ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಉಪ್ಪು ತಿಂದವರು ನೀರು ಕುಡಿಯಲೇಬೇಕು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ #H D Kumaraswamy ಹೇಳಿದರು.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ #Prajwal Revanna ಅವರಿಗೆ ಸಂಬಂಧಿಸಿದೆನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ ತಪ್ಪು ಯಾರು ಮಾಡಿದರೂ ಅದು ತಪ್ಪೇಆಗುತ್ತದೆ. ಸರ್ಕಾರ ಈಗಾಗಲೇ ಎಸ್‍ಐಟಿ ತನಿಖೆಗೆ ಒಪ್ಪಿಸಿದೆ. ಅದರ ವರದಿ ಬಂದ ನಂತರ ಸತ್ಯ ಹೊರಬೀಳುತ್ತದೆ. ಇದರಲ್ಲಿ ನಮ್ಮ ಪಾತ್ರ ಏನೂ ಇರುವುದಿಲ್ಲ ಎಂದರು.

ನಾನು ಮುಖ್ಯಮಂತ್ರಿಯಾಗಿದ್ದಾಗ ಮತ್ತು ದೇವೆಗೌಡರು ಪ್ರಧಾನಿಯಾಗಿದ್ದಾಗಲೂ ಸಾವಿರಾರೂ ಜನ ಹೆಣ್ಣುಮಕ್ಕಳು ತಮ್ಮ ಕಷ್ಟ, ಸಮಸ್ಯೆಗಳಿಗೆ ಬಂದಿದ್ದಾರೆ. ಅವರನ್ನು ಅತ್ಯಂತ ಗೌರವದಿಂದ ಕಂಡಿದ್ದೇವೆ. ನನ್ನ ಮತ್ತು ದೇವೇಗೌಡರ ಕುಟುಂಬವೇ ಬೇರೆ, ರೇವಣ್ಣ ಅವರ ಕುಟುಂಬವೇ ಬೇರೆ. ಪೆನ್ ಡ್ರೈವ್ ಪ್ರಕರಣದಿಂದ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ತನಿಖೆ ಪಾರದರ್ಶಕವಾಗಿ ನಡೆಯಲಿ, ಇದರಲ್ಲಿ ರಾಜಕೀಯ ಸಂಚು ಇರುವುದೂ ಕೂಡ ಬಯಲಾಗಲಿದೆ ಎಂದು ಕುಮಾರಸ್ವಾಮಿ ಹೇಳಿದರು.

Also read: ನಿಯಂತ್ರಣ ತಪ್ಪಿದ ಹೆಲಿಕಾಪ್ಟರ್ | ಕೂದಲೆಳೆ ಅಂತರದಲ್ಲಿ ಪಾರಾದ ಅಮಿತ್ ಶಾ | ವೀಡಿಯೋ ನೋಡಿ
ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ, ಬರ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೇಂದ್ರದ ಮೇಲೆ ವಿನಾಕಾರಣ ಗೂಬೆ ಕೂರಿಸಿದೆ. ಕೇಂದ್ರದ ಯಾವ ಅನುದಾನಗಳೇ ಆಗಲಿ ಹಣಕಾಸು ಆಯೋಗದ ನಿರ್ದೇಶನದಂತೆ ಮಾಡಲಾಗುತ್ತದೆ ಅಷ್ಟೇ. ಅದಕ್ಕೆ ತಕ್ಕಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಹಣ ಬಿಡುಗಡೆ ಮಾಡಿದೆ. ಕೇಂದ್ರದ ಹಣದ ಜೊತೆಗೆ ರಾಜ್ಯ ಸರ್ಕಾರವೂ ಹೆಚ್ಚಿನ ಹಣ ಬಿಡುಗಡೆ ಮಾಡಿ ಬರ ನಿರ್ವಹಣೆಯನ್ನು ಸಮರ್ಥವಾಗಿ ನಿರ್ವಹಿಸಬೇಕು ಎಂದರು.

ಮೊದಲ ಹಂತದ ಚುನಾವಣೆ ಮುಗಿದಿದೆ. 14 ಕ್ಷೇತ್ರಗಳ ಪೈಕಿ 12ರಲ್ಲಂತೂ ನಾವು ಗೆದ್ದೇ ಗೆಲ್ಲುತ್ತೇವೆ. ಈಗ ಎರಡನೇ ಹಂತದ ಚುನಾವಣೆಯಲ್ಲಿ ಪ್ರಚಾರಕ್ಕಾಗಿ ನಾನು ಬಂದಿದ್ದೇನೆ. ನಾಲ್ಕೈದು ದೊಡ್ಡ ಸಭೆಗಳಲ್ಲಿ ಭಾಗವಹಿಸುತ್ತೇನೆ. ಮೈತ್ರಿ ಪಕ್ಷದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ಗೆದ್ದೇ ಗೆಲ್ಲುತ್ತಾರೆ. ಈ ದೇಶಕ್ಕೆ ಮೋದಿ ಪ್ರಧಾನಿಯಾಗುವುದು ಅನಿವಾರ್ಯ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post