸರು ಇಡುವಲ್ಲಿ ಇಡೀ ಬಿಜೆಪಿಯೇ ನಿರ್ಲಕ್ಷ್ಯ ತೋರಿದೆ. ಯಡಿಯೂರಪ್ಪನವರನ್ನು ಮೂಲೆಗುಂಪು ಮಾಡುವ ಹುನ್ನಾರ ಇದರಲ್ಲಿ ಅಡಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯದರ್ಶಿ ಕೆ. ದಿವಾಕರ್ ಆರೋಪಿಸಿದ್ದಾರೆ.

ಅವರು ಇಂದು ಪ್ರೆಸ್ ಟ್ರಸ್ಟ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಲು ಮಾಜಿ ಸಿಎಂ ಯಡಿಯೂರಪ್ಪ ಅವರೇ ಕಾರಣರಾಗಿದ್ದಾರೆ. ಅವರ ಸತತ ಪರಿಶ್ರಮದಿಂದ ವಿಮಾನ ನಿಲ್ದಾಣ ಈಗ ಉದ್ಘಾಟನೆಗೆ ಸಿದ್ಧವಾಗಿದೆ. ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡುವುದು ಸೂಕ್ತವಾಗಿತ್ತು. ಆದರೆ ರಾಜ್ಯ ಬಿಜೆಪಿ ಮುಖಂಡರು ಯಡಿಯೂರಪ್ಪ ಅವರ ಹೆಸರನ್ನು ಕೆಂದ್ರಕ್ಕೆ ಶಿಫಾರಸು ಮಾಡಿಯೇ ಇಲ್ಲ. ಹೋಗಲಿ, ಸಂಪುಟದಲ್ಲೂ ಚರ್ಚಿಸಿಯೂ ಇಲ್ಲ. ಸುಮ್ಮನೆ ಬಾಯಿಮಾತಿಗೆ ಹೇಳಿದ್ದಾರೆಯೇ ಹೊರತು ಆ ಬಗ್ಗೆ ಯಾವ ನಿರ್ಧಾರವನ್ನೂ ರಾಜ್ಯ ಬಿಜೆಪಿ ತೆಗೆದುಕೊಳ್ಳಗದೆ ಯಡಿಯೂರಪ್ಪನವರಿಗೆ ಅವಮಾನ ಮಾಡಿದ್ದಾರೆ ಎಂದರು.
ಈಗ ಯಡಿಯೂರಪ್ಪನವರೆ ನನ್ನ ಹೆಸರು ಬೇಡ. ಕುವೆಂಪು ಅವರ ಹೆಸರನ್ನು ಇಡಿ ಎಂದು ಹೇಳಿದ್ದಾರೆ. ಆದರೆ ಕುವೆಂಪುರವರ ಹೆಸರು ಈಗಾಗಲೇ ಎಲ್ಲಾ ಕಡೆ ಇದೆ. ಆದ್ದರಿಂದ ಜಿಲ್ಲೆಯ ಕೆಳದಿ ಅರಸರ ಕಾಲದಲ್ಲಿ ಸುಮಾರು 25 ವರ್ಷಗಳ ಕಾಲ ಆಡಳಿತ ನಡೆಸಿ ಬಿದನೂರನ್ನು ಉಳಿಸಿ ಇತಿಹಾಸದಲ್ಲಿ ಅತ್ಯಂತ ಹೆಸರು ಮಾಡಿರುವ ಕೆಳದಿ ಚನ್ನಮ್ಮ ಹೆಸರು ಇಡಬೇಕು. ಈಗಾಗಲೇ ಇದಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳಿಗೆ ಎಎಪಿ ವತಿಯಿಂದ ಮನವಿ ಸಲ್ಲಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕಿರಣ್, ನಜೀರ್, ಶಿವಕುಮಾರ್, ಸತೀಶ್ ಗೌಡ, ಲಕ್ಷ್ಮೀಶ, ಹರೀಶ್, ಸುರೇಶ್‌ಕುಮಾರ್ ಇದ್ದರು.

ಕುವೆಂಪು ಅವರ ಹೆಸರಿಡುವಂತೆ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಆಗ್ರಹ

ಯಾವುದೇ ವಿವಾದವನ್ನು ಸೃಷ್ಟಿ ಮಾಡದೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ವಿಶ್ವಮಾನವ ಕುವೆಂಪು ಅವರ ಹೆಸರನ್ನು ಇಡಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಆಗ್ರಹಿಸಿದೆ.

ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಧ್ಯಯನ ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್, ಈ ಮೊದಲು ಬಿಜೆಪಿಯ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ಇಡುವುದಾಗಿ ತಿಳಿದುಬಂದಿತ್ತು. ಆದರೆ ಅವರು ಅದನ್ನು ತಿರಸ್ಕರಿಸಿ ಕುವೆಂಪು ಅವರ ಹೆಸರನ್ನು ಇಡಲು ಹೇಳಿರುವುದನ್ನು ನಮ್ಮ ಸಂಘಟನೆ ಸ್ವಾಗತಿಸುತ್ತದೆ. ಹಾಗಾಗಿ ಒಮ್ಮೆ ಕುವೆಂಪು ಅವರ ಹೆಸರನ್ನು ಇಡಲು ನಿರ್ಧಾರ ಮಾಡಿದ ಮೇಲೆ ಬೇರೆ ಬೇರೆ ಸಂಘಟನೆಗಳು, ಸಮಾಜಗಳು ಬೇರೆ ಹೆಸರನ್ನು ಸೂಚಿಸುವುದು, ವಿವಾದಗಳನ್ನು ಸೃಷ್ಟಿಸುವುದು ಸರಿಯಲ್ಲ ಎಂದರು.
ಕುವೆಂಪು ಈ ಜಿಲ್ಲೆಯ ಹೆಮ್ಮೆ. ರಾಷ್ಟçಕವಿ ನಾಡೋಜ ಪ್ರಶಸ್ತಿ ವಿಜೇತ, ಜೊತೆಗೆ ವಿಶ್ವಮಾನವ ಸಂದೇಶ ಸಾರಿದವರು. ಯಡಿಯೂರಪ್ಪನವರೆ ಇವರ ಹೆಸರನ್ನು ಸೂಚಿಸಿದ್ದಾರೆ. ಇದು ಸರ್ವಸಮ್ಮತ ಕೂಡ. ಹಾಗಾಗಿ ಕುವೆಂಪು ಅವರ ಹೆಸರನ್ನೇ ಅಂತಿಮಗೊಳಿಸಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಎಸ್.ವಿ. ರಾಜಮ್ಮ, ಚಾಬುಸಾಬ್, ಬಿ.ಲಿಂಗರಾಜು, ಡಾ. ನೇತ್ರಾವತಿ, ಗೋಪಾಲಕೃಷ್ಣ. ಟಿ.ಬಿ. ಕೃಷ್ಣಪ್ಪ, ಶಂಕ್ರಾ ನಾಯ್ಕ ಇದ್ದರು.

Also read: ರಾಜ್ಯ ಸರ್ಕಾರದ ಯೋಜನೆಗಳನ್ನು ಕ್ಷೇತ್ರಮಟ್ಟದಲ್ಲಿ ಪ್ರಚಾರ ಮಾಡಿ: ಸಿಎಂ

 

ಕೆಳದಿ ಅರಸರ ಅಥವಾ ಜಿಲ್ಲೆಯ ಶರಣರ ಹೆಸರನ್ನು ಇಡುವಂತೆ ಆಗ್ರಹ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಳದಿ ಅರಸರ ಅಥವಾ ಜಿಲ್ಲೆಯ ಶರಣರ ಹೆಸರನ್ನು ಇಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಆಗ್ರಹಿಸಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ರುದ್ರಮನಿ ಸಜ್ಜನ್, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಅವರ ಹೆಸರನ್ನು ಇಡಬೇಕಿತ್ತು. ಆದರೆ, ಅವರು ಅದಕ್ಕೆ ಒಪ್ಪಿಲ್ಲ. ಆದ್ದರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು ವರ್ಷಗಳ ಕಾಲ ರಾಜ್ಯಭಾರ ಮಾಡಿದ ಕೆಳದಿ ಅರಸರ ಹೆಸರಿಡಬೇಕು. ಅದರಲ್ಲಿ ಮುಖ್ಯವಾಗಿ ಕೆಳದಿ ಶಿವಪ್ಪನಾಯಕ ಶಿಸ್ತಿಗೆ ಹೆಸರಾದವರು. ಹಲವು ವರ್ಷಗಳ ಕಾಲ ಆಡಳಿತ ನಡೆಸಿದ್ದಾರೆ. ಗೋವಾ ಮತ್ತು ಕೇರಳದವರೆಗೂ ಅವರ ರಾಜ್ಯ ವಿಸ್ತಾರವಾಗಿತ್ತು. ಕಂದಾಯ ವ್ಯವಸ್ಥೆಯನ್ನು ಒಂದು ಶಿಸ್ತಿಗೆ ಒಳಪಡಿಸಿದ ಕೀರ್ತಿ ಅವರದ್ದು. ಆದ್ದರಿಂದ ಅವರ ಹೆಸರನ್ನೇ ವಿಮಾನ ನಿಲ್ದಾಣಕ್ಕೆ ಇಡಬೇಕು ಎಂದರು.
ಆಕಸ್ಮಾತ್ ಶಿವಪ್ಪನಾಯಕ ಹೆಸರಿಡಲು ಆಗದಿದ್ದರೆ ಕೆಳದಿ ಚೆನ್ನಮ್ಮ ಅವರ ಹೆಸರನ್ನಾದರೂ ಇಡಬೇಕು. ದೇಶದಲ್ಲಿರುವ ವಿಮಾನ ನಿಲ್ದಾಣಕ್ಕೆ ಇಂದಿರಾಗಾಂಧಿ ಅವರ ಹೆಸರನ್ನು ಬಿಟ್ಟರೆ ಯಾವ ಮಹಿಳೆಯ ಹೆಸರನ್ನೂ ವಿಮಾನ ನಿಲ್ದಾಣಕ್ಕೆ ಇಟ್ಟಿಲ್ಲ. ಆದ್ದರಿಂದ ಜಿಲ್ಲೆಯಲ್ಲಿ ಸುಮಾರು  25 ವರ್ಷಗಳ ಕಾಲ ಆಡಳಿತ ನಡೆಸಿ ಮರಾಠ ಸಾಮ್ರಾಜ್ಯವನ್ನು ಉಳಿಸಿದ ಕೀರ್ತಿಗೂ ಪಾತ್ರರಾಗಿರುವ ಕೆಳದಿ ಚೆನ್ನಮ್ಮನ ಹೆಸರನ್ನಾದರೂ ಇಡಬೇಕು ಎಂದರು.

ಕೆಳದಿ ಅರಸರ ಹೆಸರನ್ನು ಬಿಟ್ಟರೆ ಇನ್ನುಳಿದಂತೆ ಶಿವಮೊಗ್ಗ ಶರಣರ ನಾಡಾಗಿದೆ. ಅಕ್ಕಮಹಾದೇವಿ, ಅಲ್ಲಮಪ್ರಭು ಶರಣರ ಪಟ್ಟಿಯಲ್ಲಿ ಆದ್ಯತೆಯ ಸ್ಥಾನ ಪಡೆದಿದ್ದಾರೆ. ಹಾಗಾಗಿ ಅಲ್ಲಮಪ್ರಭು ಅಥವಾ ಅಕ್ಕಮಹಾದೇವಿ ಅವರ ಹೆಸರನ್ನಾದರೂ ಇಡಬೇಕು ಎಂದರು.

ಕೆಳದಿ ಶಿವಪ್ಪನಾಯಕ ಅಥವಾ ಕೆಳದಿ ಚೆನ್ನಮ್ಮ ಹೆಸರಿಡುವಂತೆ ಈಗಾಗಲೇ ಪ್ರಧಾನ ಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಮಹೇಶಮೂರ್ತಿ ಸಿ., ಆನಂದಮೂರ್ತಿ, ಪಾಲಾಕ್ಷಪ್ಪ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamogga AirportShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ_ನ್ಯೂಸ್
Share218Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನೆಹರೂ ಕ್ರೀಡಾಂಗಣದ ಅವ್ಯವಸ್ಥೆ ಹಿನ್ನೆಲೆ ಸ್ಮಾರ್ಟ್ ಸಿಟಿ ಅಧಿಕಾರಿಗಳ ಭೇಟಿ, ಪರಿಶೀಲನೆ

Next Post

ರಾಷ್ಟ್ರದ ರಕ್ಷಣಾ ವಲಯ ಬೇಡಿಕೆಯ ಪೂರೈಕೆಯಲ್ಲಿ ರಾಜ್ಯದ ಪಾಲು ಶೇ.65: ಸಿಎಂ ಬೊಮ್ಮಾಯಿ

kalpa News

kalpa News

Next Post
ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ

ರಾಷ್ಟ್ರದ ರಕ್ಷಣಾ ವಲಯ ಬೇಡಿಕೆಯ ಪೂರೈಕೆಯಲ್ಲಿ ರಾಜ್ಯದ ಪಾಲು ಶೇ.65: ಸಿಎಂ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL