No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ರಾತ್ಯಕ್ಷಿಕೆ ಪ್ರದರ್ಶನ ಮೇಳಗಳಿಂದ ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಚಾಕಚಕ್ಯತೆ ವೃದ್ಧಿ

ಒಂದು ದಿನದ ಪ್ರಾಜೆಕ್ಟ್ ಎಕ್ಸಿಬಿಷನ್ ಸಮ್ಮೇಳನಕ್ಕೆ ಪಿಇಎಸ್‌ಟಿಎಂ ಪ್ರಾಂಶುಪಾಲ ಡಾ. ಯುವರಾಜು ಚಾಲನೆ

kalpa News by kalpa News
June 3, 2024
in ಶಿವಮೊಗ್ಗ
0
ಪ್ರಾತ್ಯಕ್ಷಿಕೆ ಪ್ರದರ್ಶನ ಮೇಳಗಳಿಂದ ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಚಾಕಚಕ್ಯತೆ ವೃದ್ಧಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಇಂಜಿನಿಯರಿಂಗ್ ಕ್ಷೇತ್ರವು ತಂದೊಡ್ಡುವ ನವನವೀನ ಪ್ರಾಯೋಗಿಕ ಸವಾಲುಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಪರಿಹರಿಸುವಲ್ಲಿ ಈ ಬಗೆಯ ಪ್ರಾತ್ಯಕ್ಷಿಕೆ ಪ್ರದರ್ಶನ ಶಿಬಿರಗಳು ಉತ್ತಮವಾದ ವೇದಿಕೆಯನ್ನು ನಿರ್ಮಿಸಲಿವೆ ಎಂದು ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಯುವರಾಜು

ಪಿಇಎಸ್‌ಟಿಎಂನ ರಸಾಯನಶಾಸ್ತ್ರ ವಿಭಾಗದ ಮುಂದಾಳತ್ವದಲ್ಲಿ ಆಯೋಜಿಸಲಾಗಿದ್ದ ಒಂದು ದಿನದ ಪ್ರಾಜೆಕ್ಟ್ ಎಕ್ಸಿಬಿಷನ್ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಸಕ್ತ ಔದ್ಯೋಗಿಕ ಹಾಗೂ ಕಾರ್ಯಕ್ಷೇತ್ರದಲ್ಲಿ ಸೈದ್ಧಾಂತಿಕ ಜ್ಞಾನಾರ್ಜನೆಯ ಜೊತೆ ಜೊತೆಗೆ ಪ್ರಾಯೋಗಿಕವಾಗಿ ಪ್ರಯೋಗಗಳನ್ನು ಮಾಡುವ ಮೂಲಕ ಲಭಿಸುವ ಜ್ಞಾನವನ್ನು ಒರೆಗೆ ಹಚ್ಚಿ ಅದ್ವಿತೀಯವಾದದನ್ನು ಸಾಧಿಸಲು ಈ ಮೂಲಕ ಕಾರ್ಯತತ್ಪರರಾಗಬೇಕೆಂದು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ನುಡಿದರು.

ಪ್ರಚಲಿತದಲ್ಲಿರುವ ತಾಂತ್ರಿಕ, ಔದ್ಯೋಗಿಕ ಹಾಗೂ ತಂತ್ರಜ್ಞಾನ ಕ್ಷೇತ್ರದ ಅದ್ವಿತೀಯ ಸಂಶೋಧನಾತ್ಮಕ ಚಟುವಟಿಕೆಗಳ ಫಲಶ್ರುತಿಯನ್ನು ಸರಿಯಾಗಿ ಅರ್ಥೈಸಿಕೊಳ್ಳುವುದರ ಮೂಲಕ ತಮ್ಮ ದಿನನಿತ್ಯದ ಚಟುವಟಿಕೆಗಳಲ್ಲಿ ಅವುಗಳ ಉಪಯುಕ್ತತೆಯನ್ನು ಅರಿತುಕೊಳ್ಳುವಲ್ಲಿ ಪ್ರಯತ್ನಿಸಬೇಕೆಂದು ಸೂಚ್ಯವಾಗಿ ತಿಳಿಸಿದರು.
ಈ ಬಗೆಯ ಪ್ರಾತ್ಯಕ್ಷಿಕೆ ಪ್ರದರ್ಶನ ಮೇಳಗಳು ವಿದ್ಯಾರ್ಥಿಗಳ ಮನಸ್ಸಿನಲ್ಲಿ ಪ್ರಾಯೋಗಿಕ ಚಾಕಚಕ್ಯತೆಗಳನ್ನು ವೃದ್ಧಿಸಿಕೊಳ್ಳುವಲ್ಲಿ ಒಂದು ಭದ್ರ ಅಡಿಪಾಯವನ್ನು ಸೃಷ್ಟಿಸಲಿವೆ ಎಂಬುದರಲ್ಲಿ ಯಾವುದೇ ಅತಿಶಯೋಕ್ತಿ ಇಲ್ಲ ಎಂದು ತಮ್ಮ ಅಭಿಪ್ರಾಯವನ್ನು ನೀಡಿದರು.

Also read: ಖಾಸಗಿ ಬಸ್ ಪಲ್ಟಿ: ಎರಡು ಸಾವು, ಏಳು ಜನರಿಗೆ ಗಂಭೀರ ಗಾಯ

ಇಂಜಿನಿಯರಿಂಗ್ ಕ್ಷೇತ್ರದ ವಿವಿಧ ವಿಭಾಗಗಳಲ್ಲಿ ಅತ್ಯವಶ್ಯಕವಿರುವ ಪ್ರಾಯೋಗಿಕ ಮಟ್ಟದ ಸವಾಲುಗಳನ್ನು ಅತ್ಯಂತ ಚಾಣಾಕ್ಷತನದಿಂದ ಹಿಮ್ಮೆಟ್ಟಿಸುವಲ್ಲಿ ಭೌತಶಾಸ್ತ್ರ ರಸಾಯನಶಾಸ್ತ್ರ ಹಾಗೂ ಗಣಿತಶಾಸ್ತ್ರದ ಜೊತೆ ಜೊತೆಗೆ ಕಂಪ್ಯೂಟರ್ ಸೈನ್ಸ್, ಇನ್ಫರ್ಮೇಷನ್ ಸೈನ್ಸ್, ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಮತ್ತು ಮೆಷಿನ್ ಲನಿರ್ಂಗ್, ಮೆಕ್ಯಾನಿಕಲ್, ಸಿವಿಲ್, ಎಲೆಕ್ಟ್ರಾನಿಕ್ಸ್ ಮತ್ತು ಎಲೆಕ್ಟ್ರಿಕಲ್ ಕ್ಷೇತ್ರಗಳ ಹಲವಾರು ಮೂಲಭೂತ ಪರಿಕಲ್ಪನೆಗಳು ಸಹಾಯ ಹಸ್ತವನ್ನು ಚಾಚುವುದರಲ್ಲಿ ತಮ್ಮದೇ ಆದ ಪ್ರಸ್ತುತತೆಯನ್ನು ಪಡೆದುಕೊಂಡಿವೆ ಎಂದು ಪಿಇಎಸ್‍ಐಟಿಎಂನ ಇನ್ಫರ್ಮೇಷನ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನ ಕುಮಾರ್ ಹೆಚ್ ಆರ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಬೇಸಿಕ್ ಸೈನ್ಸ್ ವಿಭಾಗದ ಮುಖ್ಯಸ್ಥ ಡಾ. ಅವೀಶ್ ಎಸ್ ಟಿ ಈ ರೀತಿಯ ಪ್ರಾತ್ಯಕ್ಷಿಕೆ ಪ್ರದರ್ಶನ ಮೇಳಗಳು ವಿದ್ಯಾರ್ಥಿಗಳಲ್ಲಿ ಹೊಸ ಹುರುಪಿನೊಂದಿಗೆ ಅತ್ಯುನ್ನತವಾದದ್ದನ್ನು ಸಾಧಿಸುವಲ್ಲಿ ಒಂದು ಭದ್ರ ಬುನಾದಿಯನ್ನು ರೂಪಿಸಲಿವೆ ಎಂದು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮೋಹನ್ ಕುಮಾರ್, ಪ್ರಾಧ್ಯಾಪಕ ರೋಹಿತ್ ಮನೋಹರ್, ಅಧ್ಯಾಪಕ ಸಿಬ್ಬಂದಿ ಡಾ. ಶಶಿಕುಮಾರ್ ಮತ್ತು ಅಶ್ವಿನಿ ಹೇಳವಾರ್ ಉಪಯುಕ್ತ ಮಾಹಿತಿಗಳನ್ನು ನೀಡಿ ಪ್ರದರ್ಶನ ಮೇಳವು ಹೆಚ್ಚಿನ ಯಶಸ್ಸಿನೊಂದಿಗೆ ಸಂಪನ್ನಗೊಳ್ಳುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದರು. ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮೋಹನ್ ಕುಮಾರ್ ಸ್ವಾಗತಿಸಿ, ವಿಭಾಗದ ಅಧ್ಯಾಪಕ ಸಿಬ್ಬಂದಿ ರೋಹಿತ್ ಮನೋಹರ್ ವಂದಿಸಿದರು. ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳು ಒಟ್ಟಾರೆಯಾಗಿ ಐವತ್ತಕ್ಕೂ ಹೆಚ್ಚು ಪ್ರಾತ್ಯಕ್ಷಿಕೆಗಳನ್ನು ಪ್ರಾಜೆಕ್ಟ್ ಎಕ್ಸಿಬಿಷನ್ ಸಮ್ಮೇಳನದಲ್ಲಿ ಪ್ರದರ್ಶಿಸಿದರು. ಪಿಇಎಸ್‍ಐಟಿಎಂನ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಖಾಸಗಿ ಬಸ್ ಪಲ್ಟಿ: ಎರಡು ಸಾವು, ಏಳು ಜನರಿಗೆ ಗಂಭೀರ ಗಾಯ

Next Post

ಯಾವ ಸಮೀಕ್ಷೆಗಳು ಬೇಡ, ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ: ಕೆ.ಎಸ್.ಈಶ್ವರಪ್ಪ

kalpa News

kalpa News

Next Post
ಯಾವ ಸಮೀಕ್ಷೆಗಳು ಬೇಡ, ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ: ಕೆ.ಎಸ್.ಈಶ್ವರಪ್ಪ

ಯಾವ ಸಮೀಕ್ಷೆಗಳು ಬೇಡ, ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ: ಕೆ.ಎಸ್.ಈಶ್ವರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL